ಮಡಿಕೇರಿ: ಓಂಕಾರೇಶ್ವರ ದೇವಾಲಯದ ಬಳಿ ಇರುವ ಓಂಕಾರ್ ಆಟೋ ಚಾಲಕರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಧ್ವಜಾರೋಹಣದ ನಂತರ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಗೌರಮ್ಮ ಮಾದಮಯ್ಯ, ನಗರಸಭೆ ಸದಸ್ಯ ಚಂದ್ರಶೇಖರ್, ಸ್ವಾಗತ್ ಡೆಕೋರೇಟರ್ಸ್ ಮಾಲೀಕ ಅಜ್ಜೇಟಿರ ಲೋಕೇಶ್, ಗುರು ಎಲೆಕ್ಟಿçಕಲ್ಸ್ ಮಾಲೀಕ ಲೋಕೇಶ್, ಓಂಕಾರ್ ಡೆಕೋರೇಟರ್ಸ್ ಮಾಲೀಕ ಬೊಳ್ಳಚಂಡ ಪ್ರದೀಪ್, ಗಿರಿ ಕ್ಯಾಟ್ರಿಂಗ್ ಮಾಲೀಕ ಗಿರೀಶ್, ಪರ್ಫೆಕ್ಟ್ ಈವೆಂಟ್ ಪ್ಲಾನರ್ಸ್ ಮಾಲೀಕ ಪ್ರಮೋದ್ ಡಿ.ಆರ್. ಹಾಗೂ ನಗರ ಆಟೋ ಚಾಲಕ ಮಾಲೀಕರ ಸಂಘದ ಅಧ್ಯಕ್ಷ ಸಮ್ಮದ್ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.ಕೂಡಿಗೆ: ಕನ್ನಡ ಭಾಷೆಯನ್ನು ಬಳಸಿ ಉಳಿಸಿ ಬೆಳೆಸಬೇಕಾಗಿದೆ ಎಂದು ರಂಗಭೂಮಿ ಕಲಾವಿದ ಕೂಡ್ಲೂರಿನ ಭರಮಣ್ಣ ಟಿ. ಬೆಟಗೇರಿ ಹೇಳಿದರು.
ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಕುವೆಂಪು ಕನ್ನಡ ಭಾಷಾ ಸಂಘದ ವತಿಯಿಂದ ಕುಶಾಲನಗರ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಕುಶಾಲನಗರ ಸ್ಥಳೀಯ ಸಂಸ್ಥೆ ಹಾಗೂ ಕುಶಾಲನಗರ ಲಯನ್ಸ್ ಕ್ಲಬ್ನ ಸಹಯೋಗದೊಂದಿಗೆ ಶಾಲಾ ಅಂಗಳದಲ್ಲಿ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ನಾಡು - ನುಡಿ, ಸಂಸ್ಕೃತಿ ಹಾಗೂ ಪರಂಪರೆಯ ವೈಭವದ ಬಗ್ಗೆ ಅವರು ಮಾತನಾಡಿದರು.
ಇಂದು ಹೆಮ್ಮೆಯಿಂದ ಆಚರಿಸುತ್ತಿರುವ ಕನ್ನಡ ರಾಜ್ಯೋತ್ಸವದ ಹಿಂದೆ ನಾಡಿನ ಏಕೀಕರಣಕ್ಕಾಗಿ ಶ್ರಮಿಸಿದ ಮಹನೀಯರ ಹೋರಾಟವಿದೆ. ಸಹಸ್ರಾರು ಜನ ಕನ್ನಡಿಗರು ಹಗಲಿರುಳು ದುಡಿದಿದ್ದಾರೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ. ಪ್ರೇಮಕುಮಾರ್, ನಮ್ಮ ಕನ್ನಡದ ಉತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವುದರ ಮೂಲಕ ಕನ್ನಡದ ಕಂಪನ್ನು ಎಲ್ಲೆಡೆ ಪಸರಿಸಲಾಗುತ್ತಿದೆ. ಕನ್ನಡ ನಾಡಿನ ಇತಿಹಾಸ, ಸಂಸ್ಕೃತಿ, ಕಲೆ, ಭಾಷೆ ಬಗ್ಗೆ ನೆನೆದು ಮೆಲುಕುಹಾಕುವುದು ನಮ್ಮ ಆದ್ಯ ಕರ್ತವ್ಯ ಎಂದರು.
ಭಾರತ್ ಸ್ಕೌಟ್ಸ್, ಗೈಡ್ಸ್ನ ಕುಶಾಲನಗರ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ. ಪ್ರವೀಣ್ ದೇವರಗುಂಡ ಸೋಮಪ್ಪ ಮಾತನಾಡಿ, ಈ ಶಾಲೆಯಲ್ಲಿ ಕನ್ನಡ ಭಾಷಾ ಚಟುವಟಿಕೆಗಳ ಜೊತೆಗೆ ವಿಜ್ಞಾನ, ಪರಿಸರ, ಸಾಹಿತ್ಯ, ಸಂಸ್ಕೃತಿ ಚಟುವಟಿಕೆಗಳ ಜತೆಗೆ ಕ್ರೀಡೆ, ಸ್ಕೌಟ್ಸ್, ಗೈಡ್ಸ್ ಚಟುವಟಿಕೆಗಳ ಮೂಲಕ ಮಕ್ಕಳಿಗೆ ಉತ್ತಮ ಕೌಶಲ್ಯಗಳನ್ನು ಕಲಿಸುತ್ತಿರುವುದು ಶ್ಲಾಘನೀಯ ಎಂದರು.
ಕನ್ನಡ ಭಾಷೆಯ ಬೆಳವಣಿಗೆ ಕುರಿತು ಮಾತನಾಡಿದ ಶಾಲೆಯ ಕನ್ನಡ ಭಾಷಾ ಶಿಕ್ಷಕ ಕೆ. ಗೋಪಾಲಕೃಷ್ಣ, ಕರ್ನಾಟಕ ಏಕೀಕರಣವಾದ ದಿನವೇ ರಾಜ್ಯೋತ್ಸವ ದಿನ. ಈ ಏಕೀಕರಣಕ್ಕೆ ಶ್ರಮಿಸಿದವರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.
ಕುಶಾಲನಗರ ಲಯನ್ಸ್ ಕ್ಲಬ್ನ ಅಧ್ಯಕ್ಷ ಎನ್.ಟಿ. ನಾರಾಯಣ ಮಾತನಾಡಿ, ವಿದ್ಯಾರ್ಥಿಗಳು ನಾಡು - ನುಡಿ, ಸಂಸ್ಕೃತಿಯ ಬಗ್ಗೆ ಹೆಚ್ಚಿನ ಜ್ಞಾನ ಬೆಳೆಸಿಕೊಳ್ಳಬೇಕು ಎಂದರು.
ಲಯನ್ಸ್ ಕ್ಲಬ್ನ ಉಪಾಧ್ಯಕ್ಷ ಕೆ.ಎನ್. ಪವನ್ ಕುಮಾರ್ ಮಾತನಾಡಿ, ಕಲೆ, ಸಂಸ್ಕೃತಿಯ ಬೀಡಾದ ಕನ್ನಡನಾಡಿನಲ್ಲಿ ನಾಡು - ನುಡಿ ಬೆಳವಣಿಗೆಗೆ ಎಲ್ಲರೂ ಕಟಿಬದ್ಧರಾಗಬೇಕಿದೆ ಎಂದರು.
ನಿವೃತ್ತ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ.ಎಸ್. ದಯಾನಂದ್, ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ. ದಯಾನಂದ ಪ್ರಕಾಶ್, ಲಯನ್ಸ್ ಕ್ಲಬ್ನ ಕಾರ್ಯದರ್ಶಿ ಕಿರಣ್ ಕುಮಾರ್, ಸದಸ್ಯರಾದ ಹರೀಶ್ ಗಣಪತಿ, ಕುಮಾರ್, ಸಂಧ್ಯಾ ನಾರಾಯಣ್, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.
ಶಾಲಾ ಮಕ್ಕಳು ನಾಡು - ನುಡಿ, ಸಂಸ್ಕೃತಿಗೆ ಸಂಬAಧಿಸಿದAತೆ ಭಾಷಣ ಹಾಗೂ ಕನ್ನಡ ಗೀತೆಗಳನ್ನು ಹಾಡಿ ಗಮನ ಸೆಳೆದರು.ಪೊನ್ನಂಪೇಟೆ: ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಈ ಸಂದರ್ಭ ಪ್ರಾಂಶುಪಾಲ ಡಾ. ಎಂ.ಬಿ. ಕಾವೇರಿಯಪ್ಪ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿ, ಕನ್ನಡ ರಾಜ್ಯೋತ್ಸವ ಕೇವಲ ಆಚರಣೆಯಾಗಬಾರದು. ಈ ನಾಡಿನ ಸರ್ವರೂ ಕನ್ನಡತನ, ಕನ್ನಡ ಭಾಷೆ ಮೇಲೆ ಅಭಿಮಾನವನ್ನು ಬೆಳೆಸಿಕೊಳ್ಳಬೇಕೆಂದರು.
ಈ ಸಂದರ್ಭ ಉಪಪ್ರಾಂಶುಪಾಲೆ ಪ್ರೊ. ಎಂ.ಎಸ್. ಭಾರತಿ, ಹಿರಿಯ ಉಪನ್ಯಾಸಕಿ ಸಿ.ಪಿ. ಸುಜಯ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ಕೆ.ಕೆ. ಚಿತ್ರಾವತಿ, ಎನ್.ಎಸ್.ಎಸ್. ಅಧಿಕಾರಿ ಎಂ.ಎ. ಕುಶಾಲಪ್ಪ, ಪೂಜಾ ಶರಣು, ಎನ್.ಸಿ.ಸಿ. ಅಧಿಕಾರಿ ಲೆಫ್ಟಿನೆಂಟ್ ಐ.ಡಿ. ಲೇಪಾಕ್ಷಿ, ರೋವರ್ಸ್ ರೇಂಜರ್ ಅಧಿಕಾರಿ ಡಾ. ಸೀಮಾ ಹಾಗೂ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು.ಚೆಯ್ಯಂಡಾಣೆ: ವೀರಾಜಪೇಟೆಯ ಡೊನೆಟರ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವೀರಾಜಪೇಟೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರಾಜೇಶ್ ಪದ್ಮನಾಭ ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿದರು.
ಸಂಸ್ಥೆಯ ಗೌರವಾಧ್ಯಕ್ಷ ಮೊಹಮ್ಮದ್ ರಾಫಿ ಪ್ರಾಸ್ತಾವಿಕವಾಗಿ ಮಾತನಾಡಿ, ಕನ್ನಡದ ಮಹತ್ವವನ್ನು ಸಾರಿದರು. ಸಂಸ್ಥೆಯ ಅಧ್ಯಕ್ಷ ಆಲೀರ ಪವಿಲ್ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದರು. ಈ ಸಂದರ್ಭ ಟ್ರಸ್ಟ್ನ ಸದಸ್ಯರು, ಕನ್ನಡ ಅಭಿಮಾನಿಗಳು ಉಪಸ್ಥಿತರಿದ್ದರು.ಚೆಯ್ಯಂಡಾಣೆ: ವೀರಾಜಪೇಟೆಯ ಡೊನೆಟರ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವೀರಾಜಪೇಟೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರಾಜೇಶ್ ಪದ್ಮನಾಭ ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿದರು.
ಸಂಸ್ಥೆಯ ಗೌರವಾಧ್ಯಕ್ಷ ಮೊಹಮ್ಮದ್ ರಾಫಿ ಪ್ರಾಸ್ತಾವಿಕವಾಗಿ ಮಾತನಾಡಿ, ಕನ್ನಡದ ಮಹತ್ವವನ್ನು ಸಾರಿದರು. ಸಂಸ್ಥೆಯ ಅಧ್ಯಕ್ಷ ಆಲೀರ ಪವಿಲ್ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದರು. ಈ ಸಂದರ್ಭ ಟ್ರಸ್ಟ್ನ ಸದಸ್ಯರು, ಕನ್ನಡ ಅಭಿಮಾನಿಗಳು ಉಪಸ್ಥಿತರಿದ್ದರು.ಮಡಿಕೇರಿ: ಜಿಲ್ಲಾ ಬಸ್ ಕಾರ್ಮಿಕರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಸಂಘದ ಅಧ್ಯಕ್ಷ ಭರತ್ ಕುಮಾರ್, ಉಪಾಧ್ಯಕ್ಷ ವಿಜಯಕುಮಾರ್, ಕಾರ್ಯದರ್ಶಿ ಉಮೇಶ್, ಸಹಕಾರ್ಯದರ್ಶಿ ಲಿಂಗಪ್ಪ, ಖಜಾಂಚಿ ನಾಗೇಂದ್ರ, ಸಂಘದ ಹಿರಿಯರಾದ ಸುಲೇಮಾನ್ ಮತ್ತು ಮೋಣು, ಸಂಚಾಲಕರಾದ ಮಂಜುನಾಥ್, ಸಂಘದ ಸದಸ್ಯರು ಹಾಜರಿದ್ದರು.ವೀರಾಜಪೇಟೆ: ವಿದ್ಯಾರ್ಥಿಗಳು ಕನ್ನಡ ಭಾಷೆ, ನೆಲ, ಜಲದ ಬಗ್ಗೆ ಅಭಿಮಾನ ಹೊಂದಿರಬೇಕು ಎಂದು ನಿವೃತ್ತ ಶಿಕ್ಷಕಿ ಹೆಚ್.ಜಿ. ಸಾವಿತ್ರಿ ಹೇಳಿದರು.
ಬಾಳುಗೋಡುವಿನ ಏಕಲವ್ಯ ಮಾದರಿ ವಸತಿ ಶಾಲೆಯ ಪ್ರಾರ್ಥನಾ ಮಂದಿರದಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ನಡೆದ ನುಡಿ ಮೃದಂಗ ಸಮಾರಂಭದಲ್ಲಿ ಭುವನೇಶ್ವರಿ ತಾಯಿಗೆ ಪುಷ್ಪಾರ್ಚನೆ ಮಾಡಿ, ಜ್ಯೋತಿ ಬೆಳಗಿಸುವ ಮೂಲಕ ಕನ್ನಡ ರಾಜ್ಯೋತ್ಸವ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕನ್ನಡವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರದ್ದಾಗಿದೆ. ಈ ದಿನವು ಪ್ರತಿಯೊಬ್ಬ ಕನ್ನಡಿಗನ ಹೃದಯದಲ್ಲಿ ಹೆಮ್ಮೆಯ ದಿನವಾಗಲಿ ಎಂದರು.
ಉಪನ್ಯಾಸಕ ಬಡಕಡ ಈ. ಪ್ರದೀಪ್ ಮಾತನಾಡಿ, ರಾಜ್ಯೋತ್ಸವದ ಆಚರಣೆ ಕೇವಲ ಧ್ವಜಾರೋಹಣ, ಶೋಭಾಯಾತ್ರೆ ಅಥವಾ ನೃತ್ಯಗಳಿಗೆ ಮಾತ್ರ ಸೀಮಿತವಾಗಬಾರದು. ಕನ್ನಡವನ್ನು ಕೇವಲ ಭಾಷೆಯಾಗಿ ನೋಡದೆ, ಅದು ನಮ್ಮ ಆತ್ಮ, ಸಂಸ್ಕöÈತಿ ಮತ್ತು ಅಸ್ತಿತ್ವ ಎಂದು ಮನಗಾಣಬೇಕು ಎಂದರು.
ಶಾಲೆಯ ಪ್ರಾಂಶುಪಾಲರಾದ ಮೇವಾಲಾಲ್ ಕಾಟಿಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭ ನಿವೃತ್ತ ಶಿಕ್ಷಕಿ ಸಾವಿತ್ರಿ ಅವರನ್ನು ಶಾಲೆ ವತಿಯಿಂದ ಸನ್ಮಾನಿಸಲಾಯಿತು.
ಶೃತಿ ಹೆಚ್.ಎಂ. ಸುಭಾಶ್ ಎಂ. ಭವ್ಯ ಮತ್ತು ಅಮೂಲ್ಯ ಕಾರ್ಯಕ್ರಮ ಸಂಯೋಜಿಸಿದರು. ಈ ಸಂದರ್ಭ ವಿದ್ಯಾರ್ಥಿಗಳಿಂದ ನಾಡು ನುಡಿಗೆ ಸಂಬAಧಿಸಿದ ಭಾಷಣ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.ಕಣಿವೆ: ಇಂದಿನ ಯುವ ಪೀಳಿಗೆಯ ಕೈಯಲ್ಲಿ ಕರ್ನಾಟಕದ ಭವಿಷ್ಯ ಇದೆ ಎಂದು ಕೊಡಗು ವಿ.ವಿ. ಉಪಕುಲಪತಿ ಅಶೋಕ ಸಂಗಪ್ಪ ಆಲೂರ ಹೇಳಿದರು.
ಜ್ಞಾನ ಕಾವೇರಿ ಆವರಣ, ಚಿಕ್ಕಅಳುವಾರದ ಕಾವೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ, ಭುವನೇಶ್ವರಿ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದ ಅವರು, ಸಾವಿರಾರು ವರ್ಷಗಳ ಸಾಂಸ್ಕೃತಿಕ ಅಸ್ಮಿತೆಯನ್ನು ಹೊಂದಿರುವ ಕನ್ನಡ ಭಾಷೆಗೆ ಭಾವನಾತ್ಮಕ ಬಾಂಧವ್ಯವಿದೆ.
ನಾವೆಲ್ಲರೂ ಕನ್ನಡಿಗರು, ವಿಶ್ವಮಾನವ ಸಂದೇಶವು ನಮ್ಮ ಸಮಾಜವನ್ನು ವಿಶ್ವದೊಂದಿಗೆ ಸಂಪರ್ಕಿಸುವ ಜೀವನದ ದಾರಿಯಾಗಿದೆ ಎಂದರು.
ಈ ಸಂದರ್ಭ ಬೋಧಕ ಮತ್ತು ಬೋಧಕೇತರ ವೃಂದ, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ದೀಪ್ತಿ ನಿರೂಪಣೆ ಮಾಡಿದರು. ಉಪನ್ಯಾಸಕ ಡಾ. ಜಮೀರ್ ಅಹಮದ್ ಸ್ವಾಗತಿಸಿದರು.ಐಗೂರು: ಐಗೂರಿನ ಪದವಿಪೂರ್ವ ಕಾಲೇಜು ಮತ್ತು ಪ್ರೌಢಶಾಲೆ ಸಂಯುಕ್ತ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಪ್ರಾಂಶುಪಾಲ ಉಮೇಶ್ ಮಾತನಾಡಿ, ಕನ್ನಡದ ನೆಲ, ಜಲ ಮತ್ತು ಭಾಷೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅಭಿಮಾನ ಇರಬೇಕು ಎಂದರು. ಕನ್ನಡ ನಾಡು ನುಡಿಯ ಬಗ್ಗೆ ತಾಲೂಕು ಘಟಕದ ಕೆ.ಪಿ. ದಿನೇಶ್, ಗ್ರಾ.ಪಂ. ಮಾಜಿ ಸದಸ್ಯ ಕೆ.ಪಿ. ಮುತ್ತಪ್ಪ ಮಾತನಾಡಿದರು. ಮುಖ್ಯ ಶಿಕ್ಷಕ ಯಶ್ವಂತ್ ಸ್ವಾಗತಿಸಿದರೆ, ಶಿಕ್ಷಕ ಮಂಜುನಾಥ್ ನಿರೂಪಿಸಿ, ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಪ್ಪ ವಂದಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಡಿ.ಎಸ್. ಪೊನ್ನಪ್ಪ, ಐಗೂರು ಪ್ಯಾಕ್ಸ್ನ ಹೊನ್ನಪ್ಪ, ಶಿಕ್ಷಕ ವೃಂದದವರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.ಚೆಯ್ಯಂಡಾಣೆ: ವೀರಾಜಪೇಟೆಯ ಅನ್ವಾರುಲ್ ಹುದಾ ಪಬ್ಲಿಕ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲೆಯ ಪ್ರಾಂಶುಪಾಲ ಹಸೈನಾರ್ ಧ್ವಜಾರೋಹಣ ನೆರವೇರಿಸಿದರು.
ಶಾಲೆಯ ಶಿಕ್ಷಕ ಯಾಕೂಬ್ ರಿಜ್ಜಿ ಕನ್ನಡನಾಡು ಮತ್ತು ನುಡಿಯ ಮಹತ್ವದ ಕುರಿತು ಮಾತನಾಡಿ, ಕನ್ನಡದ ಗೌರವವನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ವಾಣಿಜ್ಯ ವಿಭಾಗದ ಮುಖ್ಯಸ್ಥ ಶರೀಫ್ ಅನ್ವಾರಿ ಪಾಲ್ಗೊಂಡು ಮಾತನಾಡಿ, ಕನ್ನಡನಾqಸಿದ್ದಾಪುರ: ಸಿದ್ದಾಪುರ ಗ್ರಾಮ ಪಂಚಾಯಿತಿ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಈ ಸಂದರ್ಭ ದಿನದ ಮಹತ್ವದ ಬಗ್ಗೆ ಗ್ರಾ.ಪಂ. ಅಧ್ಯಕ್ಷೆ ಪ್ರೇಮ ಗೋಪಾಲ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಪಳನಿಸ್ವಾಮಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ಆರ್. ಆಶಾಕುಮಾರಿ ಹಾಗೂ ಗ್ರಾ.ಪಂ. ಸದಸ್ಯರುಗಳು ಸಿಬ್ಬಂದಿ ಹಾಜರಿದ್ದರು.ÀÄ, ಭಾಷೆ, ಸಂಸ್ಕೃತಿ ಮತ್ತು ಕನ್ನಡದ ಇತಿಹಾಸದ ಕುರಿತು ವಿವರಿಸಿದರು.
ಈ ಸಂದರ್ಭ ಶಿಕ್ಷಕಿ ಜಯಂತಿ ಶಿಕ್ಷಕ ವೃಂದ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.