ಮಡಿಕೇರಿ, ಅ. ೨೦: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಕೊಡಗು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆ ಹಾಗೂ ಆರ್.ಆರ್.ಸಿ. ಘಟಕದ ವತಿಯಿಂದ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಹೆಚ್.ಐ.ವಿ. ಏಡ್ಸ್ ಕುರಿತು ಬೀದಿ ನಾಟಕ/ ಫ್ಲ್ಯಾಶ್ ಮಾಬ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಸ್ವಯಂಸೇವಕರು ನೆರೆದಿದ್ದ ಜನರನ್ನು ಒಗ್ಗೂಡಿಸಿ ಹೆಚ್ಐವಿ ಏಡ್ಸ್, ಅದರ ಹರಡುವಿಕೆ, ಅದರ ಪರೀಕ್ಷೆ ಮತ್ತು ಚಿಕಿತ್ಸೆ, ಸೇವೆಗಳು ಹಾಗೂ ಸರ್ಕಾರವು ಹಮ್ಮಿಕೊಂಡಿರುವ ವಿಶೇಷ ಕಾರ್ಯಕ್ರಮಗಳ ಬಗ್ಗೆ ನಾಟಕದ ಮೂಲಕ ಕ್ರಿಯಾತ್ಮಕವಾಗಿ ಪ್ರದರ್ಶಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆಸ್ಪತ್ರೆ ಮಡಿಕೇರಿಯ ಆಪ್ತ ಸಮಾಲೋಚಕಿ ಅನಿತಾ ಕುಮಾರಿ ಉಪಸ್ಥಿತರಿದ್ದು ನಾಟಕವನ್ನು ವೀಕ್ಷಿಸಿದರು. ಎನ್.ಎಸ್.ಎಸ್. ಯೋಜನಾಧಿಕಾರಿಗಳಾದ ಡಾ. ಶೈಲಶ್ರೀ ಕೆ., ಅಲೋಕ್ ಬಿಜೈ, ವಿದ್ಯಾರ್ಥಿ ನಾಯಕರು ಹಾಗೂ ಸ್ವಯಂಸೇವಕರು ಭಾಗವಹಿಸಿದ್ದರು.
ಸ್ವಯಂಸೇವಕರು ಭಿತ್ತಿಪತ್ರಗಳು ಹಾಗೂ ಪೋಸ್ಟರ್ಗಳೊಂದಿಗೆ ಜಾಗೃತಿ ಅಭಿಯಾನವನ್ನು ಹಮ್ಮಿಕೊಂಡರು.