ವೀರಾಜಪೇಟೆ, ನ. ೧: ನಾಪೋಕ್ಲು ಹಾಗೂ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಪ್ರಮುಖರ ಸಭೆ ಶಾಸಕರ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ವೀರಾಜಪೇಟೆ ಗೃಹ ಕಚೇರಿಯಲ್ಲಿ ನಡೆಯಿತು.
ಪಕ್ಷ ಸಂಘಟನೆ, ಮುಂಬರುವ ಚುನಾವಣೆಗಳು ಹಾಗೂ ಹಲವು ಕಾರ್ಯಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಪಕ್ಷ ಸಂಘಟನೆಯ ಕುರಿತು ವಿಶೇಷ ಆಸಕ್ತಿ ವಹಿಸುವಂತೆ ಶಾಸಕರು ಕರೆ ನೀಡಿದರಲ್ಲದೇ, ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಲೇಬೇಕೆಂದು ಸೂಚಿಸಿದರು.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ವಹಿಸಿದ್ದರು. ಸಭೆಯಲ್ಲಿ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ವೀರಾಜಪೇಟೆ ಬ್ಲಾಕ್ ಅಧ್ಯಕ್ಷ ರಂಜಿ ಪೂಣಚ್ಚ, ಕೆಪಿಸಿಸಿ ಸದಸ್ಯ ಬೇಕಲ್ ರಮಾನಾಥ್, ಡಿಸಿಸಿ ಉಪಾಧ್ಯಕ್ಷ ಅಬ್ದುಲ್ ರೆಹಮಾನ್, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಹನೀಫ್, ವೀರಾಜಪೇಟೆ ತಾಲೂಕು ಬಗರ್ ಹುಕುಂ ಅಧ್ಯಕ್ಷ ಸಲಾಂ, ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ಮಹಿಳಾ ಕಾಂಗ್ರೆಸ್ ಪ್ರಮುಖರಾದ ಶೈಲಾ ಕುಟ್ಟಪ್ಪ, ಮಡಿಕೇರಿ ತಾಲೂಕು ಬಗರ್ ಹುಕುಂ ಅಧ್ಯಕ್ಷ ನೆರವಂಡ ಉಮೇಶ್, ವಲಯ ಅಧ್ಯಕ್ಷರುಗಳು, ಕೆಪಿಸಿಸಿ-ಡಿಸಿಸಿ ಪದಾಧಿಕಾರಿಗಳು, ಮುಂಚೂಣಿ ಘಟಕದ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ