ಮಡಿಕೇರಿ, ಅ. ೨೪: ಕೊಡಗು ಜಿಲ್ಲೆಯ ವಿವಿಧೆಡೆ ಬುಧವಾರ ಸಂಜೆ ಸುರಿದ ಧಾರಾಕಾರ ಮಳೆಯಿಂದಾಗಿ ಹಲವೆಡೆ ಅನಾಹುತಗಳು ಸಂಭವಿಸಿವೆ.

ಮಡಿಕೇರಿ ತಾಲೂಕಿನ ಹುಲಿತಾಳ ಗ್ರಾಮದಲ್ಲಿ ಎಚ್.ಟಿ. ಜಾನಕಿ ಎಂಬವರ ಮನೆಯ ಗೋಡೆ ಕುಸಿದು ಭಾಗಶಃ ಹಾನಿಯಾಗಿದೆ. ರಾತ್ರಿ ಸುಮಾರು ೮.೩೦ರ ವೇಳೆಗೆ ಮನೆಯ ಮುಂಭಾಗದ ಕೋಣೆಯ ಗೋಡೆ ಕುಸಿದಿದೆ. ಅದೃಷ್ಟವಶಾತ್ ಆ ವೇಳೆ ಮನೆಯಲ್ಲಿ ಎಲ್ಲರೂ ಇದ್ದರೂ ಅಪಾಯದಿಂದ ಪಾರಾಗಿದ್ದಾರೆ.

ಮನೆಯೊಳಗಿನ ವಸ್ತುಗಳು ಜಖಂಗೊAಡಿದ್ದು, ಉಳಿದ ಕೋಣೆಗಳ ಗೋಡೆಗಳು ಬಿರುಕುಬಿಟ್ಟಿವೆ ಎಂದು ಜಾನಕಿಯವರ ಪುತ್ರ ಹರೀಶ್ ತಿಳಿಸಿದ್ದಾರೆ. ಸ್ಥಳೀಯ ಪಂಚಾಯಿತಿ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

-ಅಶೋಕ್, ಮಡಿಕೇರಿ