ನಾಪೋಕ್ಲು, ಅ. ೨೧ : ಇಲ್ಲಿಯ ನಾಲ್ಕುನಾಡು ಆಟೋ ಚಾಲಕರ ಮತ್ತು ಮಾಲೀಕರ ಸಂಘ ಹಾಗೂ ವಾಹನ ಚಾಲಕರ ಸಂಘದ ವತಿಯಿಂದ ಇತ್ತೀಚೆಗೆ ಸ್ಥಳೀಯ ಸಂತೆ ಮೈದಾನದಲ್ಲಿ ಆಯೋಜಿಸಲಾಗಿದ್ದ ೩೩ನೇ ವರ್ಷದ ಆಯುಧ ಪೂಜಾ ಕಾರ್ಯಕ್ರಮದಲ್ಲಿ ಸಂಘದ ಹಿರಿಯ ಆಟೋ ಚಾಲಕರನ್ನು ಸನ್ಮಾನಿಸಿ, ಗೌರವಿಸಲಾಯಿತು.

ನಾಲ್ಕುನಾಡು ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಟಿ.ಪಿ ಸುಕುಮಾರ್ ಅಧ್ಯಕ್ಷತೆ ವಹಿಸಿದ್ದ ಸಭಾ ಕಾರ್ಯಕ್ರಮದಲ್ಲಿ ಸಂಘದ ಹಿರಿಯ ಆಟೋ ಚಾಲಕರಾದ ವೆಂಕಪ್ಪ, ಅಂತೋನಿ, ಅಬ್ದುಲ್ ರಜಾಕ್ (ಗುಂಡು) ಅವರುಗಳನ್ನು ಸಂಘದ ಪರವಾಗಿ ವೇದಿಕೆಯಲ್ಲಿದ್ದ ಗಣ್ಯರು ಸನ್ಮಾನಿಸಿ ಗೌರವಿಸಿದರು.

ಸಂಘದ ಉಪಾಧ್ಯಕ್ಷರು ರಾಶಿದ್, ಕಾರ್ಯದರ್ಶಿ ಸತೀಶ್, ಖಜಾಂಚಿ ಚೇತನ್, ನಿರ್ದೇಶಕರು ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.