ಚೆಯ್ಯಂಡಾಣೆ, ನ. ೪: ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ೨೦೨೫-೨೬ ಸಾಲಿನ ಸಮುದಾಯದತ್ತ ಶಾಲೆ ಕಾರ್ಯಕ್ರಮ ನಡೆಯಿತು. ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷ ರತ್ನಾ ವಹಿಸಿದರು. ಮಾರ್ಗದರ್ಶನ ಶಿಕ್ಷಕರಾಗಿ ತಿಪ್ಪೆಸ್ವಾಮಿ, ವಿದ್ಯಾರ್ಥಿಗಳು ಕಲಿಕೆಯಲ್ಲಿ ಉತ್ತಮವಾಗಿದ್ದು ಮುಂದಿನ ದಿನಗಳಲ್ಲಿ ಕಲಿಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಮಕ್ಕಳ ರಕ್ಷಣೆ ಹಾಗೂ ಶಾಲೆಯಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿಯ ಕುರಿತು ಮಾತನಾಡಿದರು. ಶಾಲೆಯ ಮುಖ್ಯ ಶಿಕ್ಷಕಿ ಎಚ್.ಆರ್. ಪ್ರೇಮಾಕುಮಾರಿ ಮಾತನಾಡಿ ಶಾಲೆಯಲ್ಲಿ ಗೈರಾಜರಾತಿ ಆಗುವ ವಿದ್ಯಾರ್ಥಿಗಳ ಕಡೆಗೆ ಪೋಷಕರು ಹೆಚ್ಚಿನ ಗಮನಹರಿಸುವಂತೆ ತಿಳಿಸಿದರು. ಶಾಲೆಯಲ್ಲಿ ಮೂಲ ಸೌಕರ್ಯಗಳ ಕೊರತೆ ಇದ್ದು ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದಿಂದ ಶಾಲೆಯಲ್ಲಿರುವ ಸೌಕರ್ಯಗಳ ಕೊರತೆಯನ್ನು ನೀಗಿಸಲು ಎಲ್ಲರು ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಈ ಸಂದರ್ಭ ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ಲಲಿತ, ಶಿಕ್ಷಕ ವೃಂದ, ಪೋಷಕರು, ಮತ್ತಿತರರು ಉಪಸ್ಥಿತರಿದ್ದರು.