ಸಿದ್ದಾಪುರ, ಅ. ೨೪ : ತ್ಯಾಜ್ಯಗಳನ್ನು ವಾಹನದಲ್ಲಿ ತುಂಬಿಸಿ ಸಿದ್ದಾಪುರದ ಮಾರುಕಟ್ಟೆಯಲ್ಲಿ ಸುರಿಯುತ್ತಿರುವುದನ್ನು ಕಂಡ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹುಸೈನ್ ವಾಹನವನ್ನು ತಡೆದು ತರಾಟೆಗೆ ತೆಗೆದುಕೊಂಡರು.

ಸಿದ್ದಾಪುರ ಪಟ್ಟಣ ವ್ಯಾಪ್ತಿಯ ಕಸ ತ್ಯಾಜ್ಯಗಳನ್ನು ಗ್ರಾಮ ಪಂಚಾಯಿತಿಯು ಬಾಡಿಗೆ ವಾಹನದಲ್ಲಿ ತುಂಬಿಸಿಕೊAಡು ಸಿದ್ದಾಪುರದ ಜನವಸತಿ ಪ್ರದೇಶದ ಮಾರುಕಟ್ಟೆಯಲ್ಲಿ ಸುರಿಯುತ್ತಿರುವುದನ್ನು ಗಮನಿಸಿದ ಸಿದ್ದಾಪುರದ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಎ.ಎಸ್. ಹುಸೇನ್ ವಾಹನ ತಡೆದರು. ಬಳಿಕ ಸ್ಥಳಕ್ಕೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಹಾಗೂ ಸದಸ್ಯರುಗಳು ಆಗಮಿಸಿದರು.

ಜನವಸತಿ ಪ್ರದೇಶದಲ್ಲಿ ಕಸ ಸುರಿಯುತ್ತಿರುವ ಬಗ್ಗೆ ಪ್ರಶ್ನಿಸಿದ ಹುಸೇನ್ ಈ ಭಾಗದಲ್ಲಿ ಈ ಹಿಂದೆ ಸಾಂಕ್ರಾಮಿಕ ರೋಗ ಹರಡಿ ಇಲ್ಲಿನ ನಿವಾಸಿಗಳು ಸಮಸ್ಯೆಗೆ ಸಿಲುಕಿಕೊಂಡಿದ್ದರು. ಇದರ ಅರಿವು ಇದ್ದರೂ ಕೂಡ ಗ್ರಾಮ ಪಂಚಾಯಿತಿ ನಿರ್ಲಕ್ಷö್ಯ ವಹಿಸಿ ಅಸಡ್ಡೆಯಿಂದ ವರ್ತಿಸುತ್ತಿದೆ ಎಂದು ಹುಸೈನ್ ಅಕ್ರೋಶ ವ್ಯಕ್ತಪಡಿಸಿದರು. ಸಿದ್ದಾಪುರದ ಕಸ ವಿಲೇವಾರಿಗೆ ಸೂಕ್ತ ಜಾಗವನ್ನು ಗುರುತಿಸಿದೆ ಗ್ರಾಮ ಪಂಚಾಯಿತಿ ಕಸವಿಲೇವಾರಿ ನೆಪದಲ್ಲಿ ಲಕ್ಷಾಂತರ ರೂಪಾಯಿಗಳನ್ನು ದುರುಪಯೋಗ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಗ್ರಾಮ ಪಂಚಾಯಿತಿಗೆ ಕಸವಿಲೇವಾರಿ ಮಾಡಲು ಎರಡು ವಾಹನಗಳಿದ್ದರೂ ಕೂಡ ಬಾಡಿಗೆ ವಾಹನದಲ್ಲಿ ಕಸ ತ್ಯಾಜ್ಯಗಳನ್ನು ಚೀಲದಲ್ಲಿ ತುಂಬಿ ವಿಲೇವಾರಿ ಮಾಡುತ್ತಿರುವುದು ಕಂಡುಬAದಿದೆ ಎಂದು ದೂರಿದರು. ಕೂಡಲೇ ಪಟ್ಟಣ ವ್ಯಾಪ್ತಿಯ ಕಸವಿಲೇವಾರಿ ಮಾಡಲು ಸೂಕ್ತ ಜಾಗವನ್ನು ಗುರುತಿಸಿ ಸಮಸ್ಯೆಯನ್ನು ಬಗೆಹರಿಸದಿದ್ದಲ್ಲಿ ಸಾರ್ವಜನಿಕರ ಸಹಕಾರದಿಂದ ಪಂಚಾಯಿತಿ ವಿರುದ್ಧ ಹೋರಾಟ ಮಾಡಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ.