ಮಡಿಕೇರಿ, ಅ. ೨೯: ಮಾನವೀಯ ಸ್ನೇಹಿತರ ಒಕ್ಕೂಟದ ಆಶ್ರಯದಲ್ಲಿ ಮಡಿಕೇರಿಯ ಕ್ರೆಸೆಂಟ್ ಶಾಲೆಯಲ್ಲಿ ಏರ್ಪಡಿಸಿದ್ದ ಸಮ್ಮಿಲನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಒಕ್ಕೂಟದ ಸ್ಥಾಪಕ ಅನಿಲ್ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭವನ್ನು ಒಕ್ಕೂಟದ ಸಲಹೆಗಾರ ಡೇವಿಡ್ ವೇಗಸ್ ಅವರು ಉದ್ಘಾಟಿಸಿದರು.
ಒಕ್ಕೂಟದ ವಕ್ತಾರ ಶಶಿಕುಮಾರ್ ಚೆಟ್ಟಳ್ಳಿ ಅವರು ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ಪ್ರತಿನಿಧಿಗಳಾದ ಕಡ್ಲೇರ ತುಳಸಿ ಮೋಹನ್ ಹಾಗೂ ಸುನಿತಾ ಬಿಳಿಗೇರಿ ಅವರುಗಳು ಆರಂಭದಲ್ಲಿ ಧ್ಯೇಯ ಗೀತೆ ಹಾಡಿದರು. ಪ್ರಮುಖರಾದ ಚೀರಂಡ ಚಂಗಪ್ಪ ಅವರು ಸ್ವಾಗತ ಭಾಷಣ ಮಾಡಿದರು. ಶಿಕ್ಷಕಿ ಇಂದಿರಾ ಅವರು ವರದಿ ವಾಚಿಸಿದರೆ, ಲೀಲಾವತಿ ಅವರು ಲೆಕ್ಕಪತ್ರ ಮಂಡನೆ ಮಾಡಿದರು.
ಪ್ರಮುಖರಾದ ಬಾಳೆಯಡ ದಿವ್ಯಾ ಮಂದಪ್ಪ ಹಾಗೂ ಅಗ್ನಿ ಚೆನ್ನನಾಯಕ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭ ಒಕ್ಕೂಟದ ವಕ್ತಾರ ಶಶಿಕುಮಾರ್ ಚೆಟ್ಟಳ್ಳಿ ಅವರ ಸೇವೆಯನ್ನು ಪರಿಗಣಿಸಿ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಸಮಾರಂಭದಲ್ಲಿ ಒಕ್ಕೂಟದ ಪ್ರತಿನಿಧಿಗಳು ತಮ್ಮ ಪರಿಚಯವನ್ನು ಮಾಡಿಕೊಂಡರು. ಪ್ರತಿನಿಧಿ ಪ್ರವೀಣ್ ರೈ ನಾಪೋಕ್ಲು ಅವರು ಒಕ್ಕೂಟದ ಕಾರ್ಯ ಚಟುವಟಿಕೆಗಳ ಕುರಿತು ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು.
ಅಗಲಿದ ಪ್ರತಿನಿಧಿ ತೆರೆಸಾ ಅವರ ಆತ್ಮಕ್ಕೆ ಶಾಂತಿ ಕೋರಲಾಯಿತು. ಪುರುಷರು ಹಾಗೂ ಮಹಿಳೆಯರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆದವು. ವಿಜೇತರಿಗೆ ಬಹುಮಾನ ಹಾಗೂ ಒಕ್ಕೂಟದ ಪ್ರತಿನಿಧಿಗಳಿಗೆ ನೆನಪಿನ ಕಾಣಿಕೆ ವಿತರಿಸಲಾಯಿತು. ನೆರೆದವರಿಗೆ ಮಧ್ಯಾಹ್ನ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ಒಕ್ಕೂಟದ ವಕ್ತಾರ ಎಂ.ಇ. ಮಹಮ್ಮದ್ ಅವರು ವಂದಿಸಿದರು.