ಮಡಿಕೇರಿ, ನ. ೮: ಆದಿಮಸಂಜಾತ ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವ ಸಮುದಾಯಕ್ಕೆ ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ, ಸ್ವಯಂ ಆಡಳಿತ, ಆಂತರಿಕ ಸ್ವಯಂ ನಿರ್ಣಯದ ಹಕ್ಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸತ್ಯಾಗ್ರಹ ನಡೆಸಿತು.

ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಸತ್ಯಾಗ್ರಹ ನಡೆಸಿದ ಸದಸ್ಯರು ಕೊಡವಲ್ಯಾಂಡ್ ಪರ ಘೋಷಣೆಗಳನ್ನು ಕೂಗಿದರು. ಕೊಡವರ ಸಾಂಪ್ರದಾಯಿಕ ಗನ್ (ತೋಕ್) ವಿನಾಯಿತಿಯನ್ನು ಸಂವಿಧಾನದ ೨೫ ಮತ್ತು ೨೬ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಬೇಕು. ಕೊಡವರಿಗೆ ಎಸ್‌ಟಿ ಟ್ಯಾಗ್ ನೀಡಬೇಕು, ಕೊಡವರ ರಾಜಕೀಯ ಸಬಲೀಕರಣಕ್ಕೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸಬೇಕು ಸೇರಿದಂತೆ ವಿವಿಧ ಹಕ್ಕೊತ್ತಾಯಗಳನ್ನು ಮಂಡಿಸಿದ ಎನ್.ಯು.ನಾಚಪ್ಪ ಅವರು ಜಿಲ್ಲಾಡಳಿತದ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಮನವಿಪತ್ರ ಸಲ್ಲಿಸಿದರು.

ಭಾರತದ ಸಂವಿಧಾನ ಪರಿಶೀಲನಾ ಆಯೋಗವು ಶಿಫಾರಸ್ಸು ಮಾಡಿದಂತೆ ಈಶಾನ್ಯ ಭಾರತದಲ್ಲಿ ಅಸ್ತಿತ್ವದಲ್ಲಿರುವ ಸ್ವಾಯತ್ತ ಪ್ರದೇಶಗಳು, ಪ್ರಾದೇಶಿಕ ಮಂಡಳಿಗಳು, ಲೇಹ್ ಮತ್ತು ಲಡಾಖ್ ಸ್ವಾಯತ್ತ ಪ್ರದೇಶಗಳ ಮಾದರಿಯಲ್ಲಿ ಕೊಡವಲ್ಯಾಂಡ್ ಕಲ್ಪಿಸಬೇಕು.

ಅಂತರರಾಷ್ಟಿçÃಯ ಕಾನೂನಿನಡಿಯಲ್ಲಿ ಆದಿಮಸಂಜಾತ ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವ ಜನಾಂಗೀಯತೆಗೆ ವಿಶ್ವಸಂಸ್ಥೆಯ ಮಾನ್ಯತೆ ನೀಡಬೇಕು. ಕೊಡಗಿನ ಪ್ರಾಚೀನ, ಮೂಲನಿವಾಸಿ ಆದಿಮಸಂಜಾತ ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವ ಸಮುದಾಯವನ್ನು ಸಂವಿಧಾನದ ಪರಿಶಿಷ್ಟ ಪಟ್ಟಿಗೆ ಸೇರಿಸಬೇಕು.

ಕೊಡವ ಸಾಂಪ್ರದಾಯಿಕ ಧಾರ್ಮಿಕ “ಸಂಸ್ಕಾರ ಬಂದೂಕು” ಹಕ್ಕುಗಳನ್ನು ಸಿಖ್ “ಕಿರ್ಪಣ್” ಗೆ ಸಮಾನವಾಗಿ ಸಂವಿಧಾನದ ೨೫ ಮತ್ತು ೨೬ನೇ ವಿಧಿಗಳ ಅಡಿಯಲ್ಲಿ ರಕ್ಷಿಸಬೇಕು. ಕೊಡವ ಭಾಷೆಯನ್ನು ೮ನೇ ಶೆಡ್ಯೂಲ್ ಪಟ್ಟಿಯಲ್ಲಿ ಸೇರಿಸಬೇಕು ಹಾಗೂ ಶಿಕ್ಷಣ ಮತ್ತು ಆಡಳಿತದಲ್ಲಿ ಪರಿಚಯಿಸಬೇಕು. ಕೊಡವ ಜಾನಪದ ಪರಂಪರೆಯನ್ನು ಯುನೆಸ್ಕೋದ ಅಮೂರ್ತ ಸಾಂಸ್ಕöÈತಿಕ ಪರಂಪರೆಯ ಪಟ್ಟಿಯಲ್ಲಿ ಸೇರಿಸಬೇಕು. ಕೊಡವ ಜಾನಪದ ಪರಂಪರೆಯನ್ನು ಜೀವಂತಗೊಳಿಸಲು, ಸರ್ಕಾರವು ವಿಶ್ವ ಕೊಡವಾಲಜಿ ಸಂಶೋಧನಾ ಕೇಂದ್ರ ಮತ್ತು ಕೊಡವ ಸುಧಾರಿತ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲು ಭೂಮಿಯನ್ನು ಒದಗಿಸಬೇಕು.

ನಾಲ್ನಾಡ್ ಅರಮನೆ ಮತ್ತು ಮಡಿಕೇರಿ ಕೋಟೆಯಲ್ಲಿ ಅರಮನೆ ಪಿತೂರಿಯಲ್ಲಿ ನಡೆದ ರಾಜಕೀಯ ಹತ್ಯೆಗಳ ಸ್ಮರಣಾರ್ಥ ಸ್ಮಾರಕ ಸ್ಥಾಪಿಸಬೇಕು. ವುಲುಗುಲಿ, ಮುಳ್ಳುಸೋಗೆ, ಲಕ್ಡಿಕೋಟೆ, ಹಾರಂಗಿ ಮತ್ತು ಗದ್ದಿಗೆಬೆಟ್ಟದಲ್ಲಿ ಯುದ್ಧ ಸ್ಮಾರಕಗಳನ್ನು ಸ್ಥಾಪಿಸಬೇಕು.

ದೇವಟ್‌ಪರಂಬ್ ನಲ್ಲಿ ಅಂತರರಾಷ್ಟಿçÃಯ ಕೊಡವ ನರಮೇಧ ಸ್ಮಾರಕ ನಿರ್ಮಿಸಬೇಕು. ಎರಡೂ ದುರಂತಗಳನ್ನು ವಿಶ್ವಸಂಸ್ಥೆಯ ಹತ್ಯಾಕಾಂಡದ ಸ್ಮರಣಾರ್ಥ ಪಟ್ಟಿಯಲ್ಲಿ ಸೇರಿಸಬೇಕು. ಕೊಡವ ಜನಾಂಗದ ಪ್ರಾಚೀನ ಯುದ್ಧಭೂಮಿ ಮತ್ತು ದೇಶ ಮಂದ್ ಆಗಿರುವ ದೇವಟ್‌ಪರಂಬ್‌ವನ್ನು ಕುರುಕ್ಷೇತ್ರ, ಕಳಿಂಗ ಮತ್ತು ಆಕ್ಟಿಯಂನAತಹ ಪ್ರಾಚೀನ ಯುದ್ಧಭೂಮಿಗಳಿಗೆ ಸಮಾನವಾದ ಪರಂಪರೆಯ ತಾಣಗಳಾಗಿ ಸಂರಕ್ಷಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಪೂರೈಸುವಂತೆ ಮನವಿ ಮೂಲಕ ಒತ್ತಾಯಿಸಲಾಗಿದೆ.

ಚೋಳಪಂಡ ನಾಣಯ್ಯ, ಪಚ್ಚಾರಂಡ ಶಾಂತಿ ಪೊನ್ನಪ್ಪ, ಮುದ್ದಿಯಡ ಲೀಲಾವತಿ, ಅರೆಯಡ ಗಿರೀಶ್, ಕಾಂಡೇರ ಸುರೇಶ್, ಮಂದಪAಡ ಮನೋಜ್, ಬೇಪಡಿಯಂಡ ಬಿದ್ದಪ, ಚಂಗAಡ ಚಾಮಿ ಪಳಂಗಪ್ಪ, ಕೂಪದಿರ ಸಾಬು, ಪುಟ್ಟಿಚಂಡ ಡಾನ್ ದೇವಯ್ಯ, ಅಪ್ಪಾರಂಡ ಪ್ರಸಾದ್, ಮೇದುರ ಕಂಠಿ, ಬೊಟ್ಟಂಗಡ ಜಪುö್ಪ, ನಂದಿನೆರವAಡ ಅಯ್ಯಣ್ಣ, ಮುದ್ದಂಡ ಗಪ್ಪಣ್ಣ, ನಂದಿನೆರವAಡ ಅಪ್ಪಯ್ಯ, ಚೋಳಪಂಡ ನಾಣಯ್ಯ, ನಾಪಂಡ ಲೋಹಿತ್, ಮುದ್ದಂಡ ಸೋಮಯ್ಯ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.