ಮಡಿಕೇರಿ: ಯುವಜನಾಂಗದಲ್ಲಿ ಭಾಷೆ, ಸಂಸ್ಕöÈತಿಯ ಬಗ್ಗೆ ಗೌರವ ಬೆಳೆಯುವ ಹಾಗೆ ಮಾಡುವುದು ಪ್ರತಿಯೊಬ್ಬ ಪ್ರಜ್ಞಾವಂತ ಕನ್ನಡಿಗನ ಕರ್ತವ್ಯ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ. ಬಿ. ರಾಘವ ಹೇಳಿದರು.
ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ನಡೆದ ೭೦ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೇರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕನ್ನಡದ ಕುರಿತು ಸಮ್ಮೇಳನ, ಕಮ್ಮಟ, ವಿಚಾರ ಸಂಕಿರಣಗಳ ಮೂಲಕ ಕನ್ನಡ ಭಾಷೆಯ ಕುರಿತು ಜಾಗೃತಿಯನ್ನು ಮೂಡಿಸೋಣ ಎಂದರು. ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಬೆಂಗಳೂರಿನ ಜೈನ್ ಡೀಮ್ಡ್ ಟು ಬಿ ವಿಶ್ವ ವಿದ್ಯಾಲಯದ ಡಾ. ಕೆ.ಬಿ. ಶೋಭಾ ಅವರು ಕನ್ನಡ ಭಾಷೆಯ ಪ್ರಾಚೀನತೆ ಕುರಿತು ಮಾತನಾಡಿ, ಶ್ರೀವಿಜಯನ ಕವಿರಾಜಮಾರ್ಗದ "ಕಾವೇರಿಯಿಂದಾಮ ಗೋದಾವರಿವರಮಿರ್ದ ನಾಡದ" ಎಂದು ಕನ್ನಡ ನಾಡಿನ ವಿಸ್ತಾರತೆಯ ಬಗ್ಗೆ ಮತ್ತು ಕರ್ನಾಟಕವನ್ನು ಕರುನಾಡು ಎಂದು ಕಪುö್ಪ ಮಣ್ಣಿನ ನಾಡು ಎಂದು ಕರೆಯಲಾಗುತ್ತಿತ್ತು ಎಂದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಬೊಳ್ಳಜಿರ ಬಿ. ಅಯ್ಯಪ್ಪ ಮಾತನಾಡಿ, ಕನ್ನಡವನ್ನು ಉಳಿಸಿ, ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.
ಮತ್ತೋರ್ವ ಮುಖ್ಯ ಅತಿಥಿ ದಾನಿ ದಮಯಂತಿ ಪೊನ್ನಪ್ಪ ಮಾತನಾಡಿ, ಕನ್ನಡ ಭಾಷೆಯಾಗಿದ್ದು ಚಂದದ ಭಾಷೆ. ಹೆಚ್ಚು ಹೆಚ್ಚು ಬಳಸಿ, ಬೆಳೆಸಬೇಕು ಎಂದು ಕರೆ ನೀಡಿದರು. ಉಪನ್ಯಾಸÀಕರ ಬಿ.ಹೆಚ್. ತಳವಾರ್ ಮಾತನಾಡಿ, ಕರ್ನಾಟಕ ಏಕೀಕರಣದ ಇತಿಹಾಸವನ್ನು ಮತ್ತು ಕನ್ನಡ ಭಾಷೆಯ ಮಹತ್ವವನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರೊ. ಈ. ತಿಪ್ಪೇಸ್ವಾಮಿ, ಡಾ. ರಾಜೇಂದ್ರ, ಡಾ. ಶೈಲಶ್ರೀ, ಡಾ. ರೇಣುಶ್ರೀ, ಪ್ರದೀಪ್ ಭಂಡಾರಿ, ಖುರ್ಶಿದಾ ಮುಂತಾದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಸಪ್ನ, ಚೋಂದಮ್ಮ ಮತ್ತು ಲಿಖಿತ ಪ್ರಾರ್ಥಿಸಿ ಮತ್ತು ಕನ್ನಡ ಗೀತೆಗಳನ್ನು ಹಾಡಿದರು.
ಪ್ರೊ. ಶ್ರೀಧರ್ ಆರ್. ಹೆಗ್ಡೆ ಸ್ವಾಗತಿಸಿದರು, ಡಾ. ಮಹಾಲಕ್ಷಿ÷್ಮ ನಿರೂಪಿಸಿ, ಪ್ರೊ. ಕೃಷ್ಣ ಎಂ.ಪಿ. ವಂದಿಸಿದರು. ಸಭಾ ಕಾರ್ಯಕ್ರಮವನ್ನು ದೀಪ ಬೆಳಗುವುದರ ಜೊತೆಗೆ ತಾಯಿ ಭುವನೇಶ್ವರಿಗೆ ಪುಷ್ಪಾರ್ಚನೆಯ ಮೂಲಕ ಉದ್ಘಾಟಿಸಲಾಯಿತು.
ಕಾಲೇಜಿಗೆ ಅವಶ್ಯ ಸಲಕರಣೆಗಳನ್ನು ನೀಡಿದ ದಾನಿಗಳಾದ ದಮಯಂತಿ ಪೊನ್ನಪ್ಪ ಅವರನ್ನು ಇದೇ ಸಂದರ್ಭ ಸನ್ಮಾನಿಸಿ, ಗೌರವಿಸಲಾಯಿತು.ನಾಪೋಕ್ಲು: ಕನ್ನಡ ಸಾಹಿತ್ಯ ಪರಿಷತ್ತು ಮಡಿಕೇರಿ ತಾಲೂಕು, ಕನ್ನಡ ಸಾಹಿತ್ಯ ಪರಿಷತ್ತು ನಾಪೋಕ್ಲು ಹೋಬಳಿ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ನಾಪೋಕ್ಲು ಇವರ ಸಂಯುಕ್ತಾಶ್ರಯದಲ್ಲಿ ೭೦ನೇ ಕನ್ನಡ ರಾಜ್ಯೋತ್ಸವವನ್ನು ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ ಸಡಗರ ಸಂಭ್ರಮದಿAದ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಪ್ರಾಂಶುಪಾಲೆ ನೀತಾ ಕೆ.ಡಿ. ಮಾತನಾಡಿ, ವಿದ್ಯಾರ್ಥಿಗಳು ಕನ್ನಡಾಭಿಮಾನವನ್ನು ಬೆಳೆಸಿಕೊಳ್ಳಬೇಕೆಂದು ಕಿವಿಮಾತು ಹೇಳುತ್ತಾ, ತಮ್ಮ ಶೈಕ್ಷಣಿಕ ಪ್ರಗತಿಯಲ್ಲಿ ಗುರಿ ತಲುಪಿ ದೇಶ-ವಿದೇಶಗಳಲ್ಲಿ ಹೆಸರುಗಳಿಸಿರೆಂದು ಆಶಿಸಿದರು. ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಕಡ್ಲೆರ ತುಳಸಿ ಮೋಹನ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮೊಳಗೆ ಅಡಗಿರುವ ಕಲೆಯನ್ನು ಹೊರತರಲು ಇಂತಹ ಸಂಭ್ರಮಾಚರಣೆಗಳು ಅವಶ್ಯಕ ಎಂದು ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಬಾಳೆಯಡ ದಿವ್ಯಾ ಮಂದಪ್ಪ ಅವರು ಮಾತನಾಡಿ, ವಿದ್ಯಾರ್ಥಿಗಳ ಶಿಸ್ತು ಶಿಕ್ಷಣ ಮತ್ತು ಗುರಿ ಸಾಧನೆಗೆ ದಾರಿಯಾಗಿದೆ ಎಂದರು. ನಾಪೋಕ್ಲು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೆರವಂಡ ಉಮೇಶ್ ರಾಜ್ಯೋತ್ಸವದ ಕುರಿತು ಮಾತನಾಡಿದರು. ಕನ್ನಡ ಶಿಕ್ಷಕಿ ರೂಪ ಕನ್ನಡದ ಹೆಸರನ್ನು ಜಗಕೆ ಸಾರುವಂತೆ ಮಾಡಿದವರನ್ನು ಸ್ಮರಿಸಿದರು.
ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಕವನ ರಚನೆ, ಚಿತ್ರಕಲೆ ಹಾಗೂ ಸಮೂಹ ಗಾಯನ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ದೈಹಿಕ ಶಿಕ್ಷಣ ಶಿಕ್ಷಕಿ ಶ್ಯಾಮಿಲಿ ಬಹುಮಾನ ವಿಜೇತರನ್ನು ಘೋಷಿಸಿದರು.
ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನವನ್ನು ವಿತರಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿನಿ ನಿಶಾ ಪ್ರಾರ್ಥಿಸಿದರು, ಕೀರ್ತನ ಸ್ವಾಗತಿಸಿ, ಅಂಜಲಿ ನಿರೂಪಿಸಿ, ಪ್ರೀತೇಶ್ ವಂದಿಸಿದರು.ಸೋಮವಾರಪೇಟೆ: ಇಲ್ಲಿನ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಬೆಳಿಗ್ಗೆ ಆಟೋ ನಿಲ್ದಾಣದಲ್ಲಿ ಧ್ವಜಾರೋಹಣ ನಡೆಯಿತು. ಇದರೊಂದಿಗೆ ತಲ್ತರೆಶೆಟ್ಟಳ್ಳಿ ಗ್ರಾಮದ ನಿವಾಸಿ, ಪ್ರಸ್ತುತ ಲಂಡನ್‌ನಲ್ಲಿ ಉದ್ಯೋಗದಲ್ಲಿರುವ ಗಿರಿ ಜೋಯಪ್ಪ ಅವರು ನಿಲ್ದಾಣದಲ್ಲಿ ನಿರ್ಮಿಸಿಕೊಟ್ಟಿರುವ ನೂತನ ಕನ್ನಡ ಧ್ವಜ ಸ್ಥಂಭದ ಉದ್ಘಾಟನೆ ಮತ್ತು ನಿರಂತರ ಹಾರಾಟದ ಕನ್ನಡ ಧ್ವಜಾರೋಹಣ ನೆರವೇರಿಸಲಾಯಿತು.
ನಂತರ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ ನಡೆಯಿತು. ಪಟ್ಟಣದ ಕಕ್ಕೆಹೊಳೆ ಜಂಕ್ಷನ್‌ನಿAದ ಪ್ರಮುಖ ಬೀದಿಗಳಲ್ಲಿ ಆಟೋಗಳ ಮೆರವಣಿಗೆ ಜರುಗಿತು. ಬೆಳಿಗ್ಗೆ ಶಾಲಾ ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಉಪಹಾರ ವಿತರಿಸಲಾಯಿತು.
ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ನಿರ್ಮಿಸಿದ್ದ ತಾತ್ಕಾಲಿಕ ವೇದಿಕೆಯಲ್ಲಿ ಆಯೋಜಿಸಿದ್ದ ೧೮ನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ ಸಮಾರಂಭ ಹಾಗೂ ತಾಲೂಕು ಮಟ್ಟದ ಕುಣಿಯೋಣು ಬಾರಾ ನೃತ್ಯ ಸ್ಪರ್ಧೆಯನ್ನು ಮಾಜಿ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕರ್ನಾಟಕದಲ್ಲಿ ಆಡಳಿತ ಭಾಷೆಯನ್ನಾಗಿ ಕನ್ನಡವನ್ನು ಅಳವಡಿಸಿದ್ದು, ಇದು ಇನ್ನಷ್ಟು ಪರಿಣಾಮಕಾರಿಯಾಗಬೇಕು. ಕನ್ನಡ ಭಾಷೆಯ ಉಳಿವಿಗೆ ಆಟೋ ಚಾಲಕರ ಸೇವೆ ಅಪಾರವಾಗಿದೆ ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ ಮಾತನಾಡಿ, ಕನ್ನಡ ಮಾತನಾಡುವ ಪ್ರದೇಶಗಳನ್ನು ಒಗ್ಗೂಡಿಸಿ ಮೈಸೂರು ರಾಜ್ಯವಾಗಿ ನಂತರ ಕರ್ನಾಟಕವನ್ನಾಗಿ ಮಾಡಲು ನಾಡಿನ ಹಲವು ಹಿರಿಯರು, ಕವಿಗಳು, ಸಾಹಿತಿಗಳು ಶ್ರಮಪಟ್ಟಿದ್ದಾರೆ.
ಅವರೆಲ್ಲರ ಶ್ರಮದ ಫಲವಾಗಿ ಇಂದು ಸುಂದರವಾದ ಕನ್ನಡ ನಾಡು ರೂಪಿತವಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ಉಮೇಶ್ ವಹಿಸಿದ್ದರು.
ವೇದಿಕೆಯಲ್ಲಿ ಪ್ರವೀಣ್‌ಶೆಟ್ಟಿ ಬಣದ ಕರವೇ ಜಿಲ್ಲಾಧ್ಯಕ್ಷ ಕೆ.ಎನ್. ದೀಪಕ್, ಯುವ ಘಟಕದ ಅಧ್ಯಕ್ಷ ವಸಂತ್, ನಗರ ಘಟಕದ ಅಧ್ಯಕ್ಷ ಮಂಜುನಾಥ್, ಪ್ರಮುಖರಾದ ಶರತ್‌ಚಂದ್ರ, ಎಸ್.ಆರ್. ಸೋಮೇಶ್, ಇಂದಿರಾಗಾAಧಿ ಅಭಿಮಾನಿಗಳ ಸಂಘದ ಅಧ್ಯಕ್ಷ ಹೆಚ್.ಎ. ನಾಗರಾಜು, ರವಿ ಸೇರಿದಂತೆ ಇತರರು ಇದ್ದರು.
ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಉಪಾಧ್ಯಕ್ಷ ವೈ. ಜೀವನ್, ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಫಿ ಬೇಟು, ಸಹ ಕಾರ್ಯದರ್ಶಿ ಫೆಲಿಕ್ಸ್, ಸದಸ್ಯ ಅಬ್ಬಾಸ್ ಸೇರಿದಂತೆ ಇತರರು ಕಾರ್ಯಕ್ರಮ ನಿರ್ವಹಿಸಿದರು.ಸಿದ್ದಾಪುರ: ಸಿದ್ದಾಪುರ ಸಂತ ಅನ್ನಮ್ಮ ವಿದ್ಯಾ ಸಂಸ್ಥೆಯಲ್ಲಿ ೭೦ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು
ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಸಾಹಿತಿ ಮಂಡೇಪAಡ ಗೀತಾ ಮಂದಣ್ಣ ಕರ್ನಾಟಕ ಕನ್ನಡ ಭಾಷೆ, ಸಂಸ್ಕೃತಿ, ಸಿರಿವಂತಿಕೆಯಲ್ಲಿ, ಶಿಕ್ಷಣದಲ್ಲಿ ವಿದ್ಯೆಯಲ್ಲಿ, ಸಾಹಿತ್ಯದಲ್ಲಿ, ಉದ್ಯೋಗದಲ್ಲಿ, ಮುಂಚೂಣಿಯಲ್ಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಇಂಗ್ಲೀಷ್ ಪ್ರಭಾವ ಹೆಚ್ಚಾಗುತ್ತಿದು,್ದ ಮುಂದಿನ ದಿನಗಳಲ್ಲಿ ಕನ್ನಡ ಭಾಷೆಯನ್ನು ನಮ್ಮ ದೈನಂದಿನ ಬದುಕಿನಲ್ಲಿ ಬಳಸಬೇಕು ಎಂದು ಸಲಹೆ ನೀಡಿದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅನ್ನಮ್ಮ ಶಾಲೆಯ ವ್ಯವಸ್ಥಾಪಕಿ ಮಾರ್ಜರಿ ವಹಿಸಿದ್ದರು.
ಇದೇ ಸಂದರ್ಭದಲ್ಲಿ ಮಂಡೇಪAಡ ಗೀತಾ ಮಂದಣ್ಣ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು
ಕಾರ್ಯಕ್ರಮದಲ್ಲಿ ಸಂತ ಅನ್ನಮ್ಮ ಶಾಲೆಯ ಪ್ರಾಂಶುಪಾಲೆ ಲೆನಿಟ್, ಕಾಲೇಜು ಪ್ರಾಂಶುಪಾಲೆ ರಜಿನ ತೋಮಸ್, ಶಾಲಾ ಶಿಕ್ಷಕಿಯರಾದ ಲೇನಿ, ಸುನಿತಾ, ತೆರೇಸ, ಪ್ರಮೀಳಾ, ಸುಜಾತ, ರೀಟಾ, ಸೇರಿದಂತೆ ಪೋಷಕರು, ಮಕ್ಕಳು ಹಾಜರಿದ್ದರು.ಕೂಡಿಗೆ: ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ನಡೆಯಿತು. ಕನ್ನಡ ಉಪನ್ಯಾಸಕ ರವೀಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಕನ್ನಡ ನಾಡು ನುಡಿಯ ಬಗ್ಗೆ ಉಪನ್ಯಾಸ ನೀಡಿದರು.
ಕನ್ನಡ ಭಾಷೆ ಉಳಿಯಬೇಕಾದರೆ ಕನ್ನಡ ನಾಡಿನಲ್ಲಿರುವ ಎಲ್ಲರೂ ಕನ್ನಡವನ್ನು ಬೆಳೆಸಬೇಕೆಂದರು. ಕಾರ್ಯಕ್ರಮದ ಅಧ್ಯಕ್ಷÀತೆ ವಹಿಸಿ ಮಾತನಾಡಿದ ಹಂಡ್ರAಗಿ ನಾಗರಾಜ್ ನಮ್ಮ ನೆಲ ನಮ್ಮ ಜಲ ನಮ್ಮ ಭಾಷೆ ದೇಶದಲ್ಲಿ ಸದಾ ಶ್ರೇಷ್ಠತೆಯನ್ನು ಕಾಪಾಡಿಕೊಂಡು ಬಂದಿದೆ ಎಂದು ತಿಳಿಸಿದರು.
ಈ ಸಂದರ್ಭ ತಾಲೂಕು ಮತ್ತು ಜಿಲ್ಲಾಮಟ್ಟದಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಲಾಯಿತು. ಕನ್ನಡ ಸಾಹಿತ್ಯಕ್ಕೆ ಸಂಬAಧಿಸಿದAತೆ ವಿವಿಧ ಸ್ಪರ್ಧೆಗಳನ್ನು ನಡೆಸಿ ವಿಜೇತರಿಗೆ ಬಹುಮಾನ ನೀಡಲಾಯಿತು.
ವೇದಿಕೆಯಲ್ಲಿ ಹಿರಿಯ ಉಪನ್ಯಾಸಕರಾದ ನಾಗಪ್ಪ ಯಾಲಕ್ಕಿ ಕಟ್ಟೆ, ರಮೇಶ್, ಹನುಮರಾಜು, ಸೂಸಿ ತಂಗಚ್ಚನ್, ಲಿನೆಟ್ ಫರ್ನಾಂಡಿಸ್, ಪ್ರೇಕ್ಷಿತ, ಕಾವೇರಮ್ಮ ಗೌತಮಿ ಇತರÀರಿದ್ದರು.ವೀರಾಜಪೇಟೆ: ವೀರಾಜಪೇಟೆ ಕರ್ನಾಟಕ ಸಂಘದ ಆವರಣದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಕರ್ನಾಟಕ ಸಂಘದ ಅಧ್ಯಕ್ಷ ಮಾಳೇಟಿರ ಎಂ. ಬೆಲ್ಲು ಬೋಪಯ್ಯ ಸಂಘದ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ಬಳಿಕ ಮಾತನಾಡಿ, ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಅಚರಿಸುವುದು ಮತ್ತು ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕöÈತಿ, ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.
ಗಡಿ ಭಾಗವಾದ ವೀರಾಜಪೇಟೆ ವ್ಯಾಪ್ತಿಯಲ್ಲಿ ಕನ್ನಡ ನಾಡು, ನುಡಿಯನ್ನು ಉಳಿಸಿ - ಬೆಳೆಸುವ ನಿಟ್ಟಿನಲ್ಲಿ ಕರ್ನಾಟಕ ಸಂಘದಿAದ ಕನ್ನಡದ ಬಗ್ಗೆ ಹೆಚ್ಚಿನ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದಾಗಿ ತಿಳಿಸಿದರು. ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ಸಂದರ್ಭ ಕರ್ನಾಟಕ ಸಂಘದ ಉಪಾಧ್ಯಕ್ಷ ಚೇನಂಡ
ಗಿರೀಶ್ ಪೂಣಚ್ಚ, ಕಾರ್ಯದರ್ಶಿ ಮುಂಡ್ಯೋಳAಡ ಕುಸುಮ ಸೋಮಣ್ಣ, ಕೋಶಾಧಿಕಾರಿ ಕೋಟೆರ ಯು.ಗಣೇಶ್ ತಮ್ಮಯ್ಯ, ನಿರ್ದೇಶಕರಾದ ಸಿ.ಪಿ. ಕಾವೇರಪ್ಪ, ಸಿ.ಎಂ. ಸುರೇಶ್ ನಾಣಯ್ಯ, ಪುಗ್ಗೇರ ನಂದ, ಎ.ಎಂ. ಜೋಯಪ್ಪ, ಮುಂಡAಡ ರಾಣು ಮಂದಣ್ಣ, ಬೊಳ್ಯಪಂಡ ಎಂ. ಸುರೇಶ್, ಬಾಚೀರ ಆರ್. ಗಣೇಶ್, ಕಂಜಿತAಡ ಎಂ. ಮೊಣ್ಣಪ್ಪ, ಮೂಕಚಂಡ ಬಿ. ದೇವಯ್ಯ, ಚಾರಿಮಂಡ ಯು. ಶರಣು ನಂಜಪ್ಪ, ಬಲ್ಲಡಿಚಂಡ ಜಿ. ವಿಜು ಕುಶಾಲಪ್ಪ, ಪೋರೆರ ಎಂ. ಬಿದ್ದಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.ಚೆಯ್ಯಂಡಾಣೆ: ನಾಪೋಕ್ಲಿನ ನಾಲ್ಕುನಾಡು ಆಟೋ ಚಾಲಕರ ಮತ್ತು ಮಾಲೀಕರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿAದ ಆಚರಿಸಲಾಯಿತು.
ಪಟ್ಟಣದ ಆಟೋ ನಿಲ್ದಾಣದಲ್ಲಿ ಸಂಘದ ಅಧ್ಯಕ್ಷ ಟಿ.ಪಿ. ಸುಕುಮಾರ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸಾರ್ವಜಕರಿಗೆ ಸಿಹಿ ಹಂಚಲಾಯಿತು.
ಈ ಸಂದರ್ಭ ಸಂಘದ ಗೌರವಾಧ್ಯಕ್ಷ ಅಬ್ದುಲ್ ರಜಾಕ್, ಕಾರ್ಯದರ್ಶಿ ಸತೀಶ್ ಸೇರಿದಂತೆ ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.ವೀರಾಜಪೇಟೆ: ವೀರಾಜಪೇಟೆ ಪುರಸಭೆಯ ವತಿಯಿಂದ ಕಚೇರಿಯ ಮುಂಭಾಗದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಧ್ವಜಾರೋಹಣ ನೆರವೇರಿಸಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಬಳಿಕ ಮಾತನಾಡಿದ ಪುರಸಭೆ ಅಧ್ಯಕ್ಷೆ ಮನೆಯಪಂಡ ದೇಚಮ್ಮ ಕಾಳಪ್ಪ, ಪ್ರತಿವರ್ಷ ನವೆಂಬರ್ ೧ ರಂದು ಎಲ್ಲೆಡೆ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಅಚರಿಸುವುದು ಮತ್ತು ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕöÈತಿ, ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.
ಪುರಸಭೆ ಮುಖ್ಯಾಧಿಕಾರಿ ಪಿ.ಕೆ. ನಾಚಪ್ಪ ಮಾತನಾಡಿ, ಮೈಸೂರು ರಾಜ್ಯವು ಕರ್ನಾಟಕವಾಗಿ ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ ಎಂದರು. ಉಪಾಧ್ಯಕ್ಷೆ ಫಸಿಹಾ ತಬ್ಸಂ, ಸದಸ್ಯರುಗಳಾದ ಡಿ.ಪಿ. ರಾಜೇಶ್, ಎಸ್.ಹೆಚ್. ಮತೀನ್, ಮಹಮ್ಮದ್ ರಾಫಿ, ಅಗಸ್ಟಿನ್, ಮಹದೇವ್, ಸುನಿತಾ ಸೇರಿದಂತೆ ಸದಸ್ಯರು, ನಾಮ ನಿರ್ದೇಶಿತ ಸದಸ್ಯರುಗಳಾದ ಹಮೀದ್, ರವಿ, ಮೋಹನ್, ದಿನೇಶ್, ಕಚೇರಿ ಸಿಬ್ಬಂದಿಗಳು, ಪೌರ ಕಾರ್ಮಿಕರು ಹಾಜರಿದ್ದರು.ಮಡಿಕೇರಿ: ಕೊಡಗು ಜಿಲ್ಲಾ ವಿಶೇಷಚೇತನರ ಸಂಘ ಹಾಗೂ ವಿಕಲಚೇತನರ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಮಡಿಕೇರಿಯಲ್ಲಿ ರಾಜ್ಯೋತ್ಸವವನ್ನು ಸಂಭ್ರಮದಿAದ ಆಚರಿಸಲಾಯಿತು. ಸಂಘದ ಕಟ್ಟಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಜೆ.ಎ. ಮಹೇಶ್ವರ್ ಹಾಗೂ ಪದಾಧಿಕಾರಿಗಳು ಕನ್ನಡಾಂಬೆ ಭುವನೇಶ್ವರಿಗೆ ಪುಷ್ಪಾರ್ಚನೆಯ ಮೂಲಕ ಗೌರವ ಸಲ್ಲಿಸಿದರು. ಈ ಸಂದರ್ಭ ಸಂಘದ ಕಾರ್ಯದರ್ಶಿ ಬಿ.ಎಂ. ತಿರುಮಲೇಶ್ವರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ. ಹಸ್ಸನ್, ಉಪಾಧ್ಯಕ್ಷೆ ಎಂ.ಎನ್. ವೀಣಾ, ನಿರ್ದೇಶಕರಾದ ಪಿ.ಡಿ. ಹೇಮಾವತಿ, ಟಿ. ಮಿಲನ, ಕವನ, ಜಿತೇಶ್, ಜುಬೇರ್ ರಾಮಚಂದ್ರ ಹಾಗೂ ಸಂಘದ ಇತರ ನಿರ್ದೇಶಕರು ಭಾಗವಹಿಸಿದ್ದರು.ಶನಿವಾರಸಂತೆ: ಪಟ್ಟಣದ ಮಧ್ಯಪೇಟೆಯಲ್ಲಿರುವ ಶ್ರೀವಿಘ್ನೇಶ್ವರ ಆಟೋ ಚಾಲಕರ ಸಂಘದ ವತಿಯಿಂದ ಶನಿವಾರ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ-ಸಡಗರದಿAದ ಆಚರಿಸಲಾಯಿತು.
ಧ್ವಜಾರೋಹಣ ನೆರವೇರಿಸಿದ ಶನಿವಾರಸಂತೆ ಪೊಲೀಸ್ ಠಾಣೆಯ ಪಿ.ಎ. ಗೋವಿಂದ್ ರಾಜ್ ಮಾತನಾಡಿ, ಕನ್ನಡ ನಾಡು-ನುಡಿಯನ್ನು ಗೌರವಿಸಬೇಕೆಂದರು. ಮುಖ್ಯ ಅತಿಥಿಗಳಾಗಿ ಡಾ. ಪುಟ್ಟರಾಜ್, ಡಾ. ಚಿದಾನಂದ್, ಆಟೋ ಚಾಲಕರ ಸಂಘದ ಪದಾಧಿಕಾರಿಗಳಾದ ವೀರಭದ್ರ, ಮಂಜು, ಉಮೇಶ್, ರಾಜಶೇಖರ್, ಪ್ರದೀಪ್, ಸುರೇಶ್, ಸತ್ಯವೇಲು, ಮಂಜು, ಮುರುಗ, ಪುನೀತ್ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ಹಾಜರಿದ್ದರು.ಮಡಿಕೇರಿ: ಕನ್ನಡವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ನುಡಿದರು.
ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಮಡಿಕೇರಿಯ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ಮಾಡಿ ಅವರು ಮಾತನಾಡಿದರು.
ಕನ್ನಡ ನಾಡು, ನುಡಿ, ಆಚಾರ - ವಿಚಾರ, ಪರಂಪರೆ ರಕ್ಷಣೆ ಆಗಬೇಕಿದೆ ಎಂದರು. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ, ಹರಿದು ಹಂಚಿ ಹೋಗಿದ್ದ ಕನ್ನಡ ನಾಡನ್ನು ಏಕೀಕರಣಗೊಳಿಸುವ ಮೂಲಕ ಹಿರಿಯರು ನಮಗೆ ಕನ್ನಡ ನಾಡನ್ನು ನೀಡಿದ್ದು, ಅದನ್ನು ಉಳಿಸಬೇಕಾದದ್ದು ನಮ್ಮ ನಿಮ್ಮೆಲ್ಲರ ಕರ್ತವ್ಯ ಎಂದರು.
ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಾಸು ರೈ ಮಾತನಾಡಿದರು. ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಎಸ್.ಐ. ಮುನೀರ್ ಅಹ್ಮದ್, ರೇವತಿ ರಮೇಶ್, ಕೋಶಾಧಿಕಾರಿ ಸಂಪತ್ ಕುಮಾರ್, ಕಚೇರಿ ಸಿಬ್ಬಂದಿ ರೇಣುಕಾ, ಸದಸ್ಯರಾದ ಅಜಯ್ ಉಪಸ್ಥಿತರಿದ್ದರು.ಚೆಯ್ಯಂಡಾಣೆ: ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕಿ ಹೆಚ್.ಆರ್. ಪ್ರೇಮಕುಮಾರಿ ವಹಿಸಿ ಮಾತನಾಡಿ, ಕನ್ನಡವನ್ನು ಪ್ರತಿಯೊಬ್ಬರೂ ಕಲಿಯುವಂತಾಗಬೇಕು. ಇತರ ಭಾಷೆಗಿಂತ ಕನ್ನಡಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದರು.
ಕಾರ್ಯಕ್ರಮದಲ್ಲಿ ಶಾಲೆಯ ವಿದ್ಯಾರ್ಥಿನಿ ಡೆಲೀನ ಕೆ.ಜಿ. ಮುಖ್ಯ ಭಾಷಣ ಮಾಡಿದರು.
ಶಿಕ್ಷಕಿ ಸತ್ಯಮ್ಮ ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿದ್ಯಾರ್ಥಿಗಳಿಂದ ದಿನದ ಮಹತ್ವದ ಕುರಿತು ಭಾಷಣ, ಹಾಡು, ನಾಡಗೀತೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಈ ಸಂದರ್ಭ ಶಿಕ್ಷಕಿ ಜಯಪ್ರದ, ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.