ಮುಳ್ಳೂರು, ಅ. ೩೧: ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆ ಮತ್ತು ಶನಿವಾರಸಂತೆ ಕಾವೇರಿ ವಿದ್ಯಾಸಂಸ್ಥೆ ವತಿಯಿಂದ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಸಪ್ತಾಹ-೨೦೨೫ ಅಂಗವಾಗಿ ಜಾಥಾವನ್ನು ಹಮ್ಮಿಕೊಳ್ಳಲಾಯಿತು. ಲೋಕಾಯುಕ್ತ ಡಿವೈಎಸ್‌ಪಿ ದಿನಕರ್ ಶೆಟ್ಟಿ ಮತ್ತು ಪೊಲೀಸ್ ನಿರೀಕ್ಷಕಿ ವೀಣಾ ನಾಯಕ್ ನೇತೃತ್ವದಲ್ಲಿ ಶನಿವಾರಸಂತೆ ಕಾವೇರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಭಾರತಿ ವಿದ್ಯಾಸಂಸ್ಥೆಯಿAದ ಪ್ರಾರಂಭಗೊAಡು ಮುಖ್ಯರಸ್ತೆ ಮೂಲಕವಾಗಿ ಪಟ್ಟಣದ ಕೆಆರ್‌ಸಿ ವೃತ್ತದವರೆಗೆ ಜಾಥಾ ನಡೆಸುವ ಮೂಲಕ ಭ್ರಷ್ಟಾಚಾರ ಮುಕ್ತ ಸಮಾಜದ ಕುರಿತು ಜಾಗೃತಿ ಮೂಡಿಸಿದರು. ಜಾಥಾ ಕಾರ್ಯಕ್ರಮದಲ್ಲಿ ಶನಿವಾರಸಂತೆ ಪೊಲೀಸ್ ಠಾಣೆಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು.