ಶ್ರೀಮAಗಲ, ಅ. ೨೩: ಕೊಡವ ಸಮಾಜದ ಆಡಳಿತ ಮಂಡಳಿ, ಬೇರೆ ಬೇರೆ ಸಂಘ-ಸAಸ್ಥೆಗಳು, ಸಾಂಸ್ಕೃತಿಕ ಕಾರ್ಯಕ್ರಮ ನೀಡುತ್ತಿರುವ ಕಲಾವಿದರು, ದಾನಿಗಳು ಸೇರಿದಂತೆ ಎಲ್ಲರ ಸಹಕಾರದಿಂದ ಚಂಗ್ರಾAದಿ ಪತ್ತಲೋದಿ ಕಾರ್ಯಕ್ರಮ ಕಳೆದ ೯ ವರ್ಷಗಳಿಂದ ಉತ್ತಮವಾಗಿ ನಡೆಯುತ್ತಿದೆ. ಈ ಕಾರ್ಯಕ್ರಮದ ಮೂಲ ಪರಿಕಲ್ಪನೆಗೆ ಕಾರಣಕರ್ತರಾದವರನ್ನು ನಾವು ಮರೆಯುವಂತಿಲ್ಲ ಎಂದು ಟಿ. ಶೆಟ್ಟಿಗೇರಿ ಕೊಡವ ಸಮಾಜದ ಉಪಾಧ್ಯಕ್ಷ ಮಚ್ಚಮಾಡ ಸುಮಂತ್ ಅಭಿಪ್ರಾಯ ವ್ಯಕ್ತಪಡಿಸಿದರು.
ತಾವಳಗೇರಿ ಮೂಂದ್ನಾಡ್ ಕೊಡವ ಸಮಾಜದಲ್ಲಿ ನಡೆಯುತ್ತಿರುವ ಚಂಗ್ರಾAದಿ ಪತ್ತಲೋದಿ ೪ನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಕ್ಕಳನ್ನು ಹೊರ ಜಿಲ್ಲೆ, ರಾಜ್ಯ, ರಾಷ್ಟçಗಳಲ್ಲಿ ಓದಲು ಕಳುಹಿಸುವುದರ ಬದಲು ಮನೆಯ ಸಮೀಪದಲ್ಲಿರುವ ಶಾಲೆಗಳಿಗೆ ಮನೆಯಿಂದಲೇ ಕಳುಹಿಸುತ್ತಾ ವಿದ್ಯಾಭ್ಯಾಸದ ಜೊತೆಗೆ ಕೊಡವ ಸಂಸ್ಕೃತಿಯನ್ನು ಕಲಿಸುವುದು ಒಳ್ಳೆಯದು ಎಂದು ಕಿವಿಮಾತು ಹೇಳಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜೆ.ಸಿ. ವಿದ್ಯಾಸಂಸ್ಥೆಯ ಕಾರ್ಯದರ್ಶಿ ಮಚ್ಚಮಾಡ ಬೋಸು ಸುರೇಶ್ ಮಾತನಾಡಿ, ೯ ವರ್ಷಗಳಿಂದ ಇಂತಹ ಕಾರ್ಯಕ್ರಮ ಮಾಡುತ್ತಿರುವುದು ದೊಡ್ಡ ಸಾಹಸ. ಅವರಿಗೆ ನಾವೆಲ್ಲರೂ ಸಹಕಾರ ನೀಡಬೇಕು ಎಂದರು.
ಜೆ.ಸಿ. ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಕುಂಞAಗಡ ಸಿಂಧು ಬೋಪಯ್ಯ ಮಾತನಾಡಿ, ಶಾಲಾ ಮಕ್ಕಳು ಹಾಗೂ ಮಹಿಳೆಯರಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶನ ಮಾಡಲು ಇದು ಉತ್ತಮ ವೇದಿಕೆ. ಕೊಡವ ಭಾಷೆ, ಪದ್ಧತಿ, ಸಂಸ್ಕೃತಿ ಎಲ್ಲವೂ ವಿಶೇಷವಾದದ್ದು. ನಾವು ನಮ್ಮ ಭಾಷೆಯನ್ನು ಮರೆಯಬಾರದು ಎಂದರು.
ಖಾಸಗಿ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಸಂಘದ ಜಿಲ್ಲಾ ಕಾರ್ಯದರ್ಶಿ ಕೊಟ್ರಂಗಡ ತಿಮ್ಮಯ್ಯ ಮಾತನಾಡಿ, ಟಿ. ಶೆಟ್ಟಿಗೇರಿ ಕೊಡವ ಸಮಾಜದಂತೆ ಕೊಡವ ಸಂಸ್ಕೃತಿಗೆ ಹೆಚ್ಚು ಒತ್ತು ನೀಡುವಂತಹ ಹತ್ತು ದಿನದ ಕಾರ್ಯಕ್ರಮವನ್ನು ಯಾರೂ ಮಾಡುತ್ತಿಲ್ಲ. ಇಂತಹ ಕಾರ್ಯಕ್ರಮ ಆರಂಭಿಸಿ ೯ ವರ್ಷಗಳಿಂದ ನಡೆಸುತ್ತಿರುವುದು ದೊಡ್ಡ ಸಾಧನೆ ಎಂದರು.
ಜೆ.ಸಿ. ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ನೂರೇರ ಸತೀಶ್ ಮಾತನಾಡಿ, ಇಂತಹ ಕಾರ್ಯಕ್ರಮದಿಂದ ಕೊಡವಾಭಿಮಾನ ಬೆಳೆಯುತ್ತದೆ. ಆ ಮೂಲಕ ನಮ್ಮ ಸಂಸ್ಕೃತಿ ಉಳಿಯುತ್ತದೆ ಎಂದರು. ಈ ಸಂದರ್ಭ ನಡೆದ ಜೆ.ಸಿ. ವಿದ್ಯಾಸಂಸ್ಥೆ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ರಂಜಿಸಿತು.