ವೀರಾಜಪೇಟೆ, ನ. ೨: ವೀರಾಜಪೇಟೆಯ ಅಂಬೇಡ್ಕರ್ ಭವನದಲ್ಲಿ ವೀರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಭೋಸರಾಜು, ಪ್ರತಿಯೊಂದು ಇಲಾಖೆಯ ವರದಿ ತರಿಸಿಕೊಂಡು ಕೂಲಂಕಷವಾಗಿ ಪರಿಶೀಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ಸಂದರ್ಭ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟ್‌ರಾಜ್, ಜಿ.ಪಂ ಸಿಇಓ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಾನ್ಸನ್ ಹಾಗೂ ಎಲ್ಲಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.