ಪೊನ್ನಂಪೇಟೆ, ನ. ೨: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಗೋಣಿಕೊಪ್ಪಲು ಕಾಪ್ಸ್ ಪದವಿಪೂರ್ವ ಕಾಲೇಜು ಸಹಯೋಗದಲ್ಲಿ ನಡೆದ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಥ್ರೋಬಾಲ್ ಪಂದ್ಯಾವಳಿಯಲ್ಲಿ ಅರ್ವತೊಕ್ಕಲು ಸರ್ವದೈವತಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಸತತವಾಗಿ ೪ನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.

ವಿಜೇತ ತಂಡಕ್ಕೆ ದೈಹಿಕ ಶಿಕ್ಷಣ ಶಿಕ್ಷಕ ಪ್ರಮೋದ್ ಗೌಡ ತರಬೇತಿ ನೀಡಿದ್ದರು.