ನಾಪೋಕ್ಲು, ಅ. ೨೯: ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣಾ ದಿನಾಚರಣೆ ತಾ.೩೧ ರಂದು ಮಡಿಕೇರಿಯಲ್ಲಿ ನಡೆಯಲಿದೆ.
ಈ ಬಗ್ಗೆ ಹೇಳಿಕೆ ನೀಡಿರುವ ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಅವರು, ಬೆಳಿಗ್ಗೆ ೯:೩೦ ಗಂಟೆಗೆ ಮಡಿಕೇರಿ ಸುದರ್ಶನ ವೃತ್ತದಲ್ಲಿರುವ ಗುಡ್ಡೆಮನೆ ಅಪ್ಪಯ್ಯ ಗೌಡರ ಸ್ಮಾರಕದ ಬಳಿ ಪುಷ್ಪಾರ್ಚನೆ, ವಿವಿಧ ಕಲಾತಂಡಗಳಿAದ
ದೇಶಭಕ್ತಿ ಗೀತಗಾಯನ
ಕಾರ್ಯಕ್ರಮ ನಡೆಯಲಿದೆ.
ನಂತರ ಸಾಂಪ್ರದಾಯಿಕ ಉಡುಗೆಯಲ್ಲಿ ಮಡಿಕೇರಿ ಕೋಟೆಯವರೆಗೆ ಮೆರವಣಿಗೆಯಲ್ಲಿ ಸಾಗಿ ಕೋಟೆ ಆವರಣದಲ್ಲಿ ಗಣ್ಯರಿಂದ ಪುಷ್ಪಾರ್ಚನೆ, ಸಭಾ ಕಾರ್ಯಕ್ರಮ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇವರ ಸಹಯೋಗದಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.