ಸೋಮವಾರಪೇಟೆ, ಅ. ೨೧: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ಆರೋಪಿ ವಕೀಲ ರಾಕೇಶ್ ಕಿಶೋರ್ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಕೊಡಗು ಜಿಲ್ಲಾ ಮಾನವ ಬಂಧುತ್ವ ವೇದಿಕೆ ಹಾಗು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ನಾಗವಾರ ಬಣ)ಯ ಪದಾಧಿಕಾರಿಗಳು ರಾಜ್ಯಪಾಲರಿಗೆ ಮನವಿ ಪತ್ರವನ್ನು ತಹಸೀಲ್ದಾರ್ ಮೂಲಕ ಸಲ್ಲಿಸಿದರು.

ಇಂತಹ ಸಂವಿಧಾನ ವಿರೋಧಿ ಕೃತ್ಯದ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿರುವಾಗಲೇ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಗ್ರಾಮದಲ್ಲಿ ಪರಿಶಿಷ್ಠ ಜಾತಿಯ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಹಾಗೂ ಕೊಲೆ ನಡೆದಿದೆ. ಅಲ್ಲದೇ ಪರಿಶಿಷ್ಟ ಜಾತಿಯ ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ಜೀವ ಬೆದರಿಕೆ ಹಾಕಲಾಗುತ್ತಿದೆ. ಮನೆಗೆ ನುಗ್ಗಿ ಹೊಡೆಯುತ್ತೇವೆ ಎಂದು ಕೊಲೆ ಬೆದರಿಕೆ ಹಾಕುತ್ತಿದ್ದಾರೆ. ದಲಿತರ ಮೇಲಿನ ದೌರ್ಜನ್ಯ ತಡೆಯಲು ಕೂಡಲೆ ಕ್ರಮಕೈಗೊಳ್ಳಬೇಕು ಎಂದು ವೇದಿಕೆಯ ಸಂಚಾಲಕ ಜೆ.ಎಲ್.ಜನಾರ್ಧನ್, ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಎಂ.ಎಸ್.ವೀರೇAದ್ರ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.