ಕಡಂಗ, ನ. ೮: ಮಡಿಕೇರಿ ತಾಲೂಕಿನ ಕಡಂಗ ಭಾಗಕ್ಕೆ ಭೇಟಿ ನೀಡಿದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರು ಲೋಕೋಪಯೋಗಿ ಇಲಾಖೆಯ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.

ಕಡಂಗ-ಚೆಯ್ಯAಡಾಣೆ ಸಂಪರ್ಕಿಸುವ ಈ ಮುಖ್ಯರಸ್ತೆ, ಮಳೆಯಿಂದ ಹಾನಿಗೀಡಾಗಿದ್ದು ಶಾಸಕರ ವಿಶೇಷ ಅನುದಾನದಲ್ಲಿ ರೂ. ೪ ಕೋಟಿ ೭೫ ಲಕ್ಷ ವೆಚ್ಚದಲ್ಲಿ ರಸ್ತೆಯ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಶೀಘ್ರದಲ್ಲೇ ಕಾಮಗಾರಿಯು ಪೂರ್ಣಗೊಳ್ಳಲಿದ್ದು, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ. ಕಳೆದ ೨೫ ವರ್ಷಗಳಿಂದ ಹದಗೆಟ್ಟ ರಸ್ತೆಗೆ ಈ ಅನುದಾನದಿಂದ ಈ ಭಾಗದ ಜನರಿಗೆ ಅನುಕೂಲವಾಗುತ್ತದೆ ಎಂದು ಶಾಸಕರು ತಿಳಿಸಿದರು.

ಈ ಸಂದರ್ಭದಲ್ಲಿ ಕೆಡಿಪಿ ಸದಸ್ಯ ಮಾಳೆಟೀರ ಪ್ರಶಾಂತ್, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೌಶಿಕ್ ಕಾವೇರಮ್ಮ, ಉಪಾಧ್ಯಕ್ಷರು ಹಾಗೂ ವಲಯ ಅಧ್ಯಕ್ಷ ಕೋಡಿರ ವಿನೋದ್ ನಾಣಯ್ಯ, ರಾಣಿ ಗಣಪತಿ, ವಾಣಿ, ಸುಬೀರ್, ಮಹಮ್ಮದ್, ಪ್ರಕಾಶ್, ಕುಂಡಚ್ಚಿರ ಮಂಜು ದೇವಯ್ಯ ಹಾಗೂ ಪಕ್ಷದ ಪ್ರಮುಖರು, ಸ್ಥಳೀಯರು ಉಪಸ್ಥಿತರಿದ್ದರು.