ವೀರಾಜಪೇಟೆ, ನ. ೧: ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಪ್ರಮುಖರ ಸಭೆ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ವೀರಾಜಪೇಟೆಯ ಗೃಹ ಕಚೇರಿಯಲ್ಲಿ ನಡೆಯಿತು.

ಬೂತ್, ವಲಯ ಹಾಗೂ ಬ್ಲಾಕ್ ಮಟ್ಟದಲ್ಲಿ ಪಕ್ಷ ಸಂಘಟನೆ ಹಾಗೂ ಮುಂಬರುವ ಹಲವು ಪ್ರಮುಖ ಚುನಾವಣೆಗಳ ಪೂರ್ವ ತಯಾರಿ ಬಗ್ಗೆ ಸಭೆಯಲ್ಲಿ ಗಂಭೀರವಾಗಿ ಚರ್ಚೆ ನಡೆಯಿತು.

ಶಾಸಕರು ಸಂಘಟನೆಯ ಕುರಿತು ವಿಶೇಷ ಆಸಕ್ತಿ ವಹಿಸುವಂತೆ ಕರೆ ನೀಡಿದರಲ್ಲದೇ, ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ನಿಭಾಯಿಸಲೇಬೇಕೆಂದು ಸೂಚಿಸಿದರು. ಅಗತ್ಯ ಬೀಳುವ ಕಡೆ ಬದಲಾವಣೆಯನ್ನು ಮಾಡಿ, ಪಕ್ಷ ಸಂಘಟನೆಯಲ್ಲಿ ಎಲ್ಲರೂ ತೊಡಗಿಕೊಳ್ಳಬೇಕೆಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ರೋನಿ ಅವರು ಶಾಸಕರ ಕಾರ್ಯವೈಖರಿಯನ್ನು ಮೆಚ್ಚಿ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ವಹಿಸಿದರು.

ಸಭೆಯಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ತಾಲೂಕು ಬಗರ್ ಹುಕುಂ ಅಧ್ಯಕ್ಷ ಅಣ್ಣಳಮಾಡ ಲಾಲಾ ಅಪ್ಪಣ್ಣ, ಹಿರಿಯರಾದ ಮೂಕಳೇರ ಕುಶಾಲಪ್ಪ, ಎ.ಜೆ. ಬಾಬು, ಪಕ್ಷದ ಪ್ರಮುಖರು ಪೃಥ್ವಿ, ಮಣಿಕಂಠ, ಪಂಕಜ, ಜುನೈದ್, ಭಾರತೀ, ಅಜಿತ್ ಅಯ್ಯಪ್ಪ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ವಲಯ ಅಧ್ಯಕ್ಷರುಗಳು,

ಕೆ.ಪಿ.ಸಿ.ಸಿ.-ಡಿ.ಸಿ.ಸಿ. ಪದಾಧಿಕಾರಿಗಳು, ಮುಂಚೂಣಿ ಘಟಕದ ಅಧ್ಯಕ್ಷರುಗಳು ಪದಾಧಿಕಾರಿಗಳು ಹಾಗೂ ಪ್ರಮುಖರು ಭಾಗವಹಿಸಿದ್ದರು.