ಸೋಮವಾರಪೇಟೆ,ಅ.೨೯: ಕನ್ನಡ ಚಲನ ಚಿತ್ರ ನಾಯಕ ನಟರಾಗಿದ್ದ ಪುನೀತ್ ರಾಜ್‌ಕುಮಾರ್ ಅವರ ೪ನೇ ವರ್ಷದ ಸ್ಮರಣೆ ಅಂಗವಾಗಿ ಇಲ್ಲಿನ ಅಪ್ಪು ಅಭಿಮಾನಿಗಳ ಬಳಗದ ವತಿಯಿಂದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಮಧ್ಯಾಹ್ನ ಊಟ ವಿತರಿಸಲಾಯಿತು.

ಬಳಗದ ಅಧ್ಯಕ್ಷ ರವಿಕುಮಾರ್ ಅಬ್ಬೂರುಕಟ್ಟೆ ಅವರ ನೇತೃತ್ವದಲ್ಲಿ ಆಸ್ಪತ್ರೆಯ ಒಳರೋಗಿಗಳಿಗೆ ಮೊಟ್ಟೆ, ಹಣ್ಣು ಸಹಿತ ಊಟ ನೀಡಲಾಯಿತು. ಈ ಸಂದರ್ಭ ಮಾತನಾಡಿದ ಅವರು, ಕನ್ನಡ ಚಲನಚಿತ್ರ ರಂಗದಲ್ಲಿ ನಟರಾಗಿ ಹೆಸರು ಮಾಡಿದ ಪುನೀತ್ ಅವರು ಹಲವಷ್ಟು ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಅವರ ಅಗಲಿಕೆಯ ನಂತರವೂ ಅಭಿಮಾನಿಗಳ ಸಂಘದಿAದ ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿರುವುದಾಗಿ ತಿಳಿಸಿದರು.

ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಶಿವಪ್ರಸಾದ್ ಮಾತನಾಡಿ, ಮರಣದ ನಂತರವೂ ಜನಮಾನಸದಲ್ಲಿ ಉಳಿದಿರುವ ಪುನೀತ್ ಅವರ ಸೇವಾ ಕಾರ್ಯವನ್ನು ಸಂಘದ ಮೂಲಕ ಮುಂದುವರೆಸಿಕೊAಡು ಬರುತ್ತಿರುವುದು ಶ್ಲಾಘನೀಯ ಎಂದರು.

ಈ ಸಂದರ್ಭ ಆಸ್ಪತ್ರೆಯ ವೈದ್ಯ ಜಮೀರ್ ಅಹಮ್ಮದ್, ಆರೋಗ್ಯ ರಕ್ಷಾ ಸಮಿತಿ ಸದಸ್ಯೆ ಮಂಜುಳಾ ಹರೀಶ್, ಸಿಬ್ಬಂದಿಗಳು, ಅಭಿಮಾನಿ ಬಳಗದ ಪದಾಧಿಕಾರಿಗಳು ಉಪಸ್ಥಿತರಿದ್ದರು.