ಮಡಿಕೇರಿ, ನ.೪ : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕಾ ರಂಗ ಅತ್ಯಂತ ಮಹತ್ವದ ಜವಾಬ್ದಾರಿಯನ್ನು ಹೊಂದಿರುವ ಅಂಗವಾಗಿದ್ದು, ಸಾಮಾಜಿಕ ವ್ಯವಸ್ಥೆಯ ಓರೆಕೋರೆಗಳನ್ನು ತಿದ್ದಿ, ಜನರ ಆಶೋತ್ತರಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಪರ್ತಕರ್ತರು ಕೆಲಸ ಮಾಡಬೇಕು ಎಂದು ಚಿಕ್ಕ ಅಳುವಾರ ಕೊಡಗು ವಿಶ್ವ ವಿದ್ಯಾನಿಲಯದ ಉಪಕುಲಪತಿ ಅಶೋಕ್ ಸಂಗಪ್ಪ ಆಲೂರ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಕೊಡಗು ಪತ್ರಿಕಾ ಭವನ ಟ್ರಸ್ಟ್ನ ೨೪ನೇ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದ ಆಗುಹೋಗುಗಳನ್ನು ತಿಳಿಸಿ ಸಮಾಜವನ್ನು ಸರಿ ದಾರಿಗೆ ತರುವ ಕೆಲಸ ಪತ್ರಕರ್ತರಿಂದ ಆಗುತ್ತಿದೆ. ಗ್ರಾಮೀಣ ಭಾಗದ ಜನರ ಧ್ವನಿಯಾಗಿ ಕೆಲಸ ಮಾಡುವ ಹೆಚ್ಚಿನ ಜವಾಬ್ದಾರಿ ಪತ್ರಕರ್ತರ ಮೇಲಿದೆ. ಪತ್ರಕರ್ತರು ಜನರನ್ನು ಸನ್ಮಾರ್ಗದತ್ತ ಕೊಂಡೊಯ್ಯುವ ಚಿಂತನೆ ಹೊಂದಿರಬೇಕು ಎಂದರು.
ಆಧುನಿಕ ಡಿಜಿಟಲ್ ಯುಗದಲ್ಲಿ ಪತ್ರಕರ್ತರು ಹಲವು ಸವಾಲುಗಳನ್ನು ಎದುರಿಸಬೇಕಾಗಿದೆ. ಇವುಗಳನ್ನು ಮೆಟ್ಟಿನಿಂತು ತಾಂತ್ರಿಕವಾಗಿ ಮುಂದುವರೆಯುವAತಾಗಬೇಕು. ಹೊಸ ಪೀಳಿಗೆಯ ಪತ್ರಕರ್ತರನ್ನು ಬೆಳೆಸುವಂತಾಗಬೇಕು. ಈ ದಿಸೆಯಲ್ಲಿ ಚಿಕ್ಕ ಅಳುವಾರದಲ್ಲಿ ಸಮೂಹ ಸಂವಹನ ಪತ್ರಿಕೋದ್ಯಮ ಆರಂಭಿಸಲಾಗಿದೆಯೆAದು ತಿಳಿಸಿದ ಅವರು, ಪತ್ರಿಕೋದ್ಯಮದ ವಿದ್ಯಾರ್ಥಿಗಳು ಹಾಗೂ ಪತ್ರಕರ್ತರ ಅನುಕೂಲಕ್ಕಾಗಿ ‘ವಿಜ್ಞಾನ ಹಾಗೂ ತಂತ್ರಜ್ಞಾನ’ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಸುಂದರ ಸ್ವಚ್ಛ ಕೊಡಗು ಅಭಿಯಾನ ನಡೆಯುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಇಲ್ಲಿನ ಸಂಸ್ಕೃತಿ, ೪ಏಳನೇ ಪುಟಕ್ಕೆ