ವೀರಾಜಪೇಟೆ, ನ. ೧: ಪದವಿಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ್ದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಎಸ್.ಎಂ.ಎಸ್. ಕಾಲೇಜು ಅರಮೇರಿಯ ವಿದ್ಯಾರ್ಥಿ ದ್ವಿತೀಯ ವಾಣಿಜ್ಯ ವಿಭಾಗದ ಸುಫಿಯನ್ ಶಾಹುಲ್ ಭಾರದ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ, ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಹೇಮಾವತಿ ಕೆ.ಪಿ. ಕ್ರಾಸ್ ಕಂಟ್ರಿ ರೇಸ್‌ನಲ್ಲಿ ತೃತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.