ಸಿದ್ದಾಪುರ, ಅ. ೨೧: ಅರೆಕಾಡು ಗ್ರಾಮದಲ್ಲಿ ಇರುವ ಶ್ರೀ ಚಾಮುಂಡೇಶ್ವರಿ ಐದ್ರೋಡಮ್ಮ ದೇವಾಲಯದ ೧೭ನೇಯ ವರ್ಷದ ದೀಪಾವಳಿ ವಾರ್ಷಿಕೋತ್ಸವ ವಿವಿಧ ಪೂಜಾ ಕಾರ್ಯಕ್ರಮಗಳೊಂದಿಗೆ ಎರಡು ದಿನಗಳ ಕಾಲ ನಡೆಯಿತು.

ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ನೆಲ್ಲಮಕ್ಕಡ ಪ್ರಕಾಶ್ ಕುಶಾಲಪ್ಪ, ಉಪಾಧ್ಯಕ್ಷ ಸುರೇಶ್, ಕಾರ್ಯದರ್ಶಿ ಚಂದ್ರ, ಖಜಾಂಜಿ ಲೋಕೇಶ್, ಪ್ರಮುಖರಾದ ಅಪ್ರು ರವೀಂದ್ರ, ಪ್ರಭು ಶೇಖರ್ ಹಾಗೂ ದೇವಾಲಯದ ಆಡಳಿತ ಮಂಡಳಿಯ ಪದಾಧಿಕಾರಿಗಳು ಸದಸ್ಯರು ಹಾಜರಿದ್ದರು.