ಮಡಿಕೇರಿ, ನ. ೩: ಸರ್ಕಾರದ ಆದೇಶ ಸಂಖ್ಯೆ: ಹಿಂವಕ ೨೮೯ ಬಿಸಿಎ ೨೦೨೫, ದಿನಾಂಕ: ೧೩-೦೮-೨೦೨೫ ರ ಅನ್ವಯ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜನರ (ಹಿಂದುಳಿದ ವರ್ಗಗಳು, ಇತರ ಜಾತಿಗಳು
ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ) ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ದಿನಾಂಕ: ೨೨-೦೯-೨೦೨೫ ರಿಂದ ಪ್ರಾರಂಭಿಸಲಾಗಿದ್ದು, ದಿನಾಂಕ: ೩೧-೧೦-೨೦೨೫ ರಂದು ಮುಕ್ತಾಯಗೊಂಡಿರುತ್ತದೆ.
ವಿವಿಧ ಕಾರಣಗಳಿಂದಾಗಿ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವವರಿಗೆ ಅವಕಾಶ ನೀಡುವ ಹಿನ್ನಲೆಯಲ್ಲಿ ಔಟಿಟiಟಿe ಮೂಲಕ hಣಣಠಿs://ಞsಛಿbseಟಜಿಜeಛಿಟಚಿಡಿಚಿಣioಟಿ.ಞಚಿಡಿಟಿಚಿಣಚಿಞಚಿ.gov.iಟಿ ಬಳಸಿಕೊಂಡು ಸಮೀಕ್ಷೆಯಲ್ಲಿ ಸ್ವಯಂ ಪಾಲ್ಗೊಳ್ಳುವ ಅವಧಿಯನ್ನು ದಿನಾಂಕ: ೧೦-೧೧-೨೦೨೫ ರವರೆಗೆ ಅಂತಿಮವಾಗಿ ವಿಸ್ತರಿಸಲಾಗಿದೆ. ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ನಿರಾಕರಿಸಿದವರು. ಸಮೀಕ್ಷಾದಾರರು ಮನೆಗೆ ಭೇಟಿ ನೀಡಿದಾಗ ಲಭ್ಯವಿಲ್ಲದವರು ಸಹ ಅವಕಾಶವನ್ನು ಬಳಸಿಕೊಂಡು ಮಾಹಿತಿಯನ್ನು ದಾಖಲಿಸಬಹುದಾಗಿದೆ. ಸಮೀಕ್ಷೆಯಿಂದ ಸರ್ಕಾರದ ನೀತಿಗಳನ್ನು ಹಾಗೂ ಯೋಜನೆಗಳನ್ನು ರೂಪಿಸಲು ಸಾಧ್ಯವಾಗುವ ಕಾರಣ ಸ್ವಯಂ ದೃಢೀಕರಣದ ಮೂಲಕ ಎಲ್ಲಾ ನಾಗರಿಕರು ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: ೮೦೫೦೭೭೦೦೦೪ ಅನ್ನು ಸಂಪರ್ಕಿಸಬಹುದಾಗಿದೆ.