ಮಡಿಕೇರಿ, ಅ.೨೩ : ೨೦೨೪- ೨೫ನೇ ಸಾಲಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಪ್ರೊಫೆಸರ್‌ಗಳಾಗಿ ಬಡ್ತಿ ಹೊಂದಿದ ೧೦ ಮಂದಿ ಬೋಧಕ ಸಿಬ್ಬಂದಿಗಳಿಗೆ ಅ.೨೫ರಂದು ದಲಿತ ಸಂಘರ್ಷ ಸಮಿತಿಯ ವತಿಯಿಂದ ಸನ್ಮಾನ ಸಮಾರಂಭ ನಡೆಯಲಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್ ಅವರು ಬೆಳಿಗ್ಗೆ ೧೦.೩೦ ಗಂಟೆಗೆ ಫೀ.ಮಾ. ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ನಡೆಯುವ ಸಮಾರಂಭವನ್ನು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಅಶೋಕ ಸಂಗಪ್ಪ ಅಲೋರ ಅವರು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ದಲಿತ ಸಂಘರ್ಷ ಸಮಿತಿಯ ಮಡಿಕೇರಿ ತಾಲ್ಲೂಕು ಸಂಚಾಲಕ ದೀಪಕ್ ಪೊನ್ನಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಕ್ಕಳ ತಜ್ಞ ಡಾ. ನವೀನ್ ಬಿ.ಸಿ ಅವರು ‘ಪದವಿಯ ನಂತರ ಉದ್ಯೋಗಾವಕಾಶಗಳು ಹಾಗೂ ಉನ್ನತ ವಿದ್ಯಾಭ್ಯಾಸ ಮಾಡಿದರೆ ಸಮಾಜದಲ್ಲಿ ಆಗುವ ಬದಲಾವಣೆಗಳು’ ವಿಷಯದ ಕುರಿತು ಮುಖ್ಯ ಭಾಷಣ ಮಾಡಲಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾಧ್ಯಕ್ಷ ಕೇಶವ ಕಾಮತ್ ಅವರು ಪ್ರೊಫೆಸರ್‌ಗಳನ್ನು ಸನ್ಮಾನಿಸಲಿದ್ದಾರೆ. ದಾನಿಗಳು ಮತ್ತು ಸಮಾಜ ಸೇವಕರಾದ ದಂಬೆಕೋಡಿ ಕವನ ಭೀಷ್ಮ ಹಾಗೂ ಬೆಂಗಳೂರಿನ ಲೀಡಿಂಗ್ ಎಡ್ಜ್ ಅಡ್ವರ್ ಟೈಸಿಂಗ್ ಇಂಡಿಯಾ ಪ್ರೆöÊವೇಟ್ ಲಿಮಿಟೆಡ್‌ನ ನಿರ್ದೇಶಕ ಪ್ರಸನ್ನ ಎಡಿಕೇರಿ ಅವರು ವಿದ್ಯಾರ್ಥಿಗಳನ್ನು ಸನ್ಮಾನಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಫೀ.ಮಾ. ಕೆ.ಎಂ. ಕಾರ್ಯಪ್ಪ ಕಾಲೇಜು ಪ್ರಾಂಶುಪಾಲ ಮೇಜರ್ ಪ್ರೊಫೆಸರ್ ರಾಘವ ಬಿ., ಸೆಸ್ಕ್ನ ಕೊಡಗು ಜಿಲ್ಲಾ ಕಾರ್ಯನಿರ್ವಾಹಕ ಅಭಿಯಂತರ ರಾಮಚಂದ್ರ ಎಂ., ಪ್ರಗತಿಪರ ಚಿಂತಕ ಇಸಾಕ್ ಖಾನ್, ದಾನಿಗಳು ಹಾಗೂ ಸಮಾಜ ಸೇವಕ ಪ್ರದೀಪ್ ಕರ್ಕೇರ, ದಲಿತ ಸಂಘರ್ಷ ಸಮಿತಿಯ ವಿಭಾಗೀಯ ಸಂಚಾಲಕ ಎನ್.ವೀರಭದ್ರಯ್ಯ ಹಾಗೂ ಪೊನ್ನಂಪೇಟೆ ಸಂಚಾಲಕ ಹೆಚ್.ಆರ್.ಜಗದೀಶ್ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.