ಮಡಿಕೇರಿ, ಅ. ೨೯: ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಪಡಿತರ ಕಾರ್ಡುಗಳ ಪರಿಷ್ಕರಣಾ ಕಾರ್ಯ ನಡೆಯುತ್ತಿದ್ದು, ಈ ಅವಕಾಶವನ್ನು ಅರ್ಹರು ಬಳಸಿಕೊಳ್ಳುವಂತಾಗಬೇಕು ಎಂದು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಅವರು ತಿಳಿಸಿದ್ದಾರೆ.
ನಗರದ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಅರ್ಹರಿಗೆ ಬಿಪಿಎಲ್‌ನಿಂದ ಎಪಿಎಲ್‌ಗೆ ಪಡಿತರ ಚೀಟಿ ವರ್ಗಾವಣೆ ಆಗಿದ್ದಲ್ಲಿ, ಆಹಾರ ಇಲಾಖೆ ಅಥವಾ ತಾಲೂಕಿನ ತಹಶೀಲ್ದಾರ್ ಕಚೇರಿಯ ಆಹಾರ ಶಿರಸ್ತೆದಾರರಿಗೆ ಮನವಿ ಸಲ್ಲಿಸುವಂತಾಗಬೇಕು. ಇದರಿಂದ ಪರಿಶೀಲಿಸಿ ಪುನಃ ಬಿಪಿಎಲ್ ಕಾರ್ಡ್ ವಿತರಿಸಲಿದ್ದಾರೆ. ಆ ನಿಟ್ಟಿನಲ್ಲಿ ಆಹಾರ ಇಲಾಖೆಯವರು ಅಗತ್ಯ ಜಾಗೃತಿ ಮೂಡಿಸುವಂತೆ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರು ನಿರ್ದೇಶನ ನೀಡಿದರು.
ಅನ್ನಭಾಗ್ಯ ಯೋಜನೆಯಡಿ ಪ್ರತೀ ಫಲಾನುಭವಿಗೆ ೧೦ ಕೆ.ಜಿ. ಅಕ್ಕಿ ವಿತರಣೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಆಹಾರ ಧಾನ್ಯಗಳನ್ನು ಒಳಗೊಂಡ ಇಂದಿರಾ ಕಿಟ್ ವಿತರಿಸಲು ಸರ್ಕಾರ ಉದ್ದೇಶಿಸಿದೆ ಎಂದು ಧರ್ಮಜ ಉತ್ತಪ್ಪ ಅವರು ವಿವರಿಸಿದರು.
ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಕುಟುಂಬದ ಹಲವು ಬಡವರಿಗೆ ಎಪಿಎಲ್ ಕಾರ್ಡ್ ನೀಡಲಾಗಿದ್ದು, ಬಡವರಿಗೆ ಬಿಪಿಎಲ್ ಕಾರ್ಡ್ ವಿತರಿಸಬೇಕು. ಆ ನಿಟ್ಟಿನಲ್ಲಿ ಕ್ರಮವಹಿಸುವಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಆರ್ಥಿಕವಾಗಿ ಸಬಲರಾಗಿದ್ದಲ್ಲಿ ಅಂತಹ ಕುಟುಂಬಗಳನ್ನು ಗ್ರಾ.ಪಂ. ಮಟ್ಟದಲ್ಲಿ ಪರಿಶೀಲಿಸಬೇಕು. ಅದನ್ನು ಬಿಟ್ಟು ನಿಜವಾದ ಬಡವರಿಗೆ ಬಿಪಿಎಲ್ ಕಾರ್ಡ್ ಇಲ್ಲದಿರುವುದು ನೋವು ತರುತ್ತಿದೆ. ಆದ್ದರಿಂದ ಅರ್ಹರಿಗೆ ಬಿಪಿಎಲ್ ಕಾರ್ಡ್ ತಲುಪಿಸಬೇಕು ಎಂದು ಸೂಚಿಸಿದರು. ಈ ಸಂಬAಧ ಸರ್ಕಾರಕ್ಕೂ ಸಹ ಪತ್ರ ಬರೆಯಲು ಸಭೆಯಲ್ಲಿ ನಿರ್ಧರಿಸಲಾಯಿತು.
ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನ ಮತ್ತು ಪ್ರಗತಿ ಸಂಬAಧ ಜಿಲ್ಲಾ ಮಟ್ಟದಲ್ಲಿ ಸಮ್ಮೇಳನ ಆಯೋಜಿಸಲಾಗುವುದು. ಸಮ್ಮೇಳನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಗ್ಯಾರಂಟಿ ಯೋಜನೆ ರಾಜ್ಯ ಅನುಷ್ಠಾನ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಹೀಗೆ ಹಲವರು ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಸಮ್ಮೇಳನ ನಡೆದಿದೆ ಎಂದು ತಿಳಿಸಿದರು.
ಗ್ಯಾರಂಟಿ ಯೋಜನಾ ಜಿಲ್ಲಾ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಪಂಕಜ ಅವರು ಮಾತನಾಡಿ ತಿತಿಮತಿ ವ್ಯಾಪ್ತಿಯಲ್ಲಿ ಬೀದಿ ದೀಪ ಸರಿಪಡಿಸುವಂತಾಗಬೇಕು. ಜೊತೆಗೆ ವಿದ್ಯುತ್ ಪೂರೈಕೆ ಸಮರ್ಪಕವಾಗಿ ಪೂರೈಸಬೇಕು. ಹಾಗೆಯೇ ಹಳೇ ಕಂಬಗಳನ್ನು ಬದಲಿಸಿ ಹೊಸ ವಿದ್ಯುತ್ ಕಂಬ ಹಾಗೂ ವಿದ್ಯುತ್ ಪರಿವರ್ತಕ ಅಳವಡಿಸುವಂತೆ ಸಲಹೆ ಮಾಡಿದರು.
ಮತ್ತೊಬ್ಬ ಸದಸ್ಯರಾದ ಜಾನ್ಸನ್ ಅವರು ಮಾತನಾಡಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಶೇಕಡವಾರು ಪ್ರಗತಿ ಹಾಗೂ ಜಿಲ್ಲೆಯ ಇಬ್ಬರು ಶಾಸಕರು ಅಭಿವೃದ್ಧಿಗೆ ಸರ್ಕಾರದ ಮಟ್ಟದಲ್ಲಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಿಸಿದ್ದಾರೆ. ಆದ್ದರಿಂದ ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳುವಂತಾಗಬೇಕು ಎಂದು ಸಲಹೆ ನೀಡಿದರು.
ಸದಸ್ಯರಾದ ಕಾಂತರಾಜು ಅವರು ಮಾತನಾಡಿ, ಗ್ಯಾರಂಟಿ ಯೋಜನೆಗಳು ಪರಿಣಾಮಕಾರಿಯಾಗಿ ಅನುಷ್ಠಾನವಾಗಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಎಚ್ಚರ ವಹಿಸಬೇಕು. ಯಾರನ್ನು ಸಹ ಸತಾಯಿಸದೆ ಸರ್ಕಾರದ ಯೋಜನೆಗಳನ್ನು ತಲುಪಿಸುವಂತಾಗಬೇಕು ಎಂದು ಕೋರಿದರು.
ಯುವನಿಧಿ ಕಾರ್ಯಕ್ರಮ ಅನುಷ್ಠಾನ ಸಂಬAಧಿಸಿದAತೆ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಉಪಾಧ್ಯಕ್ಷರಿಗೆ ವರದಿ ನೀಡುವಂತೆ ಧರ್ಮಜ ಉತ್ತಪ್ಪ ಸೂಚಿಸಿದರು.
ಉಪಾಧ್ಯಕ್ಷರಾದ ಶಾರಿ ಗಿರೀಶ, ಕೆ.ಸಿ. ಭೀಮಯ್ಯ, ನಾಸಿರ್ ಅವರು ಗ್ಯಾರಂಟಿ ಯೋಜನೆ ಅನುಷ್ಠಾನ ಸಂಬAಧಿಸಿದAತೆ ಹಲವು ವಿಷಯಗಳ ಕುರಿತು ಗಮನ ಸೆಳೆದರು. ಸದಸ್ಯರಾದ ಕುಟ್ಟಂಡ ಕೃಷ್ಣ, ಸುಂದರ, ಕೆ.ಎಂ. ಬಸೀರ್, ಮುಸ್ತಪ, ಕೆ.ಜಿ. ಪೀಟರ್, ಮಂದ್ರಿರ ಮೋಹನ್ ದಾಸ್, ಕಾಳೇಮಾಡ ಪ್ರಶಾಂತ್ ಅವರು ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನ ಸಂಬAಧ ಹಲವು ವಿಚಾರಗಳ ಕುರಿತು ಗಮನ ಸೆಳೆದರು.
ಆಹಾರ ಇಲಾಖೆಯ ಜಂಟಿ ನಿರ್ದೇಶಕರಾದ ಮಂಟೇಸ್ವಾಮಿ, ಸೆಸ್ಕ್ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವಿನಯ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್, ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಮಂಜುನಾಥ್, ಕೆಎಸ್‌ಆರ್‌ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕರಾದ ಈರಸಪ್ಪ ಅವರು ತಮ್ಮ ಇಲಾಖೆಗೆ ಸಂಬAಧಿಸದAತೆ ಗ್ಯಾರಂಟಿ ಯೋಜನೆ ಪ್ರಗತಿ ಸಂಬAಧ ಮಾಹಿತಿ ನೀಡಿದರು.