ವೀರಾಜಪೇಟೆ: ವೀರಾಜಪೇಟೆ ತಾಲೂಕಿನ ವಿ ಬಾಡಗ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ತಾಯಿ ಕನ್ನಡಾಂಭೆಗೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭ ಶಾಲೆಯ ಮುಖ್ಯ ಶಿಕ್ಷಕಿ ಕೆ.ಸಿ. ಗೀತಾಂಜಲಿ, ಶಿಕ್ಷಕರಾದ ಕಾವೇರಮ್ಮ, ಅತಿಥಿ ಶಿಕ್ಷಕರು, ವಿದ್ಯಾರ್ಥಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು. ವೀರಾಜಪೇಟೆ: ಎಪ್ಪತ್ತನೇ ಕನ್ನಡ ರಾಜೋತ್ಸವದ ಅಂಗವಾಗಿ ಕೊಡಗು ಜಿಲ್ಲೆಯ ಜಯಭಾರತ ರಕ್ಷಣಾ ವೇದಿಕೆ ಸದಸ್ಯರು ವೀರಾಜಪೇಟೆಯ ಖಾಸಗಿ ಬಸ್ ಚಾಲಕರಿಗೆ ಮತ್ತು ನಗರದ ಆಟೋ ಚಾಲಕರಿಗೆ ಖಾಕಿ ಬಣ್ಣದ ಸಮವಸ್ತç ವಿತರಣೆ ಮಾಡಿದರು.
ಸಂಘಟನೆಯ ಜಿಲ್ಲಾ ಅಧ್ಯಕ್ಷ ಬಬ್ಬಿರ ಮನು ಜೋಯಪ್ಪ ಮಾತನಾಡಿ, ಹಗಲು ರಾತ್ರಿ ಎನ್ನದೆ ದುಡಿಯುವ ಶ್ರಮಜೀವಿಗಳಿಗೆ ಈ ಬಾರಿ ನಮ್ಮ ಸಂಘಟನೆ ವತಿಯಿಂದ ಈ ಉಡುಗೊರೆ ನೀಡಿದ್ದೇವೆ ಎಂದರು. ಈ ಸಂದರ್ಭ ತಾಲೂಕು ಅಧ್ಯಕ್ಷ ಖಲಿಲ್ ಇಬ್ರಾಹಿಂ, ನಗರ ಅಧ್ಯಕ್ಷ ಯೋಗೇಶ್ ನಾಯ್ಡು, ಜಿಲ್ಲಾ ಸದಸ್ಯ ಬಲ್ಲಡಿಚಂಡ ಬೋಪಣ್ಣ, ಸಂಘಟನಾ ಕಾರ್ಯದರ್ಶಿ ಬಳಪಂಡ ದಿನು ಉತ್ತಯ್ಯ ಭಾಗವಹಿಸಿದ್ದರು. ಮಡಿಕೇರಿ: ಸಂತ ಮೈಕಲರ ವಿದ್ಯಾ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮೈಸೂರು ಓಡಿಪಿ ನಿರ್ದೇಶಕರಾದ ಟೆನ್ನಿ ಕುರಿಯನ್ ಧ್ವಜಾರೋಹಣ ನೆರವೇರಿಸಿದರು.
ನಂತರ ಜರುಗಿದ ಸಭಾ ಕಾರ್ಯಕ್ರಮದಲ್ಲಿ ಸಂತ ಮೈಕಲರ ದೇವಾಲಯದ ಧರ್ಮಗುರುಗಳಾದ ಜಾರ್ಜ್ ದೀಪಕ್ ಮಾತನಾಡಿ, ನಮ್ಮ ಸುತ್ತ ಮುತ್ತಲಿನ ಹಸಿರನ್ನು ಉಳಿಸುವುದು ಎಷ್ಟು ಮುಖ್ಯವೋ, ನಮ್ಮ ಭಾಷೆಯನ್ನು ಉಳಿಸಿ ಬೆಳೆಸುವುದು ಕೂಡ ಅಷ್ಟೇ ಮುಖ್ಯ ಎಂದರು.
ಇದೇ ಸಂದರ್ಭ ವಿದ್ಯಾ ಸಂಸ್ಥೆಯ ಸಂಚಾಲಕರು ಪೂಜ್ಯ ಗುರುಗಳಾದ ಸಂಜಯ್ ಕುಮಾರ್ ರವರ ಸ್ವರಚಿತ ಪುಸ್ತಕ ಸಂಜೆ ಸಂದೇಶ -ಜ್ಞಾನದ ಹಾದಿ ಅನ್ನು ಟೆನ್ನಿ ಕುರಿಯನ್ ಲೋಕಾರ್ಪಣೆ ಮಾಡಿದರು. ಸಂಚಾಲಕರ ಮೊದಲ ಕೃತಿಯನ್ನು ಪುಟ್ಟ ತೊಟ್ಟಿಲಲ್ಲಿ ಇಟ್ಟು ತೂಗಿದ್ದು ವಿಶೇಷವಾಗಿತ್ತು. ಗುರುಗಳಾದ ಟೆನ್ನಿ ಕುರಿಯನ್ ಮಾತನಾಡಿ, ವಿದ್ಯಾರ್ಥಿಗಳು ಕರ್ನಾಟಕದ ಹೂವುಗಳಾಗಿ ಬೆಳೆಯಬೇಕು ಎಂದರು. ನಾವು ನಮ್ಮ ತಾಯಿಗೆ ಗೌರವ ನೀಡುವಂತೆ ಎಂದರು.
ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪಂಕಜ. ಎಂ. ಎ, ಪ್ರೌಢ ಶಾಲಾ ಮುಖ್ಯಸ್ಥರಾದ ಜೆಫ್ರಿ ಡಿಸಿಲ್ವ, ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ ಸಿಸ್ಟರ್ ಸಿಸಿಲಿಯ ಹಾಗೂ ಸಿಸ್ಟರ್ ಸರಿತಾ ಮಾರ್ಥ ಉಪಸ್ಥಿತರಿದ್ದರು. ಕೇಶವ್ ನಿರೂಪಿಸಿ, ಶಿಕ್ಷಕಿ ಜುನಿಟ ಸ್ವಾಗತಿಸಿ, ಶಿಕ್ಷಕಿ ಲವೀನಾ ರೊಡ್ರಿಗಸ್ ವಂದಿಸಿದರು.ಸಿದ್ದಾಪುರ : ಚೆನ್ನಯ್ಯನ ಕೋಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲೆಯ ಮುಖ್ಯ ಶಿಕ್ಷಕಿ ರಾಜಮ್ಮ ದಿಲಿ ಕುಮಾರ್ ಮಾತನಾಡಿ ಕನ್ನಡ ರಾಜ್ಯೋತ್ಸವ ಹಾಗೂ ನಾಡು ನುಡಿಯ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಮಕ್ಕಳಿಂದ ವಿವಿಧ ಸಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸಹ ಶಿಕ್ಷಕಿ ಜಾಜಿ ಮೋಹನ್ ಮತ್ತು ಇತರ ಶಿಕ್ಷಕರು ಹಾಜರಿದ್ದರು.ಮಡಿಕೇರಿ : ಕುಶಾಲನಗರ ಸಮೀಪದ ಅತ್ತೂರು ಜ್ಞಾನಗಂಗಾ ವಸತಿ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿAದ ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ನ್ಯಾಷನಲ್ ಕಾಲೇಜಿನ ಪ್ರಾಧ್ಯಾಪಕÀ ಡಾ.ಕೃಷ್ಣೇಗೌಡ, ಕರ್ನಾಟಕದ ಏಕೀಕರಣಕ್ಕಾಗಿ ಹೋರಾಡಿದ ಹೋರಾಟಗಾರರು, ಕನ್ನಡ ನಾಡಿನ ಶಿಲ್ಪಕಲೆ, ಸಾಹಿತ್ಯ, ಸಂಸ್ಕೃತಿ, ಆಚಾರ, ವಿಚಾರ ಮತ್ತು ಕನ್ನಡಿಗರು ವಿವಿಧ ಕ್ಷೇತ್ರಗಳಿಗೆ ನೀಡಿರುವ ಅಪಾರ ಕೊಡುಗೆಯನ್ನು ವಿವರಿಸಿದರು. ಜ್ಞಾನಗಂಗಾ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಟಿ.ಕೆ.ಸುಧೀರ್ ಮಾತನಾಡಿ, ಕನ್ನಡ ಒಂದು ಸುಂದರ ಮತ್ತು ಕನ್ನಡ ನಾಡು, ನುಡಿಯನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು. ಜ್ಞಾನಗಂಗಾ ಶಾಲೆಯ ಪ್ರಾಂಶುಪಾಲರಾದ ಸತ್ಯ ಸುಲೋಚನ, ಉಪ ಪ್ರಾಂಶುಪಾಲರು, ಶಿಕ್ಷಕ ವೃಂದ, ಶಾಲಾ ಆಡಳಿತ ಮಂಡಳಿ, ಧರ್ಮದರ್ಶಿಗಳು ಮತ್ತಿತರರು ಉಪಸ್ಥಿತರಿದ್ದರು. ನಾಪೋಕ್ಲು: ೨೦೦೦ ವರ್ಷಗಳ ಇತಿಹಾಸವಿರುವ ಕನ್ನಡ ಅತ್ಯಂತ ಶ್ರೀಮಂತ ಭಾಷೆಯಾಗಿದ್ದು ಕನ್ನಡ ನಾಡಿನ ಪ್ರತಿಯೊಬ್ಬರು ಕನ್ನಡವನ್ನು ಬಳಸಿ ಬೆಳೆಸಬೇಕು ಎಂದು ಶಿಕ್ಷಕಿ ಚಂದ್ರಕಲಾ ಹೇಳಿದರು.
ಇಲ್ಲಿನ ಶ್ರೀರಾಮ ಟ್ರಸ್ಟ್ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಮುಖ್ಯ ಶಿಕ್ಷಕಿ ಶಾರದೆ ಬಿ.ಎಂ ಮಾತನಾಡಿ ಕರ್ನಾಟಕದ ಏಕೀಕರಣದ ಬಗ್ಗೆ ಮಾಹಿತಿ ನೀಡಿದರು. ಶಿಕ್ಷಕಿ ಸ್ಮಿತಾ ಟಿ ಜೆ ಕನ್ನಡದ ಹಿರಿಮೆಗರಿಮೆಗಳ ಬಗ್ಗೆ ಮಾತನಾಡಿದರು. ವಿದ್ಯಾರ್ಥಿ ಸೋನಲ್ ಕೆ.ವಿ ಸ್ವಾಗತಿಸಿ, ವಿದ್ಯಾರ್ಥಿಗಳಾದ ಸಹನ ಹಾಗೂ ಸಮನ್ವಿತ ಕಾರ್ಯಕ್ರಮ ನಿರೂಪಿಸಿ, ಶ್ರಾವ್ಯ ವಂದಿಸಿದರು. ಈ ಸಂದರ್ಭ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು.*ಗೋಣಿಕೊಪ್ಪ: ಕನ್ನಡ ರಾಜ್ಯೋತ್ಸವನ್ನು ಗೋಣಿಕೊಪ್ಪ ಸರಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು. ಶಾಲೆ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಜಗದೀಶ್ ಜೋಡುಬೀಟಿ ಧ್ವಜಾರೋಹಣ ಮಾಡಿ ಮಾತನಾಡಿದ ಅವರು ಈ ನಾಡು ಭಾಷೆ ಸಂಸ್ಕೃತಿ, ಸಾಹಿತ್ಯ, ಆಚಾರ, ವಿಚಾರ, ಪದ್ಧತಿ, ಪರಂಪರೆಗಳಿAದ ಸಮೃದ್ಧಿಗೊಂಡಿದೆ. ಕವಿಗಳು, ಸಾಹಿತಿಗಳು, ಕಲಾವಿದರು, ಸೇರಿದಂತೆ ಕನ್ನಡಪರ ಹೋರಾಟದ ಧ್ವನಿಗಳಿಂದ ಈ ನಾಡನ್ನು ಕಟ್ಟಲಾಗಿದೆ ಎಂದರು.
ಶಾಲೆಯ ಸಹ ಶಿಕ್ಷಕ ಸಿದ್ದರಾಜು ಮಾತನಾಡಿ, ಕಾವೇರಿಯಿಂದ ಗೋದಾವರಿವರೆಗೆ ಹರಡಿಕೊಂಡ ಕನ್ನಡ ನಾಡು, ತನ್ನದೇ ಆದ ವಿಶಿಷ್ಟತೆಗಳಿಂದ ಗುರುತಿಸಿಕೊಂಡಿದೆ. ಕನ್ನಡ ಭಾಷೆ ಹೃದಯದಿಂದ ಮಿಡಿಯುವ ಶಬ್ದಗಳಿಂದ ಕೂಡಿವೆ ಎಂದರು.
ಈ ಸಂದರ್ಭ ವಿದ್ಯಾರ್ಥಿಗಳು ಕನ್ನಡ ನಾಡಿನ ಹೋರಾಟ ಮತ್ತು, ಭಾಷೆ ಸಂಸ್ಕೃತಿಗಳ ಬಗ್ಗೆ ಭಾಷಣ ಮಾಡಿದರು. ಕನ್ನಡ ಗೀತೆಗಳನ್ನು ಹಾಡಿದರು. ಹಾಡುಗಾರಿಕೆ ಹಾಗೂ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಶಾಲೆಯ ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷೆ ದಿವ್ಯ ಪ್ರೋತ್ಸಾಹಕರ ಬಹುಮಾನಗಳನ್ನು ನೀಡಿದರು.
ಈ ಸಂದರ್ಭ ಶಾಲೆಯ ಮುಖ್ಯೋಪಾಧ್ಯಾಯ ಹೆಚ್.ಕೆ ಕುಮಾರ್, ಶಾಲೆಯ ಮೇಲುಸ್ತುವಾರಿ ಮತ್ತು ಅಭಿವೃದ್ಧಿ ಸಮಿತಿಯ ಸದಸ್ಯರುಗಳು, ಶಾಲೆಯ ಶಿಕ್ಷಕರುಗಳಾದ, ದಮಯಂತಿ ಎ.ಎನ್, ಅನೀತಾ ಕುಮಾರಿ, ಜೋಸ್ಲಿಯಾ ಎಂ.ಟಿ, ಜಯಶ್ರೀ ಎನ್.ಕೆ, ಎಂಸಿ ಇಂದಿರ, ಶಾರದ, ಸ್ನೇಹ ಕಾವೇರಮ್ಮ, ನಾಗರಾಜು, ಸಿದ್ದರಾಜು, ಮಂಜುಳಾ, ಸುನಿತ, ಪತ್ರಕರ್ತ ಸತೀಶ್, ನಿವೃತ ಶಿಕ್ಷಕರುಗಳಾದ ನಿರ್ಮಲ, ತ್ರಿವೇಣಿ ಇದ್ದರು.ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಶಾಲಾ-ಕಾಲೇಜುಗಳ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಸಂಸ್ಥೆಯ ಆಡಳಿತ ಮಂಡಳಿಯ ಖಜಾಂಚಿ ಡಾ.ಉದಯಕುಮಾರ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಇಂದಿನ ವಿದ್ಯಾರ್ಥಿಗಳು, ಯುವಜನತೆ ಕರ್ನಾಟಕದ ಇತಿಹಾಸದ ಬಗ್ಗೆ ಅರಿವು ಮೂಡಿಸಿಕೊಂಡು ಕನ್ನಡ ಭಾಷೆ, ನೆಲ, ಜಲದ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪದವಿ ಕಾಲೇಜಿನ ಪ್ರಾಂಶುಪಾಲ ನಿರಂಜನ್, ಸಂಸ್ಥೆ ನಿರ್ದೇಶಕ ಬಿ.ಕೆ.ಯತೀಶ್,ಪ್ರಾಂಶುಪಾಲ ಪವಾರ್ ಹಾಗೂ ಮುಖ್ಯಶಿಕ್ಷಕ ಅಬ್ದುಲ್ ರಬ್ ದಿನದ ಮಹತ್ವದ ಕುರಿತು ಮಾತನಾಡಿದರು.
ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಶಿಕ್ಷಕ ಕಿರಣ್ ಕುಮಾರ್ ಬುಡುಬುಡಿಕೆ ವೇಷಧಾರಿಯಾಗಿ ಭವಿಷ್ಯ ನುಡಿಯುತ್ತಾ ಗಮನ ಸೆಳೆದರು.ಉಪನ್ಯಾಸಕರು, ಶಿಕ್ಷಕರು ಹಾಜರಿದ್ದರು.ಶಿಕ್ಷಕರಾದ ರಂಗಸ್ವಾಮಿ ಹಾಗೂ ಸತೀಶ್ ಕಾರ್ಯಕ್ರಮ ನಿರ್ವಹಿಸಿದರು.ಕರಿಕೆ: ಸ್ಥಳೀಯ ಗ್ರಾಮ ಪಂಚಾಯಿತಿ ಮತ್ತು ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು, ಕಾರ್ಯಕ್ರಮದಲ್ಲಿ ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್. ಬಾಲಚಂದ್ರ ನಾಯರ್ ಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಕಲ್ಪನಾ ಜಗದೀಶ್, ಪಂಚಾಯತ್ ಸದಸ್ಯರು, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಪದಾಧಿಕಾರಿಗಳು, ಸಹಕಾರ ಸಂಘದ ನಿರ್ದೇಶಕರುಗಳು, ಎಸ್.ಡಿ.ಎಂಸಿ ಅಧ್ಯಕ್ಷರುಗಳು, ಸದಸ್ಯರುಗಳು, ಶಿಕ್ಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು, ಪಂಚಾಯತ್ ಸಿಬ್ಬಂದಿ ಪಾಲ್ಗೊಂಡಿದ್ದರು.
ಪAಚಾಯಿತಿ ಅಭಿವೃದ್ಧಿ ಅಧಿಕಾರಿ ಬಿಪಿನ್ ಸ್ವಾಗತಿಸಿದರು. ಗ್ರಂಥಪಾಲಕಿ ಸಾವಿತ್ರಿ ವಂದಿಸಿದರು. ಪ್ರೌಢ ಶಾಲೆಯಿಂದ ಆರಂಭಗೊAಡ ಮೆರವಣಿಗೆ ಒಂದು ಕಿ ಮೀ ಸಂಚರಿಸಿ ಎಳ್ಳುಕೊಚ್ಚಿ ಪೇಟೆಯಲ್ಲಿ ಸಮಾಪ್ತಿಯಾಯಿತು. ಈ ಸಂದರ್ಭ ಪಂಚಾಯತ್ ಅಧ್ಯಕ್ಷ ಎನ್. ಬಾಲಚಂದ್ರನ್ ನಾಯರ್ ಗಡಿಯಲ್ಲಿ ಕನ್ನಡವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲರೂ ಕೈ ಜೋಡಿಸÀಬೇಕೆಂದು ಕರೆ ನೀಡಿದರು. ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ರಾಜಶೇಖರ್ ಕನ್ನಡ ರಾಜ್ಯೋತ್ಸವವನ್ನು ಉದ್ದೇಶಿಸಿ ಮಾತನಾಡಿದರುಸೋಮವಾರಪೇಟೆ: ಆಟೋ ಚಾಲಕರು ಮತ್ತು ಮಾಲೀಕರು ಕನ್ನಡದ ಹೋರಾಟ, ಕನ್ನಡಪರ ಸೇವೆಗಳಲ್ಲಿ ಹೆಚ್ಚು ಸೋಮವಾರಪೇಟೆಯ ಆಟೋ ಚಾಲಕರ ಸಂಘಕ್ಕೆ ನಿವೇಶನ ಹಾಗೂ ಕಟ್ಟಡ ನಿರ್ಮಾಣಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಶಾಸಕ ಡಾ. ಮಂತರ್ ಗೌಡ ಹೇಳಿದರು.
ಇಲ್ಲಿನ ಆಟೋ ಚಾಲಕರ ಸಂಘದ ವತಿಯಿಂದ ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರೋಪ ಸಮಾರಂಭ ಹಾಗೂ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಆಟೋ ಚಾಲಕರ ಸಂಘಕ್ಕೆ ನಿವೇಶನ ಹಾಗೂ ಕಟ್ಟಡ ನಿರ್ಮಾಣದ ಬೇಡಿಕೆಯಿದ್ದು, ಈ ನಿಟ್ಟಿನಲ್ಲಿ ಸಂಪೂರ್ಣ ಸಹಕಾರ ನೀಡಲಾಗುವುದು. ಚಾಲಕರ ವೈಯಕ್ತಿಕ ಸಮಸ್ಯೆಗಳಿಗೂ ಸ್ಪಂದಿಸಲಾಗುವುದು ಎಂದ ಶಾಸಕರು, ಚಾಲಕರು ಕನ್ನಡ ಭಾಷೆಯ ಪ್ರಚಾರದೊಂದಿಗೆ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮುಖ್ಯ ಅತಿಥಿಯಾಗಿದ್ದ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ಮಾತನಾಡಿ, ಕನ್ನಡ ರಾಜ್ಯೋತ್ಸವ ಕೇವಲ ಒಂದು ದಿನದ ಆಚರಣೆಗೆ ಸೀಮಿತವಾಗಬಾರದು. ಕನ್ನಡಾಭಿಮಾನ ಪ್ರತಿಕ್ಷಣ ನಮ್ಮಲ್ಲಿರಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಟೋ ಚಾಲಕರ ಸಂಘದ ಅಧ್ಯಕ್ಷ ಹೆಚ್.ಆರ್. ಉಮೇಶ್ ವಹಿಸಿದ್ದರು. ವೇದಿಕೆಯಲ್ಲಿ ಒಕ್ಕಲಿಗರ ಯುವ ವೇದಿಕೆ ಜಿಲ್ಲಾಧ್ಯಕ್ಷ ಗಿರೀಶ್ ಮಲ್ಲಪ್ಪ, ಚೌಡ್ಲು ಗ್ರಾ.ಪಂ. ಮಾಜೀ ಅಧ್ಯಕ್ಷ ಮಹೇಶ್ ತಿಮ್ಮಯ್ಯ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಬಿ. ಸತೀಶ್, ಗುತ್ತಿಗೆದಾರ ಚೇತನ್, ಮೋಟಾರ್ ಯೂನಿಯನ್ ಅಧ್ಯಕ್ಷ ಬಾಲಕೃಷ್ಣ, ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ.ಎ. ಆದಂ, ದಾನಿ ಗಿರಿ ಜೋಯಪ್ಪ, ಪ್ರಮುಖರಾದ ಬಿ.ಈ. ಜಯೇಂದ್ರ, ಚಿಕ್ಕತೋಳೂರು ಯೋಗೇಶ್, ಸುನಿಲ್ ಹಾನಗಲ್, ಮಂದಣ್ಣ, ವಿನೋದ್ ಜಯರಾಂ ಸೇರಿದಂತೆ ಇತರರು ಇದ್ದರು. ಸೋಮವಾರಪೇಟೆ: ತಾಲೂಕು ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿಗಳು, ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷರೂ ಆಗಿರುವ ಕೆ.ಕೆ. ಕೃಷ್ಣಮೂರ್ತಿ ಅವರ ಅಭಿಲಾಷೆಯಂತೆ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನೂತನವಾಗಿ ನಿರ್ಮಿಸಿರುವ ಧ್ವಜಸ್ಥಂಭ ಹಾಗೂ ಕಟ್ಟಡವನ್ನು ರಾಜ್ಯೋತ್ಸವ ದಿನದಂದು ಉದ್ಘಾಟಿಸಲಾಯಿತು.
ಈವರೆಗೆ ರಾಷ್ಟಿçÃಯ ಹಬ್ಬಗಳಂದು ಮೈದಾನದಲ್ಲಿ ಗುಂಡಿ ತೋಡಿ ಪೈಪ್ ಅಳವಡಿಸಿ ರಾಷ್ಟç ಹಾಗೂ ಕನ್ನಡ ಧ್ವಜಾರೋಹಣ ನೆರವೇರಿಸುತ್ತಿದ್ದರು. ಇದನ್ನು ಬದಲಿಸಿ ಶಾಶ್ವತವಾಗಿ ಧ್ವಜ ಸ್ಥಂಭ ನಿರ್ಮಿಸಬೇಕೆಂಬ ಆಲೋಚನೆ ತಹಶೀಲ್ದಾರ್ ಕೆ.ಕೆ. ಕೃಷ್ಣಮೂರ್ತಿ ಅವರಿಗೆ ಬಂದಿದ್ದರ ಫಲವಾಗಿ ಇದೀಗ ಸುಂದರ ಧ್ವಜಸ್ಥಂಭ ನಿರ್ಮಾಣವಾಗಿದೆ. ಅಬ್ಬೂರುಕಟ್ಟೆಯ ಮಂಜುನಾಥ ಗ್ರೂಪ್ಸ್ನ ವತಿಯಿಂದ ಆಕರ್ಷಕವಾದ ಧ್ವಜಸ್ಥಂಭ ನಿರ್ಮಿಸಲಾಗಿದ್ದು, ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು, ದಾನಿಗಳಾದ ಮಂಜುನಾಥ್ ಅವರನ್ನು ಸನ್ಮಾನಿಸಿದರು.ಶನಿವಾರಸಂತೆ: ಪಟ್ಟಣದ ಹೊಸೂರು ರಸ್ತೆಯಲ್ಲಿರುವ ಕೊಡಗು ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿAದ ಆಚರಿಸಲಾಯಿತು.
ಸಂಘದ ಅಧ್ಯಕ್ಷ ಎಂ.ಜೆ.ವಿಠಲ ನಾಗರಾಜ್ ಧ್ವಜಾರೋಹಣ ನೆರವೇರಿಸಿ, ದಿನದ ಮಹತ್ವದ ಬಗ್ಗೆ ಮಾತನಾಡಿದರು.ಸದಸ್ಯರಾದ ಫರೀದ್, ಎಸ್.ಕೆ.ರಾಜು, ಇತರ ಕಾರ್ಮಿಕರು ಹಾಗೂ ಕಂಪ್ಯೂಟರ್ ಅಪರೇಟರ್ ಗೀತಾ ಹಾಜರಿದ್ದರು.ಕಡಂಗ: ಕೂಡಿಗೆ ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢಶಾಲೆಯಲ್ಲಿ ರಾಜ್ಯೋತ್ಸವವನ್ನು ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಡಳಿತ ಮಂಡಳಿ ಸದಸ್ಯ ಕೆ.ಎನ್. ಮಂಜುನಾಥ್ ವಹಿಸಿದ್ದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಬೋಧಕೇತರ ವರ್ಗದವರು ವಿದ್ಯಾರ್ಥಿಗಳು ಹಾಜರಿದ್ದರು.ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆಯ ಬಸ್ ನಿಲ್ದಾಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಕೊಡ್ಲಿಪೇಟೆ ಹೋಬಳಿ ಘಟಕದ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.ಘಟಕದ ಅಧ್ಯಕ್ಷ ರಾಜೇಶ್ ಧ್ವಜಾರೋಹಣ ನೆರವೇರಿಸಿ, ನಾಡು-ನುಡಿಯ ಬಗ್ಗೆ ಮಾತನಾಡಿದರು.ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಪ್ಸರಿ ಬೇಗಂ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಆಶಾ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಡಿ.ಎನ್.ವಸಂತ್, ಕರವೇ ಉಪಾಧ್ಯಕ್ಷ ಕೆಂಚೇಶ್ವರ್ ದಿನದ ಮಹತ್ವದ ಕುರಿತು ಮಾತನಾಡಿದರು.
ಕರವೇ ಪ್ರಧಾನ ಕಾರ್ಯದರ್ಶಿ ಡಿ.ಆರ್.ವೇದಕುಮಾರ್, ಪದಾಧಿಕಾರಿಗಳಾದ ಶೋಭಾ, ಕಾಳಯ್ಯ, ರಾಣಿ, ಸೋಮಣ್ಣ, ವೇದಾವತಿ ವಿಷ್ಣುವರ್ಧನ್, ಇಸ್ಮಾಯಿಲ್, ದೇವರಾಜ್, ಯಶೋದಾ, ರೆಹಮಾನ್, ಧರ್ಮಣ್ಣ, ಹೂವಮ್ಮ ಇತರರು ಹಾಜರಿದ್ದರು.