ಪಾಲಿಬೆಟ್ಟ, ನ. ೭: ಯಂಗ್ ಇಂಡಿಯಾ ಯೂಥ್ ಕ್ಲಬ್‌ನ ಸುವರ್ಣ ಮಹೋತ್ಸವದ ಸಂಭ್ರಮಕ್ಕಾಗಿ ರಾಷ್ಟಿçÃಯಮಟ್ಟದ ಮುಕ್ತ ಫುಟ್ಬಾಲ್ ಪಂದ್ಯಾವಳಿ ೨೦೨೬ರ ಜನವರಿ ೯, ೧೦ ಹಾಗೂ ೧೧ ರಂದು ಪಾಲಿಬೆಟ್ಟ ಸಾರ್ವಜನಿಕ ಮೈದಾನದಲ್ಲಿ ನಡೆಯಲಿದ್ದು, ಇದರ ಪ್ರಚಾರಾರ್ಥವಾಗಿ ಲಾಂಛನ ಬಿಡುಗಡೆ ಕಾರ್ಯಕ್ರಮ ಪಾಲಿಬೆಟ್ಟ ಯಂಗ್ ಇಂಡಿಯಾ ಯೂತ್ ಕ್ಲಬ್ ಆವರಣದಲ್ಲಿ ನಡೆಯಿತು.

ಜಿಲ್ಲಾ ಪಂಚಾಯಿತಿ ಸಾಮಾಜಿಕ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಮೂಕೊಂಡ ವಿಜು ಸುಬ್ರಮಣಿ ಲಾಂಛನ ಬಿಡುಗಡೆ ಮಾಡಿದರು. ನಂತರ ಕಾರ್ಯಕ್ರಮದಲ್ಲಿ ಮಾತನಾಡಿ, ಗ್ರಾಮೀಣ ಭಾಗದ ಕ್ರೀಡಾಪಟುಗಳನ್ನು ರಾಷ್ಟçಮಟ್ಟದಲ್ಲಿ ಗುರುತಿಸಿಕೊಳ್ಳುಲು ಯಂಗ್ ಇಂಡಿಯಾ ಯೂತ್ ಕ್ಲಬ್ ಪ್ರಮುಖರ ಶ್ರಮ ಕಾರಣವಾಗಿದೆ. ಸದಸ್ಯ ರಂಶಾದ್ ಎಂಬ ಕ್ರೀಡಾಪಟು ರಾಷ್ಟçಮಟ್ಟದಲ್ಲಿ ಗುರುತಿಸಿಕೊಂಡು ಹಲವಾರು ಸಾಧನೆ ಮಾಡಿದ್ದಾರೆ. ಕೊಡಗು ಕ್ರೀಡಾ ಜಿಲ್ಲೆ ಎಂದು ಹೆಸರುವಾಸಿಯಾಗಿದ್ದರು. ರಾಜ್ಯ, ರಾಷ್ಟçಮಟ್ಟದಲ್ಲಿ ಗುರುತಿಸಿಕೊಳ್ಳುವ ಪ್ರತಿಭಾವಂತರಿಗೆ ಸರ್ಕಾರ ಹಾಗೂ ಕ್ರೀಡಾ ಇಲಾಖೆ ಹೆಚ್ಚಿನ ಸಹಕಾರ ನೀಡದೆ ಕಡೆಗಣಿಸುತ್ತಿರುವ ಪರಿಣಾಮ ಗ್ರಾಮೀಣ ಕ್ರೀಡಾಪಟುಗಳು ಕ್ರೀಡೆಯಿಂದ ವಂಚಿತರಾಗುತ್ತಿದ್ದಾರೆ. ಸೂಕ್ತ ಆಟದ ಮೈದಾನದ ವ್ಯವಸ್ಥೆಯು ಇಲ್ಲದೆ ರಸ್ತೆ ಬದಿಗಳಲ್ಲಿ ಆಡಬೇಕಾದ ಪರಿಸ್ಥಿತಿಯು ನಿರ್ಮಾಣವಾಗಿದೆ. ಸರ್ಕಾರ ಗ್ರಾಮೀಣ ಭಾಗದಲ್ಲೂ ಸುಸಜ್ಜಿತವಾದ ಆಟದ ಮೈದಾನ ನಿರ್ಮಾಣ ಮಾಡುವುದರೊಂದಿಗೆ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಾಗಿದೆ ಎಂದು ಹೇಳಿದ ಅವರು, ಗ್ರಾಮದಲ್ಲಿ ನಡೆಯುವ ರಾಷ್ಟಿçÃಯಮಟ್ಟದ ಫುಟ್ಬಾಲ್ ಪಂದ್ಯಾವಳಿಗೆ ಎಲ್ಲರೂ ಸಹಕಾರ ನೀಡುವ ಮೂಲಕ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಬೇಕಾಗಿದೆ ಎಂದರು.

ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಅಜಿತ್ ಕರುಂಬಯ್ಯ ಮಾತನಾಡಿ, ೫೫ ವರ್ಷ ಪೂರೈಸಿರುವ ಯಂಗ್ ಇಂಡಿಯಾ ಯೂತ್ ಕ್ಲಬ್ ಹಲವಾರು ಕ್ರೀಡಾಪಟುಗಳನ್ನು ಕ್ರೀಡಾ ಸಾಧನೆಯ ಮೂಲಕ ಮುಖ್ಯ ವಾಹಿನಿಗೆ ತರಲು ಮುಂದಾಗಿದೆ. ಈ ಹಿಂದೆ ಹಿರಿಯರು ಕಟ್ಟಿ ಬೆಳೆಸಿದ ಈ ಸಂಘವನ್ನು ಉತ್ತಮ ರೀತಿಯಲ್ಲಿ ಮುನ್ನಡೆಸುವ ಮೂಲಕ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಿ ಸಮಾಜ ಸೇವೆಯೊಂದಿಗೆ ಗುರುತಿಸಿಕೊಳ್ಳುವಂತೆ ಸಲಹೆ ನೀಡಿದರು.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವಸಂತ್ ಮಾತನಾಡಿ, ಹಿರಿಯ ಕ್ರೀಡಾಪಟುಗಳು ಕಟ್ಟಿ ಬೆಳೆಸಿದ ಸಂಘವನ್ನು ಈಗಿನ ಯುವ ಕ್ರೀಡಾಪಟುಗಳು ಮುನ್ನಡೆಸಬೇಕಾಗಿದೆ. ಶಾಂತಿ, ಸಹಬಾಳ್ವೆ ಸಹೋದರತ್ವಕ್ಕೆ ಪಾಲಿಬೆಟ್ಟ ಗ್ರಾಮವೇ ಸಾಕ್ಷಿಯಾಗಿದ್ದು ಕ್ರೀಡಾ ಮನೋಭಾವದ ಮೂಲಕ ಉತ್ತಮ ಕ್ರೀಡಾಪಟುಗಳಾಗಿ ಗುರುತಿಸಿಕೊಂಡು ಗ್ರಾಮಕ್ಕೆ ಕೀರ್ತಿ ತರಬೇಕೆಂದರು. ವರ್ತಕರ ಸಂಘದ ಮಾಜಿ ಅಧ್ಯಕ್ಷ ಕಾಳಪ್ಪ ಮಾತನಾಡಿ, ಕ್ರೀಡಾ ಸಂಘಗಳ ಮೂಲಕ ಗ್ರಾಮೀಣ ಭಾಗದ ಕ್ರೀಡಾಪಟುಗಳು ರಾಜ್ಯ, ರಾಷ್ಟç, ಅಂತರರಾಷ್ಟಿçÃಯ ಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗಿದ್ದು ಗ್ರಾಮದ ಹಲವಾರು ಕ್ರೀಡಾಪಟುಗಳು ಸಾಧನೆಯೊಂದಿಗೆ ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಿದ್ದಾರೆ ಎಂದರು.

ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಗಣೇಶ್ ಮಾತನಾಡಿ, ೫೫ ವರ್ಷ ಪೂರೈಸಿರುವ ಯುವಕ ಸಂಘ ಹಲವಾರು ಸಮಾಜ ಸೇವಾ ಕಾರ್ಯಗಳೊಂದಿಗೆ ಮುನ್ನಡೆಯುತ್ತಿರುವುದು ಹೆಮ್ಮೆಯ ವಿಷಯ ಎಂದರು.

ಲಾAಛನ ಅನಾವರಣ ಸಂದರ್ಭ ಪ್ರಮುಖರಾದ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಟಿ.ಜಿ. ವಿಜೇಶ್, ಜುಮ್ಮಾ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಹಾಜಿ, ವರ್ತಕರ ಸಂಘದ ಅಧ್ಯಕ್ಷ ಮುನೀರ್, ಗ್ರಾ.ಪಂ. ಸದಸ್ಯರುಗಳಾದ ಅಬ್ದುಲ್ ನಾಸರ್, ಎಂ.ಬಿ. ಪವಿತ್ರ, ಕುಟ್ಟಂಡ ದೇಚಮ್ಮ, ವಾಟೇರಿರ ವಿನು ಸೋಮಣ್ಣ, ಕುಟ್ಟಂಡ ಅಂಜನ್ ಚಿಣ್ಣಪ್ಪ, ವರ್ತಕರ ಸಂಘದ ಖಜಾಂಚಿ ಅಬೂಬಕರ್, ನಾಸೀರ್, ಹೊಸೂರು ಗ್ರಾ.ಪಂ. ಸದಸ್ಯರಾದ ರತ್ನ ಸುಬ್ಬಯ್ಯ, ವಿಶೇಷಚೇತನ ಶಾಲೆಯ ಮುಖ್ಯೋಪಾಧ್ಯಾಯ ಶಿವರಾಜು, ಎಎಸ್‌ಐ ಮಂಜುನಾಥ್, ಚೆನ್ನಯ್ಯನಕೋಟೆ ಸಾಗರ್ ಯೂತ್ ಕ್ಲಬ್‌ನ ಅಧ್ಯಕ್ಷ ರತೀಶ್, ಗುತ್ತಿಗೆದಾರರುಗಳಾದ ವಿನ್ಸಂಟ್, ಫೆಸ್ಟೋಸ್, ಸಿ.ಕೆ. ಮ್ಯಾಥ್ಯೂ (ತಂಬಿ), ಅಬ್ದುಲ್ ಜಬ್ಬಾರ್ ಹಾಜಿ, ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಮದನ್ ಬುಲ್ಲು ಮತ್ತು ವರ್ತಕರ ಸಂಘದ ಉಪಾಧ್ಯಕ್ಷ ಮೈಕೆಲ್, ನಿರ್ದೇಶಕ ಹರೀಶ್ ಉಪಸ್ಥಿತರಿದ್ದರು.

ಯಂಗ್ ಇಂಡಿಯ ಯುವಕ ಸಂಘದ ಅಧ್ಯಕ್ಷ ಸಲೀಂ ರಹಮಾನ್ ಅಧ್ಯಕ್ಷತೆಯಲ್ಲಿ ಲಾಂಛನ ಬಿಡುಗಡೆ ಕಾರ್ಯಕ್ರಮ ನಡೆಯಿತು. ಯಂಗ್ ಇಂಡಿಯ ಯುವಕ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಹಾಜರಿದ್ದರು.