ಸೋಮವಾರಪೇಟೆ, ಅ. ೨೩: ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ಸಭೆ, ಅಧ್ಯಕ್ಷ ಎಸ್.ಡಿ. ವಿಜೇತ್ ಅಧ್ಯಕ್ಷತೆಯಲ್ಲಿ ಸಾಹಿತ್ಯ ಭವನದಲ್ಲಿ ನಡೆಯಿತು.
ಪರಿಷತ್ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ನಡೆಸುವಂತೆ ನಿರ್ಧರಿಸಲಾಯಿತು. ಶಾಲಾ, ಕಾಲೇಜು ಮಕ್ಕಳಿಗೆ ಚಿತ್ರಬಿಡಿಸುವ ಸ್ಪರ್ಧೆ, ಕ್ವಿಜ್ ಸೇರಿದಂತೆ ವಿವಿಧ ಸ್ಪರ್ಧೆಗಳು ಹಾಗು ಕನ್ನಡ ಸಾಹಿತ್ಯ ಕ್ಷೇತ್ರದ ಸಾಧಕರನ್ನು ಸನ್ಮಾನಿಸುವಂತೆ ತೀರ್ಮಾನಿಸಲಾಯಿತು.
ಕಸಾಪ ಮಾಜಿ ಅಧ್ಯಕ್ಷರಾದ ಜೆ.ಸಿ. ಶೇಖರ್, ಎಚ್.ಜೆ. ಜವರಪ್ಪ, ಗೌರವ ಕಾರ್ಯದರ್ಶಿಗಳಾದ ಜ್ಯೋತಿ ಅರುಣ್, ಎ.ಪಿ. ವೀರರಾಜು, ಜಿಲ್ಲಾ ಕಾರ್ಯದರ್ಶಿ ಜಲಜಾ ಶೇಖರ್ ಇದ್ದರು.