ಮಡಿಕೇರಿ,ಅ.೨೪: ಮಡಿಕೇರಿಯ ವಿಜಯನಗರ ಬಡಾವಣೆಯಲ್ಲಿರುವ ಶ್ರೀ ವಿಜಯ ವಿನಾಯಕ ದೇವಾಲಯದ ೨೭ನೇ ವಾರ್ಷಿಕೋತ್ಸವ ಶ್ರದ್ಧಾ ಭಕ್ತಿಯಿಂದ ನೆರವೇರಿತು.
ಉತ್ಸವದ ಅಂಗವಾಗಿ ನಿನ್ನೆ ಸಂಜೆಯಿAದಲೇ ವಿವಿಧ ಪೂಜಾ ವಿಧಿ ವಿಧಾನಗಳು ನಡೆದು ಇಂದು ಬೆಳಿಗ್ಗೆಯಿಂದ ಗಣಪತಿ ಹೋಮ, ಪೂಜಾ ಕಾರ್ಯಗಳೊಂದಿಗೆ ಮಧ್ಯಾಹ್ನ ಮಹಾ ಮಂಗಳಾರತಿ ನೆರವೇರಿತು. ಬಳಿಕ ಸಹಸ್ರಾರು ಸಂಖ್ಯೆಯಲ್ಲಿ ನೆರೆದಿದ್ದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನೆರವೇರಿತು. ಮಳೆಯ ಮುನ್ಸೂಚನೆ ಇದ್ದುದರಿಂದ ಭಕ್ತಾದಿಗಳಿಗೆ ತೊಂದರೆಯಾಗದAತೆ ವ್ಯವಸ್ಥೆ ಮಾಡಲಾಗಿತ್ತು. ದೇವಾಲಯದ ಪ್ರಧಾನ ಅರ್ಚಕ ಶ್ರೀಕೃಷ್ಣ ಉಪಾಧ್ಯಾಯ ಅವರ ನೇತೃತ್ವದ ಅರ್ಚಕರ ತಂಡದವರು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್‌ಗೌಡ, ನಗರಸಭೆ ಅಧ್ಯಕ್ಷೆ ಕಲಾವತಿ, ೪ನಾಲ್ಕನೇ ಪುಟಕ್ಕೆ (ಮೊದಲ ಪುಟದಿಂದ) ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳ ಪ್ರಮುಖರು, ಅಧಿಕಾರಿ ವರ್ಗದವರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ದೇವಾಲಯ ಆಡಳಿತ ಮಂಡಳಿಯವರು ಸೇರಿದಂತೆ ಸ್ಥಳೀಯರು ಸ್ವಯಂಸೇವಕರಾಗಿ ಕಾರ್ಯನಿರ್ವಹಿಸಿದರು.
 
						