ಕುಶಾಲನಗರ, ಅ. ೨೫ : ಅಭಿವೃದ್ಧಿಯ ಭರಾಟೆಯಿಂದ ಪರಿಸರದಲ್ಲಿ ಏರುಪೇರು ಆಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶರು ಹಾಗೂ ಕಾವೇರಿ ರಿವರ್ ಸೇವಾ ಟ್ರಸ್ಟ್ ಮಾರ್ಗದರ್ಶಕರಾದ ಶ್ರೀ ಸದಾಶಿವ ಸ್ವಾಮೀಜಿ ಹೇಳಿದರು.
ಕಾವೇರಿ ನದಿ ಸ್ವಚ್ಛತಾ ಆಂದೋಲನ ಮತ್ತು ಅಖಿಲ ಭಾರತೀಯ ಸನ್ಯಾಸಿ ಸಂಘದ ಆಶ್ರಯದಲ್ಲಿ ಕುಶಾಲನಗರದಲ್ಲಿ ಸ್ವಚ್ಛ ಕಾವೇರಿಗಾಗಿ ೧೫ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ ಮತ್ತು ಇಲ್ಲಿನ ಅಯ್ಯಪ್ಪಸ್ವಾಮಿ ದೇವಾಲಯದ ಬಳಿ ನಡೆದ ೧೭೮ನೆಯ ವಿಶೇಷ ಮಹಾ ಆರತಿ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಅವರು, ವ್ಯಾಪಾರ ವಹಿವಾಟು ಮಾಡುವ ಸಂದರ್ಭ ಪರಿಸರಕ್ಕೆ ಯಾವುದೇ ರೀತಿಯ ಹಾನಿ ಉಂಟಾಗದAತೆ ಪ್ರತಿಯೊಬ್ಬರೂ ಎಚ್ಚರಿಕೆ ವಹಿಸಬೇಕಾಗಿದೆ ಎಂದರು.
ನೆಮ್ಮದಿ ಮತ್ತು ಆರೋಗ್ಯಕರ ಬದುಕಿಗೆ ನೀರಿನ ಅವಲಂಬನೆಯ ಅಗತ್ಯತೆ ಇದ್ದು ಯಾವುದೇ ಸಂದರ್ಭ ಜಲಮೂಲಗಳು ನಾಶವಾಗದಂತೆ ಎಚ್ಚರ ವಹಿಸಬೇಕು ಎಂದು ಸ್ವಾಮೀಜಿ ಹೇಳಿದರು. ಮುಂದಿನ ಜನಾಂಗಕ್ಕೆ ಉತ್ತಮ ಪರಿಸರವನ್ನು ಹಸ್ತಾಂತರ ಮಾಡುವ ಜವಾಬ್ದಾರಿ ಎಲ್ಲರದ್ದಾಗಿದೆ ಎಂದರು.
ಸ್ವಚ್ಛ ಕಾವೇರಿಗಾಗಿ ತಲಕಾವೇರಿ ಕ್ಷೇತ್ರದಿಂದ ಪೂಂಪ್ ಹಾರ್ ತನಕ ಕಾವೇರಿ ಜಾಗೃತಿ ರಥಯಾತ್ರೆ ಹಮ್ಮಿಕೊಂಡಿರುವ ಅಖಿಲ ಭಾರತೀಯ ಸನ್ಯಾಸಿ ಸಂಘ ಮತ್ತು ಕಾವೇರಿ ನದಿ ಸ್ವಚ್ಛತಾ ಆಂದೋಲನದ ಯಾತ್ರೆಗೆ ಶುಭ ಕೋರಿದ ಸ್ವಾಮೀಜಿಗಳು ನಿರಂತರ ಕಾರ್ಯಕ್ರಮಗಳ ಮೂಲಕ ಸ್ವಚ್ಛ ಕಾವೇರಿಯನ್ನು ಮತ್ತೆ ಕಾಣಲು ಸಾಧ್ಯ ಎಂದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ ಅಭಿವೃದ್ಧಿಯ ನಡುವೆ ಪ್ರಕೃತಿಯ ಬಗ್ಗೆಯೂ ಕಾಳಜಿ ಇರಬೇಕು. ನದಿಗಳೊಂದಿಗೆ ಭಾವನಾತ್ಮಕ ಸಂಬAಧ ಹೊಂದುವAತಾಗಬೇಕು ಬದುಕಿಗೆ ಆಶ್ರಯ ಆಧಾರವಾಗಿರುವ ನದಿಗಳನ್ನು ಆರಾಧಿಸುವ ಮೂಲಕ ಸಂರಕ್ಷಣೆ ಸಾಧ್ಯ ಎಂದು ಅವರು ಹೇಳಿದರು.
ಅಖಿಲ ಭಾರತೀಯ ಸನ್ಯಾಸಿ ಸಂಘದ ಪ್ರಮುಖರಾದ ಸ್ವಾಮಿ ಶಿವರಾಮನಂದ ಅವರು ಕಳೆದ ೧೫ ವರ್ಷಗಳಿಂದ ನಿರಂತರವಾಗಿ ಭಾರತದ ನದಿಗಳ ಸಂರಕ್ಷಣೆ ಬಗ್ಗೆ ಜನರಿಗೆ ಅರಿವು ಮೂಡಿಸುವ ಕೆಲಸ ನಡೆಯುತ್ತಿದೆ ಕಾವೇರಿ ನದಿ ಸಂರಕ್ಷಣೆಗಾಗಿ ಕಳೆದ ೧೫ ವರ್ಷಗಳಿಂದ ತಲಕಾವೇರಿಯಿಂದ ಕಾವೇರಿ ಜಾಗೃತಿ ರಥಯಾತ್ರೆ ನಡೆಯುತ್ತಿದೆ ಎಂದು ಹೇಳಿದರು.
ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಕುಶಾಲನಗರ ಪುರಸಭೆ ಅಧ್ಯಕ್ಷೆ ಜಯಲಕ್ಷಿö್ಮ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇ±ಕಿ ಲೀಲಾವತಿ, ಪಾರಂಪರಿಕ ವೈದ್ಯರಾದ ಸುಮನ ಮಳಲಗದ್ದೆ, ಸ್ವಚ್ಛತಾ ಆಂದೋಲನ ಹಾಸನ ಜಿಲ್ಲಾ ಸಂಚಾಲಕ ಎಂ.ಎನ್. ಕುಮಾರಸ್ವಾಮಿ, ಕುಶಾಲನಗರ ಕೊಡವ ಸಮಾಜದ ಅಧ್ಯಕ್ಷÀ ವಾಂಚೀರ ಮನು ನಂಜುAಡ, ಕುಶಾಲನಗರ ಗೌಡ ಸಮಾಜದ ಅಧ್ಯಕ್ಷÀ ಚಿಲ್ಲನ ಗಣಿ ಪ್ರಸಾದ್, ಆರ್ಯವೈಶ್ಯ ಮಂಡಳಿ ಅಧ್ಯಕ್ಷ ಬಿ. ಆರ್. ನಾಗೇಂದ್ರ ಪ್ರಸಾದ್, ಶ್ರೀ ಗಣಪತಿ ದೇವಾಲಯ ಪ್ರಧಾನ ಅರ್ಚಕÀ ಆರ್.ಕೆ. ನಾಗೇಂದ್ರ ಬಾಬು, ಮಹಿಳಾ ಭಜನಾ ಮಂಡಳಿಯ ಪ್ರಮುಖರಾದ ಪದ್ಮ ಪುರುಷೋತ್ತಮ್ ಅವರುಗಳು ಪಾಲ್ಗೊಂಡು ಯಾತ್ರೆಗೆ ಶುಭ ಕೋರಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ರಾಜ್ಯ ಸಂಚಾಲಕ ಎಂ ಎನ್ ಚಂದ್ರಮೋಹನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭ ಕುಶಾಲನಗರ ಭಜನಾ ಮಂಡಳಿ ಸದಸ್ಯರಿಂದ ಕುಂಕುಮಾರ್ಚನೆ, ಸಹಸ್ರ ಲಲಿತ ನಾಮ ಸಂಕೀರ್ತನೆ ನಡೆಯಿತು. ಅರ್ಚಕರಾದ ಕೃಷ್ಣಮೂರ್ತಿ ಭಟ್ ಅವರ ನೇತೃತ್ವದಲ್ಲಿ ಕಾವೇರಿಗೆ ೧೭೮ ನೆಯ ವಿಶೇಷ ಮಹಾ ಆರತಿ ಕಾರ್ಯಕ್ರಮ ಮತ್ತು ಕಾವೇರಿ ಮೂರ್ತಿಗೆ ಅಷ್ಟಾಭಿಷೇಕ ನಡೆಯಿತು.
ಈ ಸಂದರ್ಭ ಕಾವೇರಿ ರಿವರ್ ಸೇವಾ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಮಂಡೇಪAಡ ಬೋಸ್ ಮೊಣ್ಣಪ್ಪ, ನಮಾಮಿ ಕಾವೇರಿ ಜಿಲ್ಲಾ ಅಧ್ಯಕ್ಷೆ ವನಿತಾ ಚಂದ್ರಮೋಹನ್ ಆರತಿ ಬಳಗದ ಪ್ರಮುಖರಾದ ಧರಣಿ ಸೋಮಯ್ಯ, ಚೈತನ್ಯ ಸಿ ಮೋಹನ್,ಬಿ ಜೆ ಅಣ್ಣಯ್ಯ, ಕೊಡಗನ ಹರ್ಷ, ಪುರಸಭೆ ಸದಸ್ಯರಾದ ಡಿ ಕೆ ತಿಮ್ಮಪ್ಪ, ವಿ ಎಸ್ ಆನಂದಕುಮಾರ್, ಮಾಜಿ ಸೈನಿಕರ ಸಂಘದ ಎಳ್ತಂಡ ರಂಜಿತ್, ಅಖಿಲ ಭಾರತ ಸನ್ಯಾಸಿ ಸಂಘದ ಪ್ರಮುಖರು, ಮಹಿಳಾ ಭಜನಾ ಮಂಡಳಿ ಮತ್ತು ಕಾವೇರಿ ಆರತಿ ಬಳಗ ಸದಸ್ಯರು ಇದ್ದರು.