ಕೂಡಿಗೆ, ಅ. ೨೩: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿ ಕ್ಷೇತ್ರದ ಆವರಣದಲ್ಲಿರುವ ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ಅದನ್ನು ಮೇಲ್ದರ್ಜೆಗೆ ಏರಿಸುವಂತೆ ಕೂಡಿಗೆ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಈ ಭಾಗದ ಕೈಗಾರಿಕಾ ಕೇಂದ್ರಗಳು ಅನೇಕ ಶಿಕ್ಷಣ ಸಂಸ್ಥೆಗಳು, ಕೂಡಿಗೆ ಡೈರಿ, ಕೃಷಿ ತರಬೇತಿ ಕೇಂದ್ರಗಳ ಕಾರ್ಮಿಕರು, ವಿದ್ಯಾರ್ಥಿಗಳು ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಚಿಕಿತ್ಸೆಗಾಗಿ ಅವಲಂಬಿಸಿದ್ದಾರೆ. ಆದ್ದರಿಂದ ಸಂಬAಧಿಸಿದ ಆರೋಗ್ಯ ಇಲಾಖೆ.
ಈ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಬೇಕೆಂಬುದು ಈ ವ್ಯಾಪ್ತಿಯ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರ ಒತ್ತಾಯವಾಗಿದೆ.