ಮಡಿಕೇರಿ, ನ. ೧: ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ೨೦೨೫-೨೬ನೇ ಸಾಲಿನ ಕ್ರಿಶ್ಚಿಯನ್ ಜನಾಂಗದವರಿಗೆ ಶ್ರಮ ಶಕ್ತಿ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ಶ್ರಮಶಕ್ತಿ ವಿಶೇಷ ಮಹಿಳಾ ಯೋಜನೆ, ಗಂಗಾ ಕಲ್ಯಾಣ ಯೋಜನೆಗೆ ಸಾಲ ಮತ್ತು ಸಹಾಯಧನ ಹಾಗೂ ವ್ಯಾಪಾರ ಮತ್ತು ಉದ್ಯಮಗಳಿಗೆ ನೇರ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ, ಮಹಿಳಾ ಸ್ವ ಸಹಾಯ ಸಂಘ ಗುಂಪುಗಳಿಗೆ ಸಹಾಯಧನವನ್ನು ನೀಡಲಾಗುತ್ತದೆ. ಸಾಲ ಹಾಗೂ ಸಹಾಯಧನವನ್ನು ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಿಗಮದ ವೆಬ್‌ಸೈಟ್: hಣಣಠಿs://ಞಛಿಛಿಜಛಿಟoಟಿಟiಟಿe.ಞಚಿಡಿಟಿಚಿಣಚಿಞಚಿ.gov.iಟಿ/ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ “ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಅಜಾದ್ ಭವನ, ಗ್ರಾಮಾಂತರ ಪೊಲೀಸ್ ಠಾಣೆ ಹತ್ತಿರ, ಎಫ್‌ಎಂಸಿ ಕಾಲೇಜು ರಸ್ತೆ, ಮಡಿಕೇರಿ ಇಲ್ಲಿಗೆ ಭೇಟಿ ನೀಡಬಹುದು.