ವೀರಾಜಪೇಟೆ, ನ. ೭: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕಗಳ ಪದಾಧಿಕಾರಿಗಳ ಸಭೆಯಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಭಾಗವಹಿಸಿದ್ದರು.

ವೀರಾಜಪೇಟೆಯ ಶಾಸಕರ ಗೃಹ ಕಚೇರಿಯಲ್ಲಿ ಆಯೋಜನೆಗೊಂಡ ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಘಟಕಗಳ ಜಿಲ್ಲಾಧ್ಯಕ್ಷ ಬಾನಂಡ ಪ್ರತ್ಯು, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.

ಮುಂದಿನ ತಿಂಗಳು ವೀರಾಜಪೇಟೆ ಕ್ಷೇತ್ರದ ಹಿಂದುಳಿದ ವರ್ಗಗಳ ಘಟಕದ ಬೃಹತ್ ಸಮಾವೇಶ ಆಯೋಜಿಸುವ ಬಗ್ಗೆ ಚರ್ಚಿಸಿದ ಶಾಸಕರು, ಸಮಾವೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸುವುದಾಗಿ ತಿಳಿಸಿದರು.

ಈ ಸಮಾವೇಶದ ಪೂರ್ವಭಾವಿ ತಯಾರಿಯ ಬಗ್ಗೆ ಮಾಹಿತಿ ನೀಡಿದ ಶಾಸಕರು, ಸಮಾವೇಶದ ಯಶಸ್ವಿಗೆ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ ಪದಾಧಿಕಾರಿಗಳಿಗೆ ಮನವರಿಕೆ ಮಾಡಿದರು.

ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಜಾನ್ಸನ್, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಮೀದೇರಿರ ನವೀನ್, ವೀರಾಜಪೇಟೆ ಬ್ಲಾಕ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಹನೀಫ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ಮಾಜಿ ಅಧ್ಯಕ್ಷರಾದ ಸಾರಾ ಚಂಗಪ್ಪ, ಕಾವೇರಪ್ಪ, ಸತೀಶ್, ಮುಕ್ಕಾಟೀರ ಸಂದೀಪ್, ಮತೀನ್, ಶಾಜಿ ಅಚ್ಚುತನ್, ಪೃಥ್ವಿನಾಥ್, ನಾಯಂದಿರ ಶಿವಾಜಿ, ಬಾಲಕೃಷ್ಣ, ಪಿ.ಜಿ. ಅಯ್ಯಪ್ಪ, ಶರತ್, ಶಶಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.