ಸುಂಟಿಕೊಪ್ಪ, ನ. ೪: ಕ್ಷÄಲ್ಲಕ ವಿಚಾರಕ್ಕೆ ಪತ್ನಿಯೊಂದಿಗೆ ಜಗಳವಾಡಿ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಸುಂಟಿಕೊಪ್ಪ ವ್ಯಾಪ್ತಿಯ ಕೊಡಗರಹಳ್ಳಿ ಗ್ರಾಮದ ಅಂದಗೋವೆ ಖಾಸಗಿ ಕಾಫಿ ತೋಟವೊಂದರ ಲೈನ್ ಮನೆಯಲ್ಲಿ ವಾಸವಿದ್ದ ಮುತ್ತ (೫೦) ಪತ್ನಿ ಲತಾ (೪೫) ಎಂಬಾಕೆಯೊAದಿಗೆ ಭಾನುವಾರದಂದು ರಾತ್ರಿ ಕ್ಷÄಲ್ಲಕ ಕಾರಣಕ್ಕೆ ಜಗಳ ಮಾಡಿ ತಲೆಗೆ ದೊಣ್ಣೆಯಿಂದ ಹಲ್ಲೆ ನಡೆಸಿ ಹತ್ಯೆಗೈದಿದ್ದಾನೆ.
ಸೋಮವಾರ ಸಂಜೆ ಲತಾಳ ಅಕ್ಕ ವಳ್ಳಿಯಮ್ಮ ಎಂಬಾಕೆ ದೂರು ನೀಡಿದ ಮೇರೆ ಸುಂಟಿಕೊಪ್ಪ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿ ಮುತ್ತನನ್ನು ಬಂದಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್, ವೃತ್ತ ನಿರೀಕ್ಷಕ ದಿನೇಶ್‌ಕುಮಾರ್, ಸುಂಟಿಕೊಪ್ಪ ಠಾಣಾಧಿಕಾರಿ ಮೋಹನ್‌ರಾಜ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.