ಮಡಿಕೇರಿ, ಅ. ೨೩:-ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಆಶ್ರಯದೊಂದಿಗೆ ತಾ. ೩೧ ರಂದು ಬೆಳಗ್ಗೆ ೯.೩೦ ಗಂಟೆಗೆ ಗುಡ್ಡೆಮನೆ ಅಪ್ಪಯ್ಯ ಗೌಡರ ಸ್ಮಾರಕ ದಲ್ಲಿ ಸ್ವಾತಂತ್ರö್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣಾ ದಿನಾಚರಣೆ ಹಾಗೂ ಕೋಟೆ ಆವರಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್ ಭೋಸರಾಜು, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ವಿಶ್ರಾಂತ ಪ್ರಾಂಶುಪಾಲರು, ಇತಿಹಾಸ ಪ್ರಾಧ್ಯಾಪಕ ನಂಗಾರು ನಿಂಗರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಮಂತರ್ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಸಂಸದ ಯದುವೀರ್ ಒಡೆಯರ್, ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್.ಅರುಣ್ ಮಾಚಯ್ಯ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ಅಧ್ಯಕ್ಷ ತೀತೀರ ಧರ್ಮಜ ಉತ್ತಪ್ಪ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಜಿ.ಮೋಹನ್ ದಾಸ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ವೈ.ರಾಜೇಶ್, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ಕೇಶವ ಕಾಮತ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಕೊಡಗು ಜಿ.ಪಂ.ಸಿಇಒ ಆನಂದ ಪ್ರಕಾಶ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್, ಕೊಡಗು ಗೌಡ ಸಮಾಜಗಳ ಒಕ್ಕೂಟಗಳ ಅಧ್ಯಕ್ಷ ಆನಂದ ಕರಂದ್ಲಾಜೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಕೊಲ್ಯದ ಗಿರೀಶ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಪಿ.ಸಿ.ಜಯರಾಮ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಲಕ್ಷಿö್ಮÃ ನಾರಾಯಣ ಕಜೆಗದ್ದೆ ಇತರರು ಪಾಲ್ಗೊಳ್ಳಲಿದ್ದಾರೆ