ಸೋಮವಾರಪೇಟೆ, ಅ.೨೯: ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ಪದಾಧಿಕಾರಿಗಳ ಸಮ್ಮುಖದಲ್ಲಿ ಸೋಮವಾರಪೇಟೆ ತಾಲೂಕು ಹಾಗೂ ಹೋಬಳಿ ಘಟಕಗಳ ಸಂಯುಕ್ತ ಸಭೆಯು ತಾ. ೩೧ರಂದು ಪೂರ್ವಾಹ್ನ ೧೧ ಗಂಟೆಗೆ ಸೋಮವಾರಪೇಟೆ ಕಸಾಪ ಭವನದಲ್ಲಿ ನಡೆಯಲಿದೆ ಎಂದು ಕಾರ್ಯದರ್ಶಿ ಜ್ಯೋತಿ ಅರುಣ್ ತಿಳಿಸಿದ್ದಾರೆ.
ತಾಲೂಕು ಕಸಾಪ ಅಧ್ಯಕ್ಷ ಎಸ್. ಡಿ. ವಿಜೇತ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಜಿಲ್ಲಾಧ್ಯಕ್ಷ ಕೇಶವ ಕಾಮತ್, ಮಾಜಿ ಅಧ್ಯಕ್ಷ ಟಿ. ಪಿ. ರಮೇಶ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ. ರಾಜ್ಯೋತ್ಸವ, ದತ್ತಿ ಕಾರ್ಯಕ್ರಮಗಳು, ತಾಲೂಕು ಸಮ್ಮೇಳನ ಸೇರಿದಂತೆ ಇತರ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಜ್ಯೋತಿ ಅರುಣ್ ಮಾಹಿತಿ ನೀಡಿದ್ದಾರೆ.