ವೀರಾಜಪೇಟೆ, ಅ. ೩೧: ವಿದ್ಯಾಸಂಸ್ಥೆಗಳ ನಡುವೆ ಪರಸ್ಪರ ಬಾಂಧವ್ಯ ಮೂಡಿದಾಗ ಮಾತ್ರ ವಿದ್ಯಾರ್ಥಿಗಳು ಮಾತ್ರವಲ್ಲದೆ ಸಂಸ್ಥೆಯ ಸರ್ವತೋಮುಖ ಪ್ರಗತಿ ಸಾಧ್ಯ ಎಂದು ವೀರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ಹಾಗೂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರೆ. ಫಾ. ಮದಲೈ ಮುತ್ತು ಅಭಿಪ್ರಾಯಪಟ್ಟರು. ಕಾಲೇಜಿನಲ್ಲಿ ಜಿಲ್ಲೆಯ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಎಕೋಸ್ ಆಫ್ ದಿ ಅರ್ಥ್ ಧ್ಯೇಯದಡಿಯಲ್ಲಿ ಆನ್ಸ್ ಫೆಸ್ಟ್ನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾಸಂಸ್ಥೆಗಳು ಕಾರ್ಯಕ್ರಮವನ್ನು ಆಯೋಜಿಸಿ ಮತ್ತೊಂದು ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳನ್ನು ಆಹ್ವಾನಿಸಿ ಶೈಕ್ಷಣಿಕ ಕಾರ್ಯಕ್ರಮಗಳನ್ನು ನಡೆಸುವುದರಿಂದ ಸಂಸ್ಥೆಗಳ ನಡುವೆ ಪರಸ್ಪರ ಬಾಂಧವ್ಯ ಬೆಳೆಯುತ್ತದೆ ಎಂದರು.

ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಉದ್ಘಾಟನಾ ಸಮಾರಂಭದ ಬಳಿಕ ನಿಗದಿಪಡಿಸಿದ ತರಗತಿಗಳಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿದ್ದರು.

ಅಂತಿಮವಾಗಿ ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಪದವಿ ಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿತು. ಮಡಿಕೇರಿಯ ಸಂತ ಮೈಕಲರ ಪದವಿ ಪೂರ್ವ ಕಾಲೇಜು ರನ್ನರ್ಸ್ ಟ್ರೋಫಿಯನ್ನು ಪಡೆದುಕೊಂಡಿತು.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ನಟಿ, ಗಾಯಕಿ ಬಟ್ಟಿಯಂಡ ಲಿಖಿತಾ ಮಾತನಾಡಿ, ವಿದ್ಯಾಸಂಸ್ಥೆಯಲ್ಲಿ ಆಯೋಜಿಸುವಂತಹ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳಬೇಕು.

ಕಾಲೇಜಿನಲ್ಲಿ ಲಭ್ಯವಿರುವಂತಹ ಎಲ್ಲಾ ಅವಕಾಶಗಳನ್ನು