ಸಿದ್ದಾಪುರ : ಭಾರತೀಯರನ್ನು ಒಂದೇ ರೀತಿ ಕಾಣುವ ಪಕ್ಷ ಭಾರತೀಯ ಜನತಾ ಪಕ್ಷ ಎಂದು ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ವ್ಯಾಖ್ಯಾನಿಸಿದರು.
ನೆಲ್ಯಹುದಿಕೇರಿ ಗ್ರಾಮದ ನಲ್ವತ್ತೇಕರೆಯಲ್ಲಿ ನಡೆದ ಎಸ್ಸಿ ಮೋರ್ಚಾ ಉದ್ಘಾಟಿಸಿ ಮಾತನಾಡಿದರು. ಇತ್ತೀಚೆಗೆ ಭಾರತೀಯ ಜನತಾ ಪಕ್ಷವನ್ನು ಬ್ರಾಹ್ಮಣರ ಪಕ್ಷ ಎಂದು ಆರೋಪಿಸುತ್ತಿದ್ದಾರೆ. ಆದರೆ ಬಿಜೆಪಿ ಅವದಿಯಲ್ಲಿ ಡಾ. ಅಬ್ದುಲ್ ಕಲಾಂ ರಾಷ್ಟçಪತಿಯಾಗಿದ್ದರು, ಅಲ್ಲದೆ ದ್ರೌಪಧಿ ಮುರ್ಮು, ರಮಾನಾಥ್ ಕೋವಿಂದ್ ಅವರನ್ನೂ ರಾಷ್ಟçಪತಿ ಮಾಡಿರುವುದು ಬಿಜೆಪಿ ಪಕ್ಷ ಮಾತ್ರ. ಕಾಂಗ್ರೆಸ್ ಸರ್ಕಾರವು ದಲಿತರನ್ನು ಮತ ಬ್ಯಾಂಕ್ಗಾಗಿ ಬಳಸುತ್ತಿದೆ ಎಂದು ಆರೋಪಿಸಿದರು. ರಾಜ್ಯ ಸರ್ಕಾರವು ಅಭಿವೃದ್ಧಿಯನ್ನು ಮಾಡದೆ ಆರ್.ಎಸ್.ಎಸ್. ಸಂಘಟನೆಯನ್ನು ಬ್ಯಾನ್ ಮಾಡುವತ್ತ ಗಮನ ಹರಿಸುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಕೆ. ಲೋಕೇಶ್ ಮಾತನಾಡಿ, ಡಾ .ಅಂಬೇಡ್ಕರ್ ಅವರ ಪ್ರಯತ್ನದಿಂದಲೇ ದಲಿತರು ಉದ್ಯೋಗ, ರಾಜಕಾರಣ, ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಮುಂದುವರೆಯಲು ಕಾರಣವಾಗಿದೆ. ರಾಜಕೀಯವಾಗಿ ದಲಿತರ ಮತವನ್ನು ಪಡೆಯಲು ಅಂಬೇಡ್ಕರ್ ಹೆಸರಿನಲ್ಲಿ ಎಲ್ಲೆಡೆ ಪ್ರಚಾರ ಮಾಡುತ್ತಿರುವ ಕಾಂಗ್ರೆಸ್ ಪಕ್ಷವು ಅಂಬೇಡ್ಕರ್ ಅವರಿಗೆ ಅವಮಾನ, ಅನ್ಯಾಯ ಮಾಡಿರುವುದನ್ನು ಮರೆಮಾಚಿ ಇಂದು ಅಂಬೇಡ್ಕರ್ ಹೆಸರಿನಲ್ಲಿ ಮತ ಯಾಚಿಸುತ್ತಿರುವುದು ನಾಚಿಕೆಗೇಡಿನ ವಿಷಯವಾಗಿದೆ ಎಂದರು.
ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ರವಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಅವ್ಯವಹಾರದಿಂದ ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್ ಸರ್ಕಾರವು ಪರಿಶಿಷ್ಟ ಜಾತಿಯವರನ್ನು ಮತ ಬ್ಯಾಂಕ್ಗೆ ಬಳಸುತ್ತಿದೆ. ಆದರೆ ಪರಿಶಿಷ್ಟ ಜಾತಿಯವರಿಗೆ ಯಾವುದೇ ಸೌಲಭ್ಯ ನೀಡುತ್ತಿಲ್ಲ. ಈ ನಡುವೆ ಪರಿಶಿಷ್ಟ ಜಾತಿಯ ನಿಗಮಗಳನ್ನು ಬೇಕಾಬಿಟ್ಟಿ ಬಳಕೆ ಮಾಡುತ್ತಿದೆ ಎಂದು ದೂರಿದರು.
ಈ ಸಂಧಭ ಬಿಜೆಪಿ ಮಂಡಲ ಎಸ್ಸಿ ಮೋರ್ಚಾ ಅಧ್ಯಕ್ಷ ರಾಮಕೃಷ್ಣ, ಬಿಜೆಪಿ ಮಂಡಲ ಅಧ್ಯಕ್ಷ ಗೌತಮ್ ಗೌಡ, ಶಕ್ತಿ ಕೇಂದ್ರ ಪ್ರಮುಖ್ ಬೆಳ್ಳಿಯಪ್ಪ, ಗ್ರಾ.ಪಂ. ಸದಸ್ಯರಾದ ದಮಯಂತಿ, ಸುಜಾತ ಸೇರಿದಂತೆ ಇನ್ನಿತರರು ಹಾಜರಿದ್ದರು.