ವೀರಾಜಪೇಟೆ, ಅ. ೩೧: ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಳುಗೋಡುವಿ ನಲ್ಲಿರುವ ಕೊಡವ ಸಮಾಜಗಳ ಒಕ್ಕೂಟ ಬೆಳ್ಳಿಹಬ್ಬ ಸಂಭ್ರಮದ ಅಂಗವಾಗಿ ನವೆಂಬರ್ ೬ ರಿಂದ ೯ ರವರೆಗೆ ಅಂತರ ಕೊಡವ ಸಮಾಜಗಳ ನಡುವೆ ನಡೆಯುವ ಹಾಕಿ ಪಂದ್ಯಾಟ, ಇತರ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಮಾರೋಪ ಸಮಾರಂಭಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಲಾಗಿದ್ದು, ಸಮಾರಂಭದಲ್ಲಿ ಪಾಲ್ಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನವೆಂಬರ್ ೬ ರಂದು ವೀರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಹಾಗೂ ಮೈಸೂರು ಹಾಗೂ ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಈಗಾಗಲೇ ಬಾಳುಗೋಡುವಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಸಮುಚ್ಚಯಕ್ಕೆ ಸರ್ಕಾರದಿಂದ ೧೦ ಕೋಟಿ ಹಣ ಬಿಡುಗಡೆಯಾಗಿದ್ದು, ೬ ಕೋಟಿಗೂ ಅಧಿಕ ವೆಚ್ಚದ ಅಭಿವೃದ್ಧಿ ಕಾರ್ಯಗಳನ್ನು ಬಾಳುಗೋಡುವಿನಲ್ಲಿ ನಡೆಸಲಾಗಿದೆ. ೩೦ ಕೊಡವ ಸಮಾಜಗಳಿಗೆ ತಲಾ ೧೦ ಲಕ್ಷ ರೂಗಳನ್ನು ಅಭಿವೃದ್ದಿ ಕಾರ್ಯಗಳಿಗೆ ನೀಡಲಾಗಿದೆ. ಭಾಗಮಂಡಲದಲ್ಲಿ ಒಂದು ಸಮುದಾಯ ಭವನವನ್ನು ನಿರ್ಮಾಣ ಮಾಡಲಾಗುತ್ತಿದ್ದು, ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿದೆ. ಸ್ಥಗಿತಗೊಂಡ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದರು.

೨೦೧೯ರಲ್ಲಿ ಅಂದಿನ ಸರ್ಕಾರ ಒಕ್ಕೂಟದ ಸಮುಚ್ಚಾಯದ ಅಭಿವೃದ್ಧಿ ಕಾರ್ಯಗಳಿಗೆ ರೂ. ೧೫ ಕೋಟಿ ಅನುದಾನ ನೀಡುವಂತೆ ಮುಂಗಡ ಪತ್ರದಲ್ಲೂ ನಮೂದಿಸಲಾಗಿತ್ತು. ಆದರೆ ಕೇವಲ ರೂ. ೧೦ ಕೋಟಿ ಮಾತ್ರ ಮಂಜೂರಾಗಿದೆ. ಉಳಿದ ೫ ಕೋಟಿ ಹಣವನ್ನು ಶೀಘ್ರದಲ್ಲಿಯೇ ಮಂಜೂರು ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು. ಬೆಳ್ಳಿಹಬ್ಬದ ಸಂಭ್ರಮದಲ್ಲಿ ಈ ಬಾರಿ ವಿಶೇಷವಾಗಿ ಫೈವ್ ಸೈಡರ್ ಲೇಡಿಸ್ ಹಾಕಿಯನ್ನು ಪರಿಚಯಿಸಲಾಗುವುದು. ತೆಂಗಿನಕಾಯಿಗೆ ಗುಂಡು ಹೊಡೆಯುವ ಮುಕ್ತ ಸ್ಫರ್ಧೆಯನ್ನು ನವೆಂಬರ್ ೬ ರಂದು ಪ್ರಾರಂಭಿಸಲಾಗುವುದು ಎಂದು ಹೇಳಿದರು.

ಗೋಷ್ಠಿಯಲ್ಲಿ ಒಕ್ಕೂಟದ ಕಾರ್ಯದರ್ಶಿ ವಾಟೇರಿರ ಶಂಕರಿ ಪೊನ್ನಪ್ಪ, ಕ್ರೀಡಾ ಸಮಿತಿ ಅಧ್ಯಕ್ಷ ತಂಬುಕುತ್ತಿರ ಮಧು ಮಾದಯ್ಯ, ಆಹಾರ ಸಮಿತಿ ಅಧ್ಯಕ್ಷ ಅಮ್ಮಣಿಚಂಡ ರವಿ ಉತ್ತಪ್ಪ, ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಕಾಳಿಮಾಡ ಮೋಟಯ್ಯ ಸೇರಿದಂತೆ ಸಮಿತಿಗಳ