ಕುಶಾಲನಗರ, ಅ. ೨೪: ಶ್ರೀ ಕೋಣ ಮಾರಮ್ಮ ದೇವಸ್ಥಾನದÀ ೨೩ನೇ ವರ್ಷದ ವಾರ್ಷಿಕ ಉತ್ಸವ ಕಾರ್ಯಕ್ರಮದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು.
ಕಾವೇರಿ ನದಿಯಿಂದ ದೇವಿಯ ವಿಗ್ರಹದೊಂದಿಗೆ ಕಲಶ ತಂದು ಪ್ರತಿಷ್ಠಾಪನೆ ಮಾಡಲಾಯಿತು. ನಂತರ ದೇವಿಯ ಸನ್ನಿಧಿಯಲ್ಲಿ ಗಣಪತಿ ಹೋಮ, ತೀರ್ಥಪ್ರಸಾದ ವಿನಿಯೋಗ ನಡೆಯಿತು. ಭಕ್ತಾದಿಗಳಿಗೆ ಅನ್ನದಾನ ಕಾರ್ಯಕ್ರಮ ನಡೆಯಿತು.