ಮಡಿಕೇರಿ, ನ. ೫: ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರು ಕರ್ನಾಟಕ ಅರಣ್ಯ ಶಾಸ್ತç ವಿದ್ಯಾರ್ಥಿಗಳ ಮತ್ತು ಪದವೀಧರರ ಸಂಘ ನಡೆಸುತ್ತಿದ್ದ ಮುಷ್ಕರ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿ ಬೇಡಿಕೆಗಳನ್ನು ಪರಿಶೀಲಿಸುವುದಾಗಿ ತಿಳಿಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಶಿರಸಿ ಹಾಗೂ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ವಿದ್ಯಾರ್ಥಿಗಳ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಸಂರಕ್ಷಣಾಧಿಕಾರಿ ಉಪ ವಲಯ ಅರಣ್ಯಾಧಿಕಾರಿ ಹುದ್ದೆಯ ನೇರ ನೇಮಕಾತಿಯಲ್ಲಿ ಬಿಎಸ್ಸಿ ಅರಣ್ಯಶಾಸ್ತç ಪದವಿಯನ್ನೇ ಕನಿಷ್ಟ ವಿದ್ಯಾರ್ಹತೆಯನ್ನಾಗಿ ಪರಿಗಣಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದರು.

ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು ಹಾಗೂ ಶಾಸಕರು ನಿಮ್ಮ ಬೇಡಿಕೆ ಬಗ್ಗೆ ಚರ್ಚಿಸಿದ್ದೇವೆ. ನಮ್ಮ ಸರ್ಕಾರ ಬಂದ ಮೇಲೆ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. ನಿಮಗೆಲ್ಲ ಉಜ್ವಲ ಭವಿಷ್ಯವಿದೆ ನಿಮ್ಮ ಬೇಡಿಕೆಗಳ ಬಗ್ಗೆ ಪರಿಗಣಿಸುತ್ತೇವೆ. ಮುಷ್ಕರವನ್ನು ಕೈಬಿಡಲು ವಿದ್ಯಾರ್ಥಿಗಳಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.