ಮಡಿಕೇರಿ, ನ.೯: ಐರಿ ಸಮಾಜದ ೨೦೨೪-೨೫ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಕೈಲ್‌ಪೋಲ್ದ್ ಒತ್ತೋರ್ಮೆ ಕೂಟ ಹಾಗೂ ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ತಾ. ೯ರಂದು (ಇಂದು) ಅರಮೇರಿ ಗ್ರಾಮದಲ್ಲಿರುವ ಐರಿ ಸಮಾಜದ ನಿವೇಶನದಲ್ಲಿ ನಡೆಯಲಿದೆ ಎಂದು ಐರಿ ಸಮಾಜದ ಕಾರ್ಯದರ್ಶಿ ಕಾಮೆಯಂಡ ಗಣೇಶ್ ತಿಳಿಸಿದ್ದಾರೆ.
ಬೆಳಗ್ಗೆ ೯ ಗಂಟೆಗೆ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ಆರಂಭವಾಗಲಿದೆ. ಪುರುಷರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕ ಸ್ಪರ್ಧೆ ನಡೆಯಲಿದೆ.
ಬಳಿಕ ಮಹಿಳೆಯರು ಮತ್ತು ಮಕ್ಕಳಿಗೆ ವಿವಿಧ ಮನರಂಜನಾ ಸ್ಪರ್ಧೆಗಳು ನಡೆಯಲಿವೆ. ಬಳಿಕ ಒತ್ತೋರ್ಮೆ ಕೂಟದ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಸಮಾರಂಭದಲ್ಲಿ ಐರಿ ಜನಾಂಗದ ಸಾಧಕರನ್ನು ಸನ್ಮಾನಿಸಿ, ಗೌರವಿಸಲಾಗುತ್ತದೆ.
ಬಳಿಕ ಐರಿ ಸಮಾಜದ ಅಧ್ಯಕ್ಷ ಮೇಲತಂಡ ರಮೇಶ್ ಅಧ್ಯಕ್ಷತೆಯಲ್ಲಿ ವಾರ್ಷಿಕ ಮಹಾಸಭೆ ನಡೆಯಲಿದೆ. ವಾರ್ಷಿಕ ವರದಿ, ಲೆಕ್ಕಪತ್ರ ಮಂಡನೆ, ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಸೇರಿದಂತೆ ಹಲವು ಕಾರ್ಯಕ್ರಮಗಳು ಈ ಸಂದರ್ಭ ನಡೆಯಲಿವೆ. ಒತ್ತೋರ್ಮೆ ಕೂಟದಲ್ಲಿ ಚ್ಯಾಲೆ ಕಟ್ಟುವುದು, ರೇಷ್ಮೆ ವಸ್ತç ಕಟ್ಟುವುದು, ಮಂಡೆತುಣಿ ಕಟ್ಟುವ ಪದ್ಧತಿ ಪಡಿಪು ಶಿಬಿರ ಕೂಡ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.