ಮಡಿಕೇರಿ, ನ. ೪: ಪ್ರಸಕ್ತ ಸಾಲಿನಲ್ಲಿ ರಾಷ್ಟಿçÃಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ೮ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮವು ಇದೇ ನವೆಂಬರ್ ೩ ರಿಂದ ಆರಂಭಗೊAಡಿದ್ದು, ಡಿಸೆಂಬರ್ ೨ ರವರೆಗೆ ಕೊಡಗು ಜಿಲ್ಲೆಯಾದ್ಯಂತ ನಡೆಯಲಿದೆ ಎಂದು ಪಶುಪಾಲನಾ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

ದನ, ಎಮ್ಮೆ, ಆಡು, ಕುರಿ, ಹಂದಿ ಸೇರಿದಂತೆ ಎಲ್ಲಾ ಸೀಳುಗೊರಸಿನ ಪ್ರಾಣಿಗಳಲ್ಲಿ ಈ ರೋಗವು ಕಾಣಿಸಿಕೊಳ್ಳುವ ಸಾಧ್ಯತೆಯಿರುತ್ತದೆ. ಇದು ರೈತರಿಗೆ ಅಪಾರವಾದ ಆರ್ಥಿಕ ನಷ್ಟವನ್ನುಂಟು ಮಾಡುವ ರೋಗವಾಗಿರುತ್ತದೆ.

ಕಾಲುಬಾಯಿ ಜ್ವರವು ಒಂದು ವೈರಾಣು ರೋಗವಾಗಿದ್ದು ನಿರ್ಧಿಷ್ಟ ಚಿಕಿತ್ಸೆ ಅಸಾಧ್ಯವಾಗಿರುತ್ತದೆ. ಕಾಲುಬಾಯಿ ರೋಗದಿಂದ ಗುಣಮುಖವಾದರೂ ಸಹ ಜಾನುವಾರುಗಳು ಬಿಸಿಲಿಗೆ ಏದುಸಿರು ಬಿಡುತ್ತವೆ. ಹೈನು ರಾಸುಗಳಲ್ಲಿ ಹಾಲಿನ ಇಳುವರಿ ಇಳಿಮುಖವಾಗಲಿದ್ದು, ಗರ್ಭಪಾತ, ಗರ್ಭಕಟ್ಟುವಲ್ಲಿ ವಿಳಂಬ, ಎತ್ತು, ಹೋರಿಗಳಲ್ಲಿ ಕೆಲಸ ಮಾಡುವ ಸಾಮರ್ಥ್ಯ ಕ್ಷೀಣಿಸಿ ತೀವ್ರ ಆರ್ಥಿಕ ನಷ್ಟವನ್ನುಂಟುಮಾಡುತ್ತದೆ.

ಲಸಿಕೆ ಹಾಕಿಸುವುದೊಂದೇ ಕಾಲುಬಾಯಿ ರೋಗ ನಿಯಂತ್ರಿಸಲು ಇರುವ ಏಕೈಕ ಮಾರ್ಗವಾಗಿರುತ್ತದೆ. ಈ ರೋಗದ ವಿರುದ್ಧ ಪ್ರತಿ ೬ ತಿಂಗಳಿಗೊಮ್ಮೆ ಲಸಿಕೆ ಹಾಕಿಸಿ, ರೋಗ ಬಾರದಂತೆ ತಡೆಗಟ್ಟಬಹುದಾಗಿರುತ್ತದೆ. ೨೧ ನೇ ಜಾನುವಾರು ಗಣತಿಯಂತೆ ಜಿಲ್ಲೆಯಲ್ಲಿ ದನ ಹಾಗೂ ಎಮ್ಮೆಗಳ ಸಂಖ್ಯೆ ೫೪,೮೮೩ ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿಯನ್ನು ಹೊಂದಲಾಗಿದೆ. ಈಗಾಗಲೇ ಲಸಿಕಾ ಕಾರ್ಯಕ್ರಮಕ್ಕೆ ಎಲ್ಲಾ ಪೂರ್ವಸಿದ್ದತೆಯನ್ನು ಮಾಡಿಕೊಳ್ಳಲಾಗಿದ್ದು, ಲಸಿಕಾದಾರರು ರೈತರ/ ಜಾನುವಾರು ಮಾಲೀಕರ ಮನೆ ಮನೆಗೆ ತೆರಳಿ ಲಸಿಕೆ ಹಾಕಲಿದ್ದಾರೆ. ಲಸಿಕೆಯು ಸಂಪೂರ್ಣವಾಗಿ ಉಚಿತವಾಗಿದ್ದು ಯಾವುದೇ ರೀತಿಯ ಶುಲ್ಕವಿರುವುದಿಲ್ಲ. ಇದೊಂದು ರಾಷ್ಟಿçÃಯ ಕಾರ್ಯಕ್ರಮವಾಗಿದ್ದು, ಲಸಿಕಾದಾರರು ಜಾನುವಾರು ಮಾಲೀಕರ ಮನೆಗಳಿಗೆ ಬಂದಾಗ ಸಹಕಾರ ನೀಡಿ ಎಲ್ಲಾ ದನ/ ಎಮ್ಮೆಗಳಿಗೆ ಲಸಿಕೆ ಹಾಕಿಸುವಂತೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು ಮನವಿ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ, ಮಡಿಕೇರಿ ದೂ.ಸಂ.೯೪೪೯೦೮೩೮೭೬, ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ, ಸೋಮವಾರಪೇಟೆ ದೂ.ಸಂ.೯೯೮೦೩೬೦೨೦೦, ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ, vIರಾಜಪೇಟೆ ದೂ.ಸಂ. ೯೯೦೧೩೦೩೯೯೬, ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ, ಕುಶಾಲನಗರ ದೂ.ಸಂ. ೮೩೧೦೭೧೨೪೫೦ ಹಾಗೂ ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ, ಪೊನ್ನಂಪೇಟೆ ದೂ.ಸಂ. ೯೭೪೦೫೫೬೩೧೧ ನ್ನು ಸಂಪರ್ಕಿಸಬಹುದು ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.