ಶನಿವಾರಸಂತೆ, ನ.೩: ಪಟ್ಟಣದ ಭಾರತಿ ವಿದ್ಯಾಸಂಸ್ಥೆಯ ಕ್ರೀಡಾ ಮೈದಾನದಲ್ಲಿ ಜಿಲ್ಲಾಮಟ್ಟದ ಪುಟ್ಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಸೋಮವಾರಪೇಟೆ, ಮಡಿಕೇರಿ, ವೀರಾಜಪೇಟೆ ೩ ತಾಲೂಕುಗಳ ೧೪ ರಿಂದ ೧೭ ವರ್ಷ ವಯೋಮಾನದ ಬಾಲಕ-ಬಾಲಕಿಯರ ೧೨ ತಂಡಗಳು ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದವು.
ಕ್ರೀಡಾಕೂಟವನ್ನು ಉದ್ಘಾಟಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಹರೀಶ್ ಮಾತನಾಡಿ, ದೈಹಿಕ-ಮಾನಸಿಕ ಆರೋಗ್ಯವನ್ನು ಕಾಪಾಡುವಲ್ಲಿ ಕ್ರೀಡೆ ಸಹಕಾರಿಯಾಗಿದ್ದು; ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಕ್ರೀಡಾ ಮನೋಭಾವವೂ ಮೂಡುತ್ತದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಭಾರತಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಎನ್.ಕೆ.ಅಪ್ಪಸ್ವಾಮಿ ಹಾಗೂ ನಿರ್ದೇಶಕ ರಂಗಸ್ವಾಮಿ ಮಾತನಾಡಿ, ಕ್ರೀಡಾಪಟುಗಳಿಗೆ ಶುಭ ಕೋರಿದರು.
ಸಂಸ್ಥೆ ನಿರ್ದೇಶಕ ಮಹಮ್ಮದ್ ಪಾಶಾ, ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ಸದಾಶಿವಯ್ಯ ಎಸ್ ಪಲ್ಲೇದ್, ಮುಖ್ಯಶಿಕ್ಷಕ ಪಿ.ನರಸಿಂಹಮೂರ್ತಿ, ಸಂಪನ್ಮೂಲ ವ್ಯಕ್ತಿ ಸಿ.ಕೆ.ದಿನೇಶ್, ೩ ತಾಲೂಕುಗಳ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ತರಬೇತಿದಾರರು, ಮುಖ್ಯಶಿಕ್ಷಕರು ಹಾಜರಿದ್ದರು.