ಸೋಮವಾರಪೇಟೆ, ನ .೮: ರಾಜ್ಯಾದ್ಯಂತ ನೂತನವಾಗಿ ೯೦೦ ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳನ್ನು ಸ್ಥಾಪಿಸುವ ಚಿಂತನೆಯನ್ನು ರಾಜ್ಯ ಸರ್ಕಾರ ಹೊಂದಿದ್ದು, ಕೊಡಗಿಗೂ ಅವಕಾಶ ಸಿಗಲಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

೧೦೦ ವರ್ಷಗಳನ್ನು ಪೂರೈಸಿರುವ ಸಮೀಪದ ಬೇಳೂರು ಕುಸುಬೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಶಾಲಾ ಶತಮಾನೋತ್ಸವ ಸಮಿತಿ, ಹಳೆ ವಿದ್ಯಾರ್ಥಿಗಳ ಸಂಘ, ಶಾಲಾಭಿವೃದ್ಧಿ ಸಮಿತಿ ವತಿಯಿಂದ ಆಯೋಜಿಸಿದ್ದ ಶತಮಾನೋತ್ಸವದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಪ್ರಯೋಜನವನ್ನು ಕೊಡಗಿನವರೂ ಪಡೆದುಕೊಳ್ಳಬೇಕು. ಸರ್ಕಾರದಿಂದ ೯೦೦ ಕೆಪಿಎಸ್ ಶಾಲೆಗಳನ್ನು ತೆರೆಯಲು ತೀರ್ಮಾನಿಸಲಾಗಿದೆ. ಎಲ್.ಕೆ.ಜಿ.ಯಿಂದ ಪಿಯುಸಿವರೆಗೆ ಒಂದೇ ಸಂಕೀರ್ಣದಲ್ಲಿ ಮಕ್ಕಳು ವಿದ್ಯಾಭ್ಯಾಸ ಮಾಡುವ ಅವಕಾಶ ಲಭಿಸಲಿದೆ. ಪ್ರತಿ ಗ್ರಾ.ಪಂ.ಗಳಿಗೆ ಒಂದರAತೆ ಕೆ.ಪಿ.ಎಸ್.ಶಾಲೆಗಳನ್ನು ತೆರೆಯಲು ಚಿಂತನೆ ಹರಿಸಲಾಗಿದೆ. ಇಲಾಖೆಯ ವತಿಯಿಂದಲೇ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಮಧು ಬಂಗಾರಪ್ಪ ತಿಳಿಸಿದರು.

ಮಲೆನಾಡು ಭಾಗದಲ್ಲಿ ಹೆಚ್ಚಿನ ಶಾಲೆಗಳಿಗೆ ಹೊಸ ಕಟ್ಟಡದ ಅವಶ್ಯಕತೆಯಿದೆ. ನೂರರ ಸಂಭ್ರಮದಲ್ಲಿರುವ ಶಾಲೆಗಳನ್ನು ಉಳಿಸಿ ಬೆಳೆಸಲು ವಿಶೇಷ ಪ್ರಯತ್ನ ನಡೆಸಲಾಗುವುದು ಎಂದ ಅವರು, ಹಿಂದೆ ಸಾಕಷ್ಟು ಶಿಕ್ಷಕರ ನೇಮಕಾತಿ ಆಗಿರಲಿಲ್ಲ. ಇದೀಗ ನೂತನವಾಗಿ ೧೮ ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದರು.

ನಮ್ಮ ಸರ್ಕಾರ ಬಂದ ನಂತರ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ದಾನಿಗಳೂ ಕೂಡ ಸರ್ಕಾರಿ ಶಾಲೆಗೆ ಸಹಕಾರ ನೀಡುತ್ತಿರುವುದು ಸಂತೋಷದ ವಿಷಯ. ಉತ್ತಮ ಮಾರ್ಗದಲ್ಲಿ ಸಾಗಲು ಉತ್ತಮ ಶಿಕ್ಷಣದಿಂದ ಮಾತ್ರ ಸಾಧ್ಯ. ಬೆಳಿಗ್ಗೆ ಶಾಲೆಗಳಲ್ಲಿ ೯.೩೦ ಕ್ಕೆ ಘಂಟೆ ಹೊಡೆದರೆ ಮಾತ್ರ ದೇಶ ಉದ್ದಾರವಾಗುತ್ತದೆ ಎಂದು ವಿಶ್ಲೇಷಿಸಿದರು.

ಶಿಕ್ಷಣ ಇಲಾಖೆಯಲ್ಲೂ ಹಲವಷ್ಟು ಸಮಸ್ಯೆಗಳಿದ್ದು, ಕಳೆದೆÀರೆಡು ವರ್ಷಗಳಿಂದ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗಿದೆ. ಶಿಕ್ಷಣ ಕೊಟ್ಟರೆ ಮಾತ್ರ ಯಾವುದೇ ವ್ಯಕ್ತಿ ಸ್ವಂತ ಶಕ್ತಿಯಿಂದ ಜೀವನ ನಡೆಸಲು ಸಾಧ್ಯ ಎಂಬುದನ್ನು ಮನಗಂಡು, ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವ ವಿದ್ಯಾರ್ಥಿಗಳಿಗೂ ಮರು ಪರೀಕ್ಷೆಯ ಅವಕಾಶ ಕಲ್ಪಿಸಲಾಗಿದೆ. ಶೇ. ೭೯.೮೯ ಮಕ್ಕಳು ಪ್ರಥಮ ಹಂತದಲ್ಲಿ ಉತ್ತೀರ್ಣರಾಗಿದ್ದಾರೆ. ಮರು ಪರೀಕ್ಷೆಯಿಂದ ಹೆಚ್ಚುವರಿಯಾಗಿ ೧.೫೦ ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿ ಮುಂದಿನ ವಿದ್ಯಾಭ್ಯಾಸ ಮುಂದುವರೆಸಿದ್ದಾರೆ ಎಂದರು.

ಸರ್ಕಾರಿ ಶಾಲೆಗಳ ಉಳಿವಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಶಿಕ್ಷಕರು ವಿಶೇಷ ತರಗತಿಗಳನ್ನು ಮಾಡುವ ಮೂಲಕ ಮಕ್ಕಳ ಶೈಕ್ಷಣಿಕ ಪ್ರಗತಿಗೆ ನೆರವಾಗಬೇಕೆಂದು ಕರೆ ನೀಡಿದರು.

ಶತಮಾನೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಡಾ. ಮಂತರ್ ಗೌಡ ಅವರು, ಶಾಲೆಗಳು ಭವಿಷ್ಯದ ಪ್ರತೀಕ- ಅಡಿಗಲ್ಲು. ಶಿಕ್ಷಣದ ಗುಣಮಟ್ಟ ಕಾಯ್ದುಕೊಳ್ಳಬೇಕು. ಶಿಕ್ಷಕ ವರ್ಗ ಪ್ರಾಮಾಣಿಕವಾಗಿ ಪ್ರೀತಿ ವಿಶ್ವಾಸದೊಂದಿಗೆ ಶಿಕ್ಷಣ ನೀಡಬೇಕು. ಧನಾತ್ಮಕ ಚಿಂತನೆಯನ್ನು ಸೃಷ್ಟಿಸಬೇಕು. ಮಕ್ಕಳಿಗೆ ಮಾದರಿಯಾಗಿರಬೇಕು. ಸರ್ಕಾರಿ ಶಾಲೆಗಳ ಉಳಿವು ಆಗಬೇಕು. ಶಾಲೆಗೆ ಹೆಚ್ಚುವರಿ ಕಟ್ಟಡ ನಿರ್ಮಾಣಕ್ಕೆ ಸಹಕಾರ ನೀಡಲಾಗುವುದು. ಸ್ಥಳೀಯ ಸಾರ್ವಜನಿಕರು ತಮ್ಮ ಮಕ್ಕಳನ್ನು ಈ ಶಾಲೆಗೆ ೪ಏಳನೇ ಪುಟಕ್ಕೆ ಸೇರಿಸಬೇಕು ಎಂದರು. ಶತಮಾನೋತ್ಸವ ಸಮಾರಂಭದ ಹಿನ್ನೆಲೆ ಶಾಲೆಯನ್ನು ಆಧುನೀಕರಣಗೊಳಿಸಲಾಗಿದೆ. ದುರಸ್ತಿ ಕಾರ್ಯಗಳಿಗೆ ೨೩ ಲಕ್ಷ ಅನುದಾನ ಒದಗಿಸಲಾಗಿದೆ. ಎಲ್ಲಾ ಸೌಕರ್ಯಗಳನ್ನೂ ಸರ್ಕಾರಿ ಶಾಲೆಯಲ್ಲಿ ಕಲ್ಪಿಸಲಾಗಿದೆ. ಪೋಷಕರು ಹಾಗೂ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಶತಮಾನೋತ್ಸವ ಸಮಿತಿ ಅಧ್ಯಕ್ಷ ಪ್ರಭುದೇವ್, ದಾನಿಗಳಾದ ಡಾ. ಚಂದ್ರಮೌಳಿ, ಶಿಕ್ಷಣ ಇಲಾಖೆಯ ಬಸವರಾಜು, ತಹಶೀಲ್ದಾರ್ ಕೆ.ಕೆ. ಕೃಷ್ಣಮೂರ್ತಿ, ಡಯಟ್ ಉಪನ್ಯಾಸಕ ಸ್ವಾಮಿ, ಬಿಇಓ ಕೃಷ್ಣಪ್ಪ, ಜಿ.ಪಂ. ಮಾಜಿ ಅಧ್ಯಕ್ಷೆ ಹಾಗೂ ಶಾಲೆಯ ಹಳೆ ವಿದ್ಯಾರ್ಥಿ ಕೆ.ಪಿ. ಚಂದ್ರಕಲಾ, ಎಸ್.ಡಿ.ಎಂ.ಸಿ. ಅಧ್ಯಕ್ಷ ಪ್ರಸಾದ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ಗ್ರಾ.ಪಂ. ಪಿಡಿಓ ಮೋಹನ್, ಉಪಾಧ್ಯಕ್ಷ ಕೆ.ಪಿ.ಸುದರ್ಶನ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕುಮಾರ್ ಉಲ್ಲಾಸ್, ಪ್ರಧಾನ ಕಾರ್ಯದರ್ಶಿ ಆನಂದ್, ಡಾ. ವೇಣುಗೋಪಾಲ್, ಪ್ರದೀಪ್, ಅಕ್ರಮ ಸಕ್ರಮ ಸಮಿತಿ ಸದಸ್ಯ ಬಿ.ಬಿ. ಸತೀಶ್, ದಾನಿ ಬೋಪಣ್ಣ, ಕೆ.ಡಿ. ಕುಮಾರ್, ಕೆ.ಜಿ. ಸುರೇಶ್, ಕೆ.ಜೆ. ಸುನಿಲ್, ಬಸವರಾಜು ಸೇರಿದಂತೆ ಇತರರು ಇದ್ದರು. ಶಿಕ್ಷಕರುಗಳಾದ ನಿರ್ಮಲ, ಊ.ರಾ. ನಾಗೇಶ್, ಥೆರೆಸಾ ಅವರುಗಳು ಕಾರ್ಯಕ್ರಮ ನಿರ್ವಹಿಸಿದರು.