ಮಡಿಕೇರಿ, ನ. ೧: ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಹಯೋಗದೊಂದಿಗೆ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ (ಐಟಿಡಿಪಿ) ನೂತನ ಕಚೇರಿ ಕಟ್ಟಡವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಭೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ, ಶಾಸಕರಾದ ಡಾ.ಮಂತರ್ ಗೌಡ ಶನಿವಾರ ಉದ್ಘಾಟಿಸಿದರು.

ನಗರಸಭೆ ಅಧ್ಯಕ್ಷೆ ಪಿ. ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಎಸ್. ಹೊನ್ನೇಗೌಡ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಚಿನ್, ಇತರರು ಇದ್ದರು.