ಮಡಿಕೇರಿ: ಶಿಶು ಅಭಿವೃದ್ಧಿ ಯೋಜನೆ ಮಡಿಕೇರಿ ತಾಲೂಕಿನ ಅಂಗನವಾಡಿ ಕಾರ್ಯಕರ್ತೆ/ ಶಿಶು ಅಭಿವೃದ್ಧಿ ಯೋಜನೆ ಮಡಿಕೇರಿ ತಾಲೂಕಿನ ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರನ್ನು ಗುರುತಿಸಲು ಸರ್ಕಾರದ ನಿರ್ದೇಶನದಂತೆ ಕಾರ್ಯಕರ್ತೆ ಹುದ್ದೆಗೆ ದ್ವಿತೀಯ ಪಿ.ಯು.ಸಿ. ಯಲ್ಲಿ ತೆರ್ಗಡೆಯಾದ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಅಂಗನವಾಡಿ ಸಹಾಯಕಿ ಹುದ್ದೆಗೆ ಎಸ್.ಎಸ್.ಎಲ್.ಸಿ. ಉತ್ತೀರ್ಣರಾದ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಕಂದಾಯ ಗ್ರಾಮಗಳಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ತಾ. ೧೩ರ ಸಂಜೆ ೫.೩೦ ಗಂಟೆಯೊಳಗೆ ಅಥವಾ ಮುಂಚಿತವಾಗಿ ಅರ್ಜಿಗಳನ್ನು hಣಣಠಿs://ಞಚಿಡಿಟಿemಚಿಞಚಿoಟಿe.ಞಚಿಡಿ.ಟಿiಛಿ/ಚಿbಛಿಜ/ ನಲ್ಲಿ ಆನ್ಲೈನ್ ಮುಖಾಂತರ ಸಲ್ಲಿಸಲು ಸೂಚಿಸಿದೆ.
ಅರ್ಜಿಯೊಂದಿಗೆ (ಆನ್ಲೈನ್ನಲ್ಲಿ) ಜನನ ಪ್ರಮಾಣ ಪತ್ರ/ ಜನ್ಮ ದಿನಾಂಕವಿರುವ ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ, ತಹಶೀಲ್ದಾರರು/ ಉಪ ತಹಶೀಲ್ದಾರರಿಂದ ಪಡೆದ ಮೂರು ವರ್ಷದೊಳಗಿನ ವಾಸಸ್ಥಳ ದೃಡೀಕರಣ ಪತ್ರ ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ, ಪತಿಯ ಮರಣ ಪ್ರಮಾಣಪತ್ರ ಹಾಗೂ ವಿಧವಾ ಪ್ರಮಾಣ ಪತ್ರ (ವಿಧವಾ ವೇತನದ ದೃಢೀಕರಣವನ್ನು ಪರಿಗಣಿಸುವುದಿಲ್ಲ), ಅಂಗವಿಕಲತೆ ಪ್ರಮಾಣ ಪತ್ರ (ಅಂಗವಿಕಲ ವೇತನದ ದೃಢೀಕರಣವನ್ನು ಪರಿಗಣಿಸುವುದಿಲ್ಲ), ವಿಚ್ಛೇದಿತರಾಗಿದ್ದಲ್ಲಿ ವಿಚ್ಛೇಧನ ಪ್ರಮಾಣ ಪತ್ರ. (ನ್ಯಾಯಾಲಯದಿಂದ ವಿಚ್ಛೇಧನ ಪತ್ರ), ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನಡೆಸಲ್ಪಟ್ಟ ಮಾಜಿ ದೇವದಾಸಿಯರ ಸಮೀಕ್ಷೆಯ ಪಟ್ಟಿಯಲ್ಲಿರುವ ಮಾಜಿ ದೇವದಾಸಿಯರ ಮಕ್ಕಳು ಎಂಬುದರ ಬಗ್ಗೆ ಮಹಿಳಾ ಅಭಿವೃದ್ಧಿಗಳಿಂದ ಪಡೆದ ಪ್ರಮಾಣ ಪತ್ರ, ಇಲಾಖಾ ಸುಧಾರಣಾ ಸಂಸ್ಥೆ/ ರಾಜ್ಯ ಮಹಿಳಾ ನಿಲಯಗಳ ನಿವಾಸಿಗಳು ಕನಿಷ್ಟ ೩ ವರ್ಷ ಸಂಸ್ಥೆಯಲ್ಲಿರಬೇಕು. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಂದ ಪಡೆದ ನಿವಾಸಿ ಪ್ರಮಾಣ ಪತ್ರ, ಯೋಜನಾ ನಿರಾಶ್ರಿತರ ಬಗ್ಗೆ ತಹಶೀಲ್ದಾರ್ ಅವರಿಂದ ಪಡೆದ ಪ್ರಮಾಣ ಪತ್ರ, ಆಧಾರ್ ಕಾರ್ಡ್/ ಮತದಾರರ ಗುರುತಿನ ಚೀಟಿ/ ರೇಷನ್ ಕಾರ್ಡ್, ಎಲ್ಲಾ ದಾಖಲಾತಿಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಣ ಮಾಡಿಸಿ ಸಲ್ಲಿಸಬೇಕು.
ಅಭ್ಯರ್ಥಿಗಳು ಸಲ್ಲಿಸಲಾದ ಅಗತ್ಯ ದಾಖಲಾತಿಗಳಾದ ಅಂಕಪಟ್ಟಿ, ವಾಸಸ್ಥಳ ದೃಢೀಕರಣ ಪತ್ರ, ಜಾತಿ ದೃಢೀಕರಣ ಪತ್ರಗಳು ಹಾಗೂ ಇತರೆ ದಾಖಲಾತಿಗಳು ಕ್ರಮಬದ್ದವಾಗಿದ್ದಲ್ಲಿ ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಹಾಗೂ ಬೋನಸ್ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆಯನ್ನು ನಿಯಮಾನುಸಾರ ನಿರ್ಧರಿಸಲಾಗುವುದು ಮತ್ತು ಯಾವುದೇ ಸಂದರ್ಶನ ಪ್ರಕ್ರಿಯೆ ಇರುವುದಿಲ್ಲ.
ಇಲಾಖೆ ಕಾಲಕಾಲಕ್ಕೆ ಹೊರಡಿಸುವ ಆದೇಶಗಳಿಗೆ ಅನುಗುಣವಾಗಿ ಬದಲಾವಣೆ/ ಮಾರ್ಪಡಿಗೆ ಒಳಪಟ್ಟಿರುತ್ತದೆ. ನೇಮಕಾತಿಗೆ ಸಂಬAಧಿಸಿದAತೆ ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮ ತೀರ್ಮಾನವಾಗಿದೆ. ಆಯ್ಕೆಯಾದ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಹೆಯಾನ ರೂ. ೧೨ ಸಾವಿರ ಗೌರವಧನ ಪಾವತಿಸಲಾಗುವುದು. ಹಾಗೂ ಸಹಾಯಕಿಯರಿಗೆ ರೂ. ೬ ಸಾವಿರ ಗೌರವಧನ ಪಾವತಿಸಲಾಗುವುದು ಎಂದು ಮಡಿಕೇರಿ ಶಿಶು ಅಭಿವೃದ್ಧಿಯ ಯೋಜನಾಧಿಕಾರಿ ಅವರು ತಿಳಿಸಿದ್ದಾರೆ.ಮಡಿಕೇರಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ೧೩ ಫಲಾನುಭವಿ ಆಧಾರಿತ ಯೋಜನೆಗಳನ್ನು ೨೦೨೫-೨೬ ನೇ ಸಾಲಿನಲ್ಲಿ ಸೇವಾ ಸಿಂಧು ಆನ್ಲೈನ್ ತಂತ್ರಾAಶದಡಿ ಆಳವಡಿಸಲಾಗಿರುತ್ತದೆ.
ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿ ಚಾಲಿತ ವೀಲ್ಚೇರ್, ಸಾಧನೆ ಮತ್ತು ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ದೃಷ್ಠಿದೋಷ ಹೊಂದಿರುವ ವಿಕಟಚೇತನರಿಗೆ ಬ್ರೆöÊಲ್ಕಿಟ್ ಯೋಜನೆ, ಸಾಧನ ಸಲಕರಣೆ ಯೋಜನೆ ಈ ಯೋಜನೆಗಳಿಗೆ ೨೦೨೫-೨೬ ನೇ ಸಾಲಿಗೆ ವಿಕಲಚೇತನ ಫಲಾನುಭವಿಗಳು ಆನ್ಲೈನ್ ಮೂಲಕ hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ/Sevಚಿsiಟಿಜhu/ಞಚಿಡಿಟಿಟಿಚಿಜಚಿ ಪೋರ್ಟ್ಲ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನವೆಂಬರ್ ೧೫ ವರೆಗೆ ವಿಸ್ತರಣೆ ಮಾಡಲಾಗಿದೆ.
ಹೆಚ್ಚಿನ ಮಾಹಿತಿಗೆ ಜಿಲ್ಲೆಯ ಗ್ರಾಮ ಪಂಚಾಯತ್ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿಆರ್ಡಬ್ಲುö್ಯ ಹಾಗೂ ತಾಲೂಕು ಪಂಚಾಯತ್ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಂ.ಆರ್.ಡಬ್ಲುö್ಯ. ಗಳಾದ ಸೋಮವಾಪೇಟೆ ಹಾಗೂ ಕುಶಾಲನಗರ ತಾಲೂಕಿನ ಹರೀಶ್ ಟಿ.ಆರ್ ಮೊ.ಸಂ.೮೮೬೧೪೨೮೯೩೧, ವೀರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನ ಪ್ರಥನ್ ಕುಮಾರ್ ಸಿ.ಬಿ ಮೊ.ಸಂ.೯೯೦೦೮೮೩೬೫೪ ಹಾಗೂ ಮಡಿಕೇರಿ ತಾಲ್ಲೂಕಿನ ರಾಜೇಶ್ ಮೊ.ಸಂ.೮೦೭೩೧೯೨೯೧೪ ಸಂಖ್ಯೆಗಳನ್ನು ಹಾಗೂ ಕಛೇರಿ ದೂರವಾಣಿ ಸಂಖ್ಯೆ ೦೮೨೭೨-೨೯೫೮೨೯ ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.ಮಡಿಕೇರಿ: ೨೦೨೫-೨೬ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ (ಪಿ.ಯು.ಸಿ. ಹೊರತುಪಡಿಸಿ) ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-೧ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ "ವಿದ್ಯಾರ್ಥಿವೇತನ, ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ, ಹಾಗೂ ಶುಲ್ಕ ವಿನಾಯಿತಿ ಸೌಲಭ್ಯಕ್ಕಾಗಿ" ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ತಾ. ೧೫ ರವರೆಗೆ ವಿಸ್ತರಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ: hಣಣಠಿs://ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ/ ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್ಸೈಟ್ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ನ್ನು ಹಾಗೂ ಇಲಾಖಾ ಸಹಾಯವಾಣಿ ಸಂಖ್ಯೆ: ೮೦೫೦೭೭೦೦೦೫ ಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದ ಸಹಾಯವಾಣಿ ಇಮೇಲ್: ಠಿosಣmಚಿಣಡಿiಛಿheಟಠಿ@ಞಚಿಡಿಟಿಚಿಣಚಿಞಚಿ.gov.iಟಿ ದೂರವಾಣಿ ಸಂಖ್ಯೆ: ೦೮೨೭೨-೨೯೫೬೨೮ ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎ.ಎಸ್. ದೀಪಕ್ ಅವರು ತಿಳಿಸಿದ್ದಾರೆ.