ಮುಳ್ಳೂರು, ನ. ೫ : ಸಮೀಪದ ಶನಿವಾರಸಂತೆ ರೋಟರಿ ಕ್ಲಬ್ ವತಿಯಿಂದ ಗೋಪಾಲಪುರ ಜಂಕ್ಷನ್‌ನಲ್ಲಿ ನಿರ್ಮಿಸಿರುವ ಪ್ರಯಾಣಿಕರ ತಂಗುದಾಣವನ್ನು ಲೋಕಾರ್ಪಣೆಗೊಳಿಸಲಾಯಿತು. ರೋಟರಿ ಕ್ಲಬ್ ಜಿಲ್ಲಾ ರಾಜ್ಯಪಾಲ ಪಿ.ಕೆ. ರಾಮಕೃಷ್ಣ ಶನಿವಾರಸಂತೆ ರೋಟರಿ ಕ್ಲಬ್‌ಗೆ ಭೇಟಿ ನೀಡಿದ್ದ ಸಂದರ್ಭ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ರೋಟರಿ ಸಂಸ್ಥೆಯು ಹಲವು ಕಾರ್ಯಕ್ರಮಗಳ ಮೂಲಕ ಸಮಾಜ ಸೇವೆ ಮಾಡುತ್ತಿರುವ ಸಂಸ್ಥೆಯಾಗಿದೆ ಎಂದರು.

ಈ ಸಂದರ್ಭ ರೋಟರಿ ಕ್ಲಬ್ ಜಿಲ್ಲಾ ಸಹಾಯಕ ರಾಜ್ಯಪಾಲ ಉಲ್ಲಾಸ್ ಕೃಷ್ಣ, ವಲಯ ಸೇನಾನಿ ಎ.ಎಸ್. ರಾಮಣ್ಣ, ಶನಿವಾರಸಂತೆ ರೋಟರಿ ಕ್ಲಬ್ ಅಧ್ಯಕ್ಷ ಎಚ್.ಎಸ್. ಯಶ್ವಂತ್, ಕಾರ್ಯದರ್ಶಿ ಎಚ್.ಪಿ. ಚಂದನ್, ರೋಟರಿ ಸದಸ್ಯರಾದ ಎಚ್.ಎಸ್. ವಸಂತ್‌ಕುಮಾರ್, ಶ್ವೇತ ವಸಂತ್, ಕೆ.ಪಿ. ಜಯಕುಮಾರ್, ನಿಡ್ತ ಗ್ರಾ.ಪಂ. ಅಧ್ಯಕ್ಷ ಅಶೋಕ್ ಸೇರಿದಂತೆ ರೋಟರಿ ಸಂಸ್ಥೆಯ ಸದಸ್ಯರು ಹಾಜರಿದ್ದರು.