ನಾಪೋಕ್ಲು, ನ. ೩: ಕ್ರೀಡಾಕೂಟಗಳ ಆಯೋಜನೆಯಿಂದ ಸಮುದಾಯ ದಲ್ಲಿ ಬಾಂಧವ್ಯ ವೃದ್ಧಿಸಲು ಸಾಧ್ಯವಾಗುತ್ತದೆ ಎಂದು ಮುಖ್ಯ ಮಂತ್ರಿ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು.

ಚೆಟ್ಟಿಮಾನಿಯ ಪೂವ್ವಲಮಾನಿ ಯಲ್ಲಿ ನಾಗರಿಕ ಸೇವಾ ಸಮಿತಿಯಿಂದ ಆಯೋಜಿಸಲಾಗಿದ್ದ ೪ನೇ ವರ್ಷದ ಶಾರದ ಪೂಜಾ ಹಾಗೂ ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿ, ನಡೆಸಿಕೊಂಡು ಬರುತ್ತಿರುವ ಕ್ರೀಡೆ ಗ್ರಾಮೀಣ ಪ್ರದೇಶದ ಸಾಮರಸ್ಯಕ್ಕೆ ಕಾರಣವಾಗಿದೆ ಎಂದರು.

ನಾಗರಿಕ ಸೇವಾ ಸಮಿತಿ ಅಧ್ಯಕ್ಷ ಸುರೇಂದ್ರ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಕುಂದಚೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಪಿ. ದಿನೇಶ್, ಅಯ್ಯಂಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್. ಪುಷ್ಪ, ಕುಂದಚೇರಿ ಗ್ರಾಮ ಪಂಚಾಯಿತಿ ಸದಸ್ಯ ಬಸಪ್ಪ, ಹ್ಯಾರಿಸ್, ವಕೀಲರಾದ ಸುನಿಲ್ ಪತ್ರಾವೋ, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ಚೆಟ್ಟಿಮನಿ ವಲಯ ಅಧ್ಯಕ್ಷ ಕೀರ್ತಿ ಉತ್ತಪ್ಪ, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.