ಚೆಯ್ಯAಡಾಣೆ, ನ. ೪ : ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ಪೊಲೀಸರು ಮಾಲು ಸಹಿತ ವಶಕ್ಕೆ ಪಡೆದು ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಹಸ್ತಾಂತರಿಸಿ ದಂಡ ವಿಧಿಸಿ ಕ್ರಮ ಕೈಗೊಂಡಿದ್ದಾರೆ.

ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಕೊಳಕೇರಿ ಗ್ರಾಮಕ್ಕೆ ತೆರಳುವ ರಸ್ತೆಯ ಜಂಕ್ಷನ್ ಬಳಿ ಮಹೇಂದ್ರ ಪಿಕಪ್ ವಾಹನದಲ್ಲಿ ಪರವಾನಗಿ ಇಲ್ಲದೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ನಾಪೋಕ್ಲು ಪೊಲೀಸರು ಮಾಲು ಸಹಿತ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಪ್ರಕರಣವನ್ನು ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಹಸ್ತಾಂತರಿಸಿದ್ದು, ಪರಿಶೀಲಿಸಿದ ಅಧಿಕಾರಿಗಳು ಅಕ್ರಮ ಮರಳು ಸಾಗಾಟಕ್ಕೆ ರೂ. ೧೬,೧೬೦, ಜಿಪಿಎಸ್ ಅಳವಡಿಸಿದ ಕಾರಣಕ್ಕೆ ೨೫ ಸಾವಿರ ಸೇರಿ ಒಟ್ಟು ರೂ. ೪೧,೧೬೦ ದಂಡ ವಿಧಿಸಿದ್ದಾರೆ.

ಜಿಲ್ಲಾದ್ಯಂತ ಮಳೆ ಕಡಿಮೆಯಾಗುತ್ತಿದ್ದಂತೆ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಕೆಲವು ಭಾಗಗಳ ಕಾವೇರಿ ನದಿ ದಡದಿಂದ ಅಕ್ರಮವಾಗಿ ಮರಳು ದಂಧೆ ನಡೆಯುತ್ತಿದ್ದು, ಪೊಲೀಸರು ಹಾಗೂ ಸಂಬAಧಪಟ್ಟ ಇಲಾಖೆಯವರು ಆಕ್ರಮ ಮರಳು ದಂಧೆ ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.